ಸಿದ್ದರಾಮಯ್ಯ ಒಬ್ಬ ಪಲಾಯನವಾದಿ, ಸೋಲಿನ ಭೀತಿ ಕಾಡುತ್ತಿದೆ: ಶ್ರೀನಿವಾಸ ಪ್ರಸಾದ್
ಇಷ್ಟಾದರೂ ವರುಣಗೆ ಕೇವಲ ನಾಮಪತ್ರ ಸಲ್ಲಿಸಲು ಮಾತ್ರ ಬರುತ್ತೇನೆ. ಚುನಾವಣೆ ಪ್ರಚಾರಕ್ಕೆ ಬರುವುದಿಲ್ಲ ಎಂದು ಧಿಮಾಕಿನಿಂದ ಹೇಳುತ್ತಿದ್ದಾರೆ. ಇಂತಹ ಧಿಮಾಕಿನ ಮಾತಿನಿಂದಲೇ ಸಿದ್ದರಾಮಯ್ಯಗೆ ಸೋಲಾಗಲಿದೆ ಎಂದು ಕುಟುಕಿದ ಶ್ರೀನಿವಾಸ ಪ್ರಸಾದ್.
ಮೈಸೂರು(ಏ.06): ಸಿದ್ದರಾಮಯ್ಯ ಒಬ್ಬ ಪಲಾಯನವಾದಿ. ಅವರಿಗೆ ಸೋಲಿನ ಭೀತಿ ಕಾಡುತ್ತಿದೆ ಎಂದು ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ಟೀಕಿಸಿದರು. ಮೈಸೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಷ್ಟಾದರೂ ವರುಣಗೆ ಕೇವಲ ನಾಮಪತ್ರ ಸಲ್ಲಿಸಲು ಮಾತ್ರ ಬರುತ್ತೇನೆ. ಚುನಾವಣೆ ಪ್ರಚಾರಕ್ಕೆ ಬರುವುದಿಲ್ಲ ಎಂದು ಧಿಮಾಕಿನಿಂದ ಹೇಳುತ್ತಿದ್ದಾರೆ. ಇಂತಹ ಧಿಮಾಕಿನ ಮಾತಿನಿಂದಲೇ ಸಿದ್ದರಾಮಯ್ಯಗೆ ಸೋಲಾಗಲಿದೆ ಎಂದು ಕುಟುಕಿದರು.
ಸಿದ್ದರಾಮಯ್ಯ ಅವರಿಗೆ ಇನ್ನೂ ಸೋಲಿನ ಭೀತಿ ಕಾಡುತ್ತಿದೆ. ಹೀಗಾಗಿ ವರುಣ ಜತೆಗೆ ಕೋಲಾರದಲ್ಲೂ ಸ್ಪರ್ಧೆಗೆ ಮುಂದಾಗಿದ್ದಾರೆ. ವರುಣದಲ್ಲಿ ಸಿದ್ದರಾಮಯ್ಯ ಗೆಲ್ಲುವುದು ಸುಲಭÜವಲ್ಲ. ಹೀಗಾಗಿ ಕೋಲಾರದಿಂದಲೂ ಟಿಕೆಟ್ ಕೇಳುತ್ತಿದ್ದಾರೆ. ವರುಣದಲ್ಲಿ ಗೆಲ್ಲುವ ವಿಶ್ವಾಸ ಇಲ್ಲದ ಕಾರಣ ಕೋಲಾರದಿಂದಲೂ ಟಿಕೆಟ್ ಕೇಳುತ್ತಿದ್ದಾರೆ ಎಂದರು.
ನನ್ನ ಬಳಿ ಹಣವಿಲ್ಲ, ನಾನು ಭಿಕ್ಷೆ ಬೇಡುತ್ತಿದ್ದೇನೆ: ಪ್ರಮೋದ್ ಮುತಾಲಿಕ್
ಬಿಜೆಪಿ ಸ್ಪಷ್ಟ ಬಹುಮತ
ನಟ ಸುದೀಪ್, ಸಂಸದೆ ಸುಮಲತಾ ಅಂಬರೀಷ್ ಅವರು ಬಿಜೆಪಿಗೆ ಬೆಂಬಲ ನೀಡಿರುವುದರಿಂದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಅನುಕೂಲವಾಗಲಿದೆ. ಮಾಜಿ ಸಚಿವ ಎಲ್.ಆರ್. ಶಿವರಾಮೇಗೌಡ ಸೇರಿದಂತೆ ಹಲವು ಮುಖಂಡರು ಬಿಜೆಪಿಗೆ ಸೇರಿರುವುದು ಒಳ್ಳೆಯ ಬೆಳವಣಿಗೆ. ಹಳೇ ಮೈಸೂರು ಭಾಗದಲ್ಲಿ ಈ ಬಾರಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲ್ಲು ಪಕ್ಷ ಪ್ರಯತ್ನ ಮಾಡಿರುವುದು ಫಲ ನೀಡಲಿದೆ. ಜತೆಗೆ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟಬಹುಮತ ಗಳಿಸಲಿದೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ರಾಜ್ಯದಲ್ಲೂ ಬಿಜೆಪಿ ಅಧಿಕಾರ ಉಳಿಸಿಕೊಳ್ಳಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಶ್ರೀನಿವಾಸಪ್ರಸಾದ್ ಆಶೀರ್ವಾದ ಪಡೆದ ಚಿಕ್ಕಣ್ಣ ಪುತ್ರ
ಎಚ್.ಡಿ. ಕೋಟೆ ವಿಧಾನಸಭೆ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಲು ಆಕಾಂಕ್ಷಿಯಾಗಿರುವ ಮಾಜಿ ಶಾಸಕ ಚಿಕ್ಕಣ್ಣ ಅವರ ಪುತ್ರ ಜಯಪ್ರಕಾಶ್ ತಮ್ಮ ತಂದೆಯೊಂದಿಗೆ ಸಂಸದ ವಿ. ಶ್ರೀನಿವಾಸಪ್ರಸಾದ್ ಅವರ ನಿವಾಸಕ್ಕೆ ಬುಧವಾರ ಭೇಟಿ ನೀಡಿ ಆಶೀರ್ವಾದ ಪಡೆದರು. ಚಿಕ್ಕಣ್ಣ ಹಾಗೂ ಅವರ ಪುತ್ರ ನಮ್ಮ ಮನೆಗೆ ಆಗಮಿಸಿದ್ದು ಸೌಜನ್ಯದ ಭೇಟಿಯಷ್ಟೇ. ಚಿಕ್ಕಣ್ಣ ಅವರ ಪುತ್ರ ಜಯಪ್ರಕಾಶ್ ಚುನಾವಣೆಗೆ ಸ್ಪರ್ಧಿಸುತ್ತಿರುವುದರಿಂದ ಆಶೀರ್ವಾದ ಪಡೆದುಕೊಂಡು ಹೋಗಲು ಬಂದಿದ್ದರು ಎಂದು ಶ್ರೀನಿವಾಸ ಪ್ರಸಾದ್ ಸ್ಪಷ್ಟಪಡಿಸಿದರು.
ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.