ಸಿದ್ದರಾಮಯ್ಯ ಮರ್ಯಾದೆ ಇಲ್ಲದ ಬೇಜವಾಬ್ದಾರಿ ಸಿಎಂ: ಶೋಭಾ ಕರಂದ್ಲಾಜೆ
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮರ್ಯಾದೆ ಇಲ್ಲದ ಬೇಜವಾಬ್ದಾರಿ ಮುಖ್ಯಮಂತ್ರಿ ಎಂದು ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಆರೋಪಿಸಿದ್ದಾರೆ.
ಚಿಕ್ಕಮಗಳೂರು (ಜೂ.22): ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮರ್ಯಾದೆ ಇಲ್ಲದ ಬೇಜವಾಬ್ದಾರಿ ಮುಖ್ಯಮಂತ್ರಿ ಎಂದು ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಆರೋಪಿಸಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಗೂ ಮುನ್ನ ಗ್ಯಾರಂಟಿಗಳನ್ನ ಘೋಷಿಸುವಾಗ ನಿಮ್ಮ ತಲೆಯಲ್ಲಿ ಏನಿತ್ತು. ಮೆದುಳು ಇರಲಿಲ್ಲವಾ. ಸಗಣಿ ತುಂಬಿತ್ತ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು. ಮೋದಿ ಅಕ್ಕಿ ಸೇರಿ ನೀವು 10 ಕೆಜಿ ಅಕ್ಕಿ ಕೊಡೋದಲ್ಲ. ಕೇಂದ್ರ ಸರ್ಕಾರದ 5 ಕೆಜಿ ಅಕ್ಕಿ ಜೊತೆ ನೀವು ಘೋಷಿಸಿ ರುವಂತೆ 10 ಕೆಜಿ ಅಕ್ಕಿ ಕೊಡಿ. ಅಂದರೆ, ಒಬ್ಬರಿಗೆ ತಲಾ15 ಕೆಜಿ ಅಕ್ಕಿ ಕೊಡಬೇಕು. ಅಕ್ಕಿ ಕೊಡಲು ಆಗದಿದ್ದರೆ ಅಧಿಕಾರ ಬಿಟ್ಟು ತೊಲಗಿ ಎಂದು ಆಗ್ರಹಿಸಿದರು.
ಒಂದೇ ತಿಂಗಳಿಗೆ ರಾಜ್ಯದಲ್ಲಿ ಅರಾಜಕತೆ ತುಂಬಿದೆ. ಕಾಂಗ್ರೆಸ್ಸಿಗರಿಗೆ ಮಾನ, ಮರ್ಯಾದೆ ಇಲ್ಲ ಎಂದ ಅವರು, ವೋಟು ಹಾಕಿಸಿಕೊಂಡು ಜನರಿಗೆ ಮೋಸ ಮಾಡಿದ್ದೀರಾ, ಸಿದ್ದರಾಮಯ್ಯನವರೇ ನಿಮ್ಮ ಬೇಜವಾಬ್ದಾರಿ ಹೇಳಿಕೆಗಳನ್ನು ವಾಪಸ್ಸು ತೆಗೆದುಕೊಳ್ಳಿ ಎಂದು ಆಗ್ರಹಿಸಿದರು. ಚುನಾವಣೆಯಲ್ಲಿ ಗೆಲ್ಲುವುದಕ್ಕೆ ಇಲ್ಲ ಸಲ್ಲದ ಭರವಸೆ, ಆಸೆ ತೋರಿಸಿದ್ದರು. ಮಹಿಳೆಯರಿಗೆ ಬಸ್‌್ಸಗಳಲ್ಲಿ ಪಾಸ್ ಕೇಳುತ್ತಿದ್ದಾರೆ. ಸರ್ಟಿಫಿಕೇಟ್ ಕೇಳ್ತಿದ್ದಾರೆ. ನಾನು ಮಹಿಳೆ ಅನ್ನೋದಕ್ಕೆ ನನಗೆ ಸರ್ಟಿಫಿಕೇಟ್ ಬೇಕಿಲ್ಲ ಎಂದು ಸರ್ಕಾರದ ವಿರುದ್ಧ ವ್ಯಂಗ್ಯವಾಡಿದರು.
