Asianet Suvarna News Asianet Suvarna News

ಮುಸ್ಲಿಂ ಸಮುದಾಯಕ್ಕೆ ಸಿದ್ದರಾಮಯ್ಯ ಒಬ್ಬರೇ ನಾಯಕ: ಇಕ್ಬಾಲ್‌ ಅನ್ಸಾರಿ

*  ಮುಸ್ಲಿಂ ಸಮುದಾಯ ಸಿದ್ದರಾಮಯ್ಯರನ್ನು ಬಿಟ್ಟು ಬೇರೆ ಯಾರನ್ನೂ ಒಪ್ಪುವುದಿಲ್ಲ
*  ನಾನು ಸಚಿವನಾಗಿದ್ದಾಗ ಅನುದಾನ ನೀಡದ ಕುಮಾರಸ್ವಾಮಿ 
*  ಬಿಜೆಪಿಯ ಅನುಕೂಲಕ್ಕಾಗಿ ಮುಸ್ಲಿಂ ಅಭ್ಯರ್ಥಿ ಹಾಕುವ ಎಚ್‌ಡಿಕೆ
 

Siddaramaiah Is the Only Leader of the Muslim Community Says Iqbal Ansari grg
Author
Bengaluru, First Published Oct 18, 2021, 2:17 PM IST
  • Facebook
  • Twitter
  • Whatsapp

ಗಂಗಾವತಿ(ಅ.18): ಕರ್ನಾಟಕದಲ್ಲಿ(Karnataka) ಮುಸ್ಲಿಂ(Muslim) ಸಮುದಾಯಕ್ಕೆ ಸಿದ್ದರಾಮಯ್ಯ ಒಬ್ಬರೇ ನಾಯಕ ಎಂದು ಮಾಜಿ ಸಚಿವ ಇಕ್ಬಾಲ್‌ ಅನ್ಸಾರಿ(Iqbal Ansari) ಹೇಳಿದ್ದಾರೆ. 

ಭಾನುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ(HD Kumaraswamy) ಆರೋಪಕ್ಕೆ ತಿರುಗೇಟು ನೀಡಿದ್ದಾರೆ.  ಮುಸ್ಲಿಂ ಸಮುದಾಯದವರು ಸಿದ್ದರಾಮಯ್ಯ(Siddaramaiah) ಅವರನ್ನು ಬಿಟ್ಟು ಬೇರೆ ಯಾರನ್ನೂ ಒಪ್ಪುವುದಿಲ್ಲ. ಇದರಲ್ಲಿ ಎರಡನೇ ಮಾತೇ ಇಲ್ಲ ಎಂದು ಅನ್ಸಾರಿ, ಕುಮಾರಸ್ವಾಮಿ ವಿರುದ್ಧ ಗರಂ ಆದರು. ಸಿದ್ದರಾಮಯ್ಯ ಮುಖ್ಯಮಂತ್ರಿ ಇದ್ದಾಗ ಅಲ್ಪಸಂಖ್ಯಾತರಿಗೆ ಅನೇಕ ಯೋಜನೆಗಳನ್ನು ಕೊಟ್ಟಿದ್ದಾರೆ. ವಕ್ಫ್‌ ಬೋರ್ಡ್‌ನಿಂದ(Waqf Board) ಹಣ ಕೊಡಿಸಿದ್ದಾರೆ. ಕುಮಾರಸ್ವಾಮಿ, ದೇವೇಗೌಡ(HD Devegowda) ಅವರು ನನಗೂ ಮಂತ್ರಿ ಸ್ಥಾನ ಕೊಟ್ಟಿದ್ದಾರೆ. ಇದನ್ನು ನಾನಾಗಲಿ, ನನ್ನ ಕುಟುಂಬ ಮರೆಯಲು ಸಾಧ್ಯವಿಲ್ಲ. ಆದರೆ, ಕುಮಾರಸ್ವಾಮಿ ನಮಗೆ ಸಹಕಾರ ಕೊಡಲಿಲ್ಲ ಎಂದು ನೇರವಾಗಿ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಜೆಡಿಎಸ್‌, ಬಿಜೆಪಿ ಒಳ ಒಪ್ಪಂದ'': ಸುದ್ದಿಗೋಷ್ಠಿಯಲ್ಲಿ ಇದೆಂತಹಾ ಮಾತು!

ತಾವು ಸಚಿವನಾಗಿದ್ದಾಗ ಅಭಿವೃದ್ಧಿಗೆ ಹಣ ಕೇಳಿದರೆ ಕುಮಾರಸ್ವಾಮಿ ಅನುದಾನ ನೀಡಲಿಲ್ಲ. 2008ರಲ್ಲಿ ಮುಸ್ಲಿಮರು ಜೆಡಿಎಸ್‌(JDS) ವಿರೋಧಿಸಿದರು. ಈ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ(Election) ನಾನು ಸೋಲು ಅನುಭವಿಸಲು ಕಾರಣವಾಯಿತು. ಕುಮಾರಸ್ವಾಮಿ ಅವರಿಗೆ ಸುಳ್ಳು ಹೇಳುವ ಅಭ್ಯಾಸವಿದೆ. ಸಿಂಧಗಿ ಮತ್ತು ಹಾನಗಲ್‌ನಲ್ಲಿ(Hanagal) ಮುಸ್ಲಿಂ ಸಮುದಾಯದ ಅಭ್ಯರ್ಥಿಗಳನ್ನು ಹಾಕಬೇಕಿತ್ತಾ? ವೋಟ್‌(Vote) ಒಡೆಯಲು ಮುಸ್ಲಿಂ ಅಭ್ಯರ್ಥಿಗಳನ್ನು ಸ್ಪರ್ಧೆಗಿಳಿಸಿದ್ದಾರೆ. ಬೆಂಗಳೂರಲ್ಲಿ(Bengaluru) ಕುಳಿತು ಆರ್‌ಎಸ್‌ಎಸ್‌(RSS) ಬಯ್ಯತ್ತಾರೆ. ಬಿಜೆಪಿಯ ಅನುಕೂಲಕ್ಕಾಗಿ ಮುಸ್ಲಿಂ ಅಭ್ಯರ್ಥಿ ಹಾಕ್ತಾರೆ. ಕುಮಾರಸ್ವಾಮಿ ಮುಸ್ಲಿಂ ಸಮುದಾಯದ ಒಂದೂ ಕೆಲಸ ಮಾಡಿಲ್ಲ. ಕುಮಾರಸ್ವಾಮಿ ನಮ್ಮ ಸಮಾಜಕ್ಕೆ ಯಾವುದಾದರೂ ಒಂದು ಕೆಲಸ ಮಾಡಿದ್ದಾರೆ ಎಂಬುದನ್ನು ಬಹಿರಂಗವಾಗಿ ಬಂದು ಹೇಳಿಕೆ ನೀಡಲಿ ಎಂದು ಮಾಜಿ ಸಚಿವ ಇಕ್ಬಾಲ್‌ ಅನ್ಸಾರಿ ನೇರವಾಗಿ ಸವಾಲು ಹಾಕಿದರು.
 

Follow Us:
Download App:
  • android
  • ios