ಕೋಲಾರ, ವರುಣಾ ಎರಡೂ ಕಡೆ ಸ್ಪರ್ಧೆಗೆ ಸಿದ್ದರಾಮಯ್ಯ ಸಿದ್ಧತೆ: ಹೈಕಮಾಂಡ್‌ನಿಂದಲೂ ಒಪ್ಪಿಗೆ ಸಾಧ್ಯತೆ

ಕಾಂಗ್ರೆಸ್‌ ಮುಖಂಡ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ವ್ಯಕ್ತಪಡಿಸಿರುವ ಕೋಲಾರ ಹಾಗೂ ವರುಣ ಎರಡು ಕ್ಷೇತ್ರದಲ್ಲೂ ಸ್ಪರ್ಧಿಸುವ ಬಯಕೆಯನ್ನು ಹೈಕಮಾಂಡ್‌ ಪುರಸ್ಕರಿಸುವ ಸಾಧ್ಯತೆಗಳು ಹೆಚ್ಚಿದೆ.

Siddaramaiah is preparing to contest in both Kolar and Varuna gvd

ಬೆಂಗಳೂರು/ಮೈಸೂರು/ಚಿತ್ರದುರ್ಗ (ಮಾ.25): ಕಾಂಗ್ರೆಸ್‌ ಮುಖಂಡ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ವ್ಯಕ್ತಪಡಿಸಿರುವ ಕೋಲಾರ ಹಾಗೂ ವರುಣ ಎರಡು ಕ್ಷೇತ್ರದಲ್ಲೂ ಸ್ಪರ್ಧಿಸುವ ಬಯಕೆಯನ್ನು ಹೈಕಮಾಂಡ್‌ ಪುರಸ್ಕರಿಸುವ ಸಾಧ್ಯತೆಗಳು ಹೆಚ್ಚಿದ್ದು, ಹೀಗಾದಲ್ಲಿ ಕಾಂಗ್ರೆಸ್‌ನ ಮೊದಲ ಪಟ್ಟಿಯಲ್ಲಿ ಸಿದ್ದರಾಮಯ್ಯ ಅವರ ಹೆಸರು ಈ ಎರಡೂ ಕ್ಷೇತ್ರಗಳಿಗೆ ಪ್ರಕಟವಾಗಲಿದೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ. ರಿಸ್ಕ್‌ ಇರುವ ಕ್ಷೇತ್ರದಲ್ಲಿ ಸ್ಪರ್ಧೆ ಬೇಡ. ಸಾಧ್ಯವಾದಷ್ಟುಸುರಕ್ಷಿತ ಇರುವ ಕ್ಷೇತ್ರದಲ್ಲಿ ಸ್ಪರ್ಧಿಸಿ ಎಂದು ಖುದ್ದು ರಾಹುಲ್‌ ಗಾಂಧಿ ಅವರ ಸಲಹೆಯಿಂದಾಗಿ ಕೋಲಾರದಲ್ಲಿ ಸ್ಪರ್ಧಿಸುವ ಬಗ್ಗೆ ಸಿದ್ದರಾಮಯ್ಯ ಅವರಿಗೆ ಗೊಂದಲ ಉಂಟಾಗಿತ್ತು. ಆದರೆ, ಕಡೇ ಕ್ಷಣದಲ್ಲಿ ಕೋಲಾರದಲ್ಲಿ ಸ್ಪರ್ಧಿಸದಿದ್ದರೆ ತಪ್ಪು ಸಂದೇಶ ಹೋಗುತ್ತದೆ ಎಂಬ ಚಿಂತೆಯೂ ಕಾಡಿತ್ತು.

ಹಾಗಂತ ಸುರಕ್ಷಿತ ಕ್ಷೇತ್ರವೆನಿಸಿದ ವರುಣದಿಂದ ಸ್ಪರ್ಧಿಸುವಂತೆ ರಾಹುಲ್‌ ಗಾಂಧಿ ನೀಡಿದ್ದ ಸಲಹೆಯನ್ನೂ ಮೀರುವಂತಿಲ್ಲದ ಕಾರಣ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ತಮ್ಮ ಆಕಾಂಕ್ಷೆಯ ಬಗ್ಗೆ ಹೈಕಮಾಂಡ್‌ಗೆ ಸಿದ್ದರಾಮಯ್ಯ ಅವರು ಗುರುವಾರ ಸಂದೇಶ ರವಾನಿಸಿದ್ದರು ಎಂದು ಹೇಳಲಾಗುತ್ತಿದೆ. ಸಿದ್ದರಾಮಯ್ಯ ಅವರ ಈ ನಿಲುವಿಗೆ ತಮ್ಮ ಪುತ್ರ ಡಾ.ಯತೀಂದ್ರ ಅವರ ಕ್ಷೇತ್ರ ವರುಣ ಹಾಗೂ ಕೋಲಾರ ಎರಡೂ ಕ್ಷೇತ್ರಗಳಿಂದ ಸ್ಪರ್ಧಿಸಿದಾಗ ಒಂದು ವೇಳೆ ಎರಡು ಕ್ಷೇತ್ರಗಳಲ್ಲೂ ಗೆದ್ದರೆ ಆಗ ವರುಣ ಕ್ಷೇತ್ರವನ್ನು ಮತ್ತೆ ಡಾ.ಯತೀಂದ್ರಗೆ ಬಿಟ್ಟುಕೊಡುವ ಚಿಂತನೆ ಕಾರಣ ಎಂದು ವ್ಯಾಖ್ಯಾನಿಸಲಾಗುತ್ತಿದೆ.

ಕೋಲಾರದಲ್ಲಿ ಸ್ಪರ್ಧಿಸದಂತೆ ಹೈಕಮಾಂಡ್‌ ಹೇಳಿಲ್ಲ: ಸಿದ್ದರಾಮಯ್ಯ

2 ಕ್ಷೇತ್ರಗಳಿಂದ ಸ್ಪರ್ಧೆಯ ಇಂಗಿತ- ಯತೀಂದ್ರ: ಈ ನಡುವೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಅವರು, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೋಲಾರ ಮತ್ತು ವರುಣ ಎರಡೂ ಕ್ಷೇತ್ರದಲ್ಲೂ ಸ್ಪರ್ಧಿಸುವ ಇಂಗಿತ ಹೊಂದಿದ್ದಾರೆ ಎಂದು ಹೇಳಿದರು. ಇದಕ್ಕೆ ಪುಷ್ಟಿನೀಡುವಂತೆ ಚಿತ್ರದುರ್ಗದಲ್ಲಿ ಮಾತನಾಡಿರುವ ಸಿದ್ದರಾಮಯ್ಯ, ‘ನಮ್ಮ ಮನೆಯಲ್ಲಿ ವರುಣದಿಂದ ಸ್ಪರ್ಧಿಸುವಂತೆ ಹೇಳಿದ್ದಾರೆ. ಇದಲ್ಲದೆ ಇನ್ನೊಂದು ಕ್ಷೇತ್ರದಲ್ಲೂ ಸ್ಪರ್ಧಿಸುವಂತೆ ಹೇಳುತ್ತಿದ್ದಾರೆ. ರಾಜ್ಯದ 25 ಕ್ಷೇತ್ರಗಳಲ್ಲೂ ನನಗೆ ಸ್ಪರ್ಧಿಸುವಂತೆ ಆಹ್ವಾನವಿದೆ. ಎಲ್ಲಾ ನಿರ್ಧಾರ ಹೈಕಮಾಂಡ್‌ಗೆ ಬಿಟ್ಟಿದ್ದೇನೆ’ ಎಂದು ಹೇಳಿದ್ದಾರೆ.

ಯತೀಂದ್ರ ಮಾತನಾಡಿ, ‘ಹೈಕಮಾಂಡ್‌ ಕೋಲಾರ ಬೇಡ ವರುಣದಲ್ಲಿ ಸ್ಪರ್ಧಿಸಿ ಅಂತ ಹೇಳಿತ್ತು. ಈ ಸಮಯದಲ್ಲಿ ಕೋಲಾರ ಕ್ಷೇತ್ರದಿಂದ ಹಿಂದೆ ಸರಿದರೆ ಕಾಂಗ್ರೆಸ್‌ಗೆ ಹಿನ್ನಡೆ ಆಗುತ್ತೆ ಎಂದು ಅಲ್ಲಿನ ನಾಯಕರು ಹೇಳಿದ್ದಾರೆ. ಇಂದಿನ ಸ್ಥಿತಿಯಲ್ಲಿ ಸಿದ್ದರಾಮಯ್ಯ ಅವರು ಕೋಲಾರವನ್ನು ಬಿಡುವಂತಿಲ್ಲ. ಹೈಕಮಾಂಡ್‌ ಸೂಚನೆಯಂತೆ ವರುಣವನ್ನೂ ಬಿಡಲು ಆಗಲ್ಲ. ಹೀಗಾಗಿ, ಸಿದ್ದರಾಮಯ್ಯ ಅವರು ಕೋಲಾರ ಮತ್ತು ವರುಣ ಎರಡು ಕ್ಷೇತ್ರದಲ್ಲೂ ಸ್ಪರ್ಧಿಸುವ ಇಂಗಿತದಲ್ಲಿದ್ದಾರೆ’ ಎಂದು ಹೇಳಿದರು.

‘ವರುಣ ಒಂದರಲ್ಲಿ ನಿಂತುಕೊಳ್ಳಿ ಅಂತ ನಾನು ಮೊದಲು ಸಲಹೆ ಕೊಟ್ಟಿದ್ದೆ. ಸಿದ್ದರಾಮಯ್ಯ ಅವರು ಯಾವುದೇ ಕ್ಷೇತ್ರದಲ್ಲಿ ನಿಂತರೂ ಅವರ ವೈರಿಗಳು ಒಂದಾಗಿ ಸೋಲಿಸಲು ಯತ್ನಿಸುತ್ತಾರೆ. ಸಿದ್ದರಾಮಯ್ಯ ವಿರುದ್ಧ ಹಣವನ್ನು ನೀರಿನಂತೆ ಖರ್ಚು ಮಾಡುತ್ತಾರೆ. ಎಲ್ಲಿ, ಯಾವಾಗ ನಿಂತರೂ ಶತ್ರುಗಳು ಒಂದಾಗುತ್ತಾರೆ. ಇದಕ್ಕೆಲ್ಲ ಹೆದರೋಕೆ ಆಗಲ್ಲ. ಸಿದ್ದರಾಮಯ್ಯ ಮಾಸ್‌ ಲೀಡರ್‌. ಆಕಸ್ಮಾತ್‌ ಅಧಿಕಾರಕ್ಕೆ ಬಂದರೆ ಸಾಮಾಜಿಕ ನ್ಯಾಯದ ಪರ ಕೆಲಸ ಮಾಡುತ್ತಾರೆ. ಇದನ್ನು ಬಲಪಂಥೀಯರಿಗೆ ಸಹಿಸಲು ಆಗಲ್ಲ’ ಎಂದು ಅವರು ಕುಟುಕಿದರು.

ಸಿದ್ದು ಕೋಲಾರದಿಂದಲೇ ಸ್ಪರ್ಧಿಸಬೇಕೆಂದು ಬಾರುಕೋಲಲ್ಲಿ ಹೊಡೆದುಕೊಂಡು ಧರಣಿ!

ಈ ಮಧ್ಯೆ ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ವರುಣ ಕ್ಷೇತ್ರದಿಂದ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ. ಅದೇ ಕ್ಷೇತ್ರದಿಂದ ಟಿಕೆಟ್‌ ಕೊಡುವಂತೆ ಹೈಕಮಾಂಡ್‌ ಮುಂದೆ ಪ್ರಸ್ತಾಪಿಸಿದ್ದೇನೆ. ನಮ್ಮ ಮನೆಯಲ್ಲಿ ವರುಣದಿಂದ ಸ್ಪರ್ಧಿಸುವಂತೆ ಹೇಳಿದ್ದಾರೆ. ಇದಲ್ಲದೆ ಇನ್ನೊಂದು ಕ್ಷೇತ್ರದಲ್ಲೂ ಸ್ಪರ್ಧಿಸುವಂತೆ ಹೇಳುತ್ತಿದ್ದಾರೆ. ರಾಜ್ಯದ 25 ಕ್ಷೇತ್ರಗಳಲ್ಲೂ ನನಗೆ ಸ್ಪರ್ಧಿಸುವಂತೆ ಆಹ್ವಾನವಿದೆ. ಎಲ್ಲಾ ನಿರ್ಧಾರ ಹೈಕಮಾಂಡ್‌ಗೆ ಬಿಟ್ಟಿದ್ದೇನೆ’ ಎಂದರು.

Latest Videos
Follow Us:
Download App:
  • android
  • ios