* ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತ* ಕೇಂದ್ರ ಹಾಗೂ ರಾಜ್ಯ ಸರ್ಕಾರ ಆದೇಶ* ತೈಲ ಬೆಲೆ ಇಳಿಕೆಗೆ ಸಿದ್ದರಾಮಯ್ಯ ವ್ಯಂಗ್ಯ
ಬೆಂಗಳೂರು, (ನ.05): ಕೇಂದ್ರ ಸರ್ಕಾರ ಪೆಟ್ರೋಲ್ (Petrol) ಮೇಲಿನ ಅಬಕಾರಿ ಸುಂಕವನ್ನು 5 ರೂ. ಹಾಗೂ ಡೀಸೆಲ್ (diesel) ಮೇಲಿನ ಅಬಕಾರಿ ಸುಂಕವನ್ನು 10 ರೂ. ಕಡಿತಗೊಳಿಸಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಕೂಡ ರಾಜ್ಯದಲ್ಲಿಯೂ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ತಲಾ 7 ರೂ. ತೆರಿಗೆ ಕಡಿಮೆ ಮಾಡುವ ನಿರ್ಧಾರ ಪ್ರಕಟಿಸಿದ್ದಾರೆ.
ಜನರಿಗೆ ಇದು ದೀಪಾವಳಿ ಉಡುಗೋರೆ (Deepavali Gift) ಎಂದು ಬಿಜೆಪಿ ನಾಯಕರುಗಳು ಸಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದಾರೆ. ಇನ್ನು ಈ ತೈಲ ಬೆಲೆ ಇಳಿಸಿದ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaih) ಅವರು ಪ್ರತಿಕ್ರಿಯಿಸಿದ್ದಾರೆ.
Fuel Price| ತೈಲ ಬೆಲೆ ಇಳಿಕೆ: ಕೇಂದ್ರ, ರಾಜ್ಯದ ಬೊಕ್ಕಸಕ್ಕೆ ಭಾರೀ ನಷ್ಟ!
ಈ ಬಗ್ಗೆ ಸರಣಿ ಟ್ವೀಟ್ (Tweet) ಮಾಡಿರುವ ಸಿದ್ದರಾಮಯ್ಯ, ಇದು ಪ್ರಧಾನಿಗಳು ನೀಡಿದ ದೀಪಾವಳಿ ಕೊಡುಗೆ ಅಲ್ಲ, ಇದು ದೇಶದಾದ್ಯಂತ ನಡೆದ ಉಪಚುನಾವಣೆಗಳ ಕೊಡುಗೆ ಎಂದು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಕೆಗೆ ಟಾಂಗ್ ಕೊಟ್ಟಿದ್ದಾರೆ.
ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಇಳಿಕೆ ಮಾಡಿರುವ ಸಂಬಂಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