Asianet Suvarna News

'ಯಡಿಯೂರಪ್ಪನವರನ್ನುಇಟ್ಕೊಳ್ತೀರಾ..? ಕಿತ್ತು ಹಾಕ್ತೀರಾ..?'

* ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ಆಂತರಿಕೆ ಬೆಳವಣಿಗೆಗೆ ಸಿದ್ದರಾಮಯ್ಯ ವ್ಯಂಗ್ಯ..
 * ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್..
* ಬಿಜೆಪಿ ನಾಯಕರಿಗೆ ವ್ಯಂಗ್ಯವಾಗಿ ಕಿವಿ‌ ಮಾತು ಹೇಳಿದ ಸಿದ್ದು

Siddaramaiah Hits out at Karnataka BJP and Govt rbj
Author
Bengaluru, First Published Jun 16, 2021, 7:58 PM IST
  • Facebook
  • Twitter
  • Whatsapp

ಬೆಂಗಳೂರು, (ಜೂನ್.16): ರಾಜ್ಯ ಬಿಜೆಪಿಯಲ್ಲಿ ಅಸಮಾಧಾನಗಳನ್ನ ಶಮನ ಮಾಡಲು ಉಸ್ತುವಾರಿ ಅರುಣ್ ಸಿಂಗ್ ಕರ್ನಾಟಕಕ್ಕೆ ಆಗಮಿಸಿದ್ದು, ಬಿಜೆಪಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇನ್ನು ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ಆಂತರಿಕೆ ಬೆಳವಣಿಗೆಗೆ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದು, ಕೊರೋನಾ ವಿರುದ್ಧ ನಿರ್ಣಾಯಕ ಹೋರಾಟ ನಡೆಸಲು ರಾಜ್ಯಕ್ಕೆ ಸುಭದ್ರ ಸರ್ಕಾರದ ಅಗತ್ಯ ಇದೆ. ಯಡಿಯೂರಪ್ಪ  ಅವರನ್ನು ಇಟ್ಟುಕೊಳ್ತಿರಾ? ಕಿತ್ತುಹಾಕ್ತೀರಾ? ಬಿಜೆಪಿಗೆ ಸಂಬಂಧಿಸಿದ ವಿಚಾರ. ಶೀಘ್ರ ನಿರ್ಧಾರಕ್ಕೆ ಬಂದು ರಾಜ್ಯಕ್ಕೊಂದು ಸುಭದ್ರವಾದ ಸರ್ಕಾರ ಕೊಡಿ, ಇಲ್ಲದಿದ್ದರೆ ರಾಜೀನಾಮೆ ಕೊಟ್ಟು ತೊಲಗಿಹೋಗಿ ಎಂದು ಕಿಡಿಕಾರಿದ್ದಾರೆ.

ಅಜ್ಜಿಗೆ ಅರಿವೆ ಚಿಂತೆ, ಮೊಮ್ಮಗಳಿಗೆ ಡಾಬಿನ ಚಿಂತೆ: ಅರುಣ್ ಸಿಂಗ್ ಆಗಮನಕ್ಕೆ ಕೈ ಟೀಕೆ

ಪಕ್ಷಾಂತರಿಗಳ ಅನೈತಿಕ ಬಲದಿಂದ ಬಂದ ಅಧಿಕಾರವನ್ನು ಅನುಭವಿಸುತ್ತಿರುವ ಬಿಜೆಪಿ, ಮೂಲ ನಿವಾಸಿ ನಾಯಕರು ಈಗ ಅವರ ವಿರುದ್ಧವೇ ತಿರುಗಿ ಬಿದ್ದಿರುವುದು ಪ್ರಕೃತಿಯ ಸಹಜ ನ್ಯಾಯವೇ ಸರಿ. ಈಗಲೂ ಕಾಲ ಮಿಂಚಿಲ್ಲ, ಇಂತಹ ಅನೈತಿಕ ಬೆಂಬಲ ಬೇಡವೆಂದಾದರೆ ಪಕ್ಷಾಂತರಿಗಳನ್ನು ಕಿತ್ತು ಹಾಕಿ, ಯಾಕೆ ಗೋಳಾಡುತ್ತೀರಿ? ಎಂದು ಟ್ವೀಟ್ ಮಾಡಿದ್ದಾರೆ.

ಮುನಿದಿರುವ ಪ್ರಕೃತಿ, ಅಲ್ಪ ದಯೆತೋರುತ್ತಿರುವ ಕಾರಣದಿಂದಾಗಿಯೋ ಏನೋ, ಕೊರೋನಾ ಸೋಂಕು ಸ್ವಲ್ಪ ತಹಬಂದಿಗೆ ಬರುತ್ತಿದೆ.
ಅಷ್ಟರಲ್ಲಿ ಬಿಜೆಪಿ ಸರ್ಕಾರದಲ್ಲಿ ಭಿನ್ನಮತದ ಜಗಳ ತಾರಕಕ್ಕೇರಿ ಆಡಳಿತ ಯಂತ್ರ ಸಂಪೂರ್ಣ ಸ್ಥಬ್ಧವಾಗಿರುವುದು ರಾಜ್ಯದ ಜನರ ದೌರ್ಭಾಗ್ಯ ಎಂದಿದ್ದಾರೆ.

Follow Us:
Download App:
  • android
  • ios