‘ಸರ್ವರ್ ಹ್ಯಾಕ್’ ರಾಜಕೀಯ ಹೇಳಿಕೆ ಅಷ್ಟೆ: ಸಚಿವ ಸತೀಶ್ ಜಾರಕಿಹೊಳಿ
ಅಕ್ಕಿ ಕೊಡೋದಕ್ಕೆ ಕೇಂದ್ರ ಸರ್ಕಾರ ಕೊಡುತ್ತಿಲ್ಲ ಎನ್ನುತ್ತಿದ್ದಾರೆ. ಈಗ ಯಾಕೆ ನೀವು ಮೋದಿ ಕಡೆ ಬೆರಳು ತೋರಿಸುತ್ತೀರಾ. ಯಾವುದೇ ಮುಂದಾಲೋಚನೆ ಇಲ್ಲದೆ ಘೋಷಿಸಿ, ಇವತ್ತು ಮೋದಿ ಕಡೆ ತೋರಿಸುತ್ತಿದ್ದೀರಾ. ನಾವು ಅಂದೇ ಕೇಳಿದ್ದೆವು ಇವಕ್ಕೆಲ್ಲಾ ಹಣ ಎಲ್ಲಿಂದ ತರುತ್ತೀರಾ ಎಂದು, ಅಂದು ಸುಮ್ಮನಿದ್ದು ಇಂದು ಅಕ್ಕಿ, ದುಡ್ಡು, ವಿದ್ಯುತ್ ಎಲ್ಲದಕ್ಕೂ ಮೋದಿ ಕಡೆ ತೋರಿಸುವುದಾದರೆ ಅಂದು ನೀವು ಗ್ಯಾರಂಟಿ ಕಾರ್ಡ್ ಏಕೆ ಹಂಚಿದ್ರಿ, ಯಾರಿಗೆ ಮೋಸ ಮಾಡಿ, ಯಾರ ಮೂಗಿಗೆ ತುಪ್ಪ ಸವರಲು ಹಂಚಿದ್ರಿ ಎಂದು ಪ್ರಶ್ನಿಸಿದ ಅವರು ಬಫರ್ ಸ್ಟಾಕ್ ಇರೋದು, ನೆರೆ, ಬರ, ಯುದ್ಧದ ಸಂದರ್ಭದಲ್ಲಿ ಜನರ ಬಳಕೆಗೆ. ನಿಮಗೆ ಅಕ್ಕಿ ಬೇಕಾದರೆ ಬೇರೆ ರಾಜ್ಯದಲ್ಲಿ ಖರೀದಿಸಿ, ನಮ್ಮ ರಾಜ್ಯದ ರೈತರೇ ಅಕ್ಕಿಯನ್ನು ಮಾರುತ್ತಾರೆ. ಅವರ ಬಳಿ ಖರೀದಿಸಿ ಎಂದು ಸಲಹೆ ನೀಡಿದರು.
ಲೋಕಸಭಾ ಚುನಾವಣೆ: ಬೆಂಗಳೂರು ಗ್ರಾಮಾಂತರ ಕ್ಷೇತ್ರ ಟಿಕೆಟ್ ಯೋಗೇಶ್ವರ್‌ಗೆ?
ಯುವ ಜನತೆಯಿಂದ ದೇಶ ಸದೃಢ: ಭಾರತವನ್ನು ಎಲ್ಲಾ ರಂಗಗಳಲ್ಲಿ ವಿಶ್ವದ ಮುಂಚೂಣಿಗೆ ತರುವ, ದೇಶವನ್ನು ವಿಶ್ವದ ಸದೃಢ ರಾಷ್ಟವನ್ನಾಗಿ ಮಾಡುವ ಜವಾಬ್ದಾರಿ ಯುವಜನರ ಮೇಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಬುಧವಾರ ನಗರದ ಪೂರ್ಣಪ್ರಜ್ಞ ಕಾಲೇಜಿನ ಸಭಾಂಗಣದಲ್ಲಿ ಜಿಲ್ಲಾಡಳಿತ ಮತ್ತು ನೆಹರು ಯುವ ಕೇಂದ್ರಗಳ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಯುವ ಉತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಶಾಸಕ ಯಶ್ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ನೆಹರು ಯುವ ಕೇಂದ್ರದ ನಿರ್ದೇಶಕ ನಟರಾಜ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಪು ಶಾಸಕ ಗುರ್ಮೆ ಸುರೇಶ್ ಪಿ ಶೆಟ್ಟಿ, ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ, ಜಿಲ್ಲಾ ಯುವ ಅಧಿಕಾರಿ ಯಶ್ವಂತ್ ಯಾದವ್ ಮತ್ತಿತರರು ಉಪಸ್ಥಿತರಿದ್ದರು. ಪೂರ್ಣಪ್ರಜ್ಞ ಕಾಲೇಜಿನ ಪ್ರಾಂಶುಪಾಲ ಡಾ. ರಾಘವೇಂದ್ರ ಪ್ರತಿಜ್ಞಾ ವಿಧಿ ಭೋಧಿಸಿದರು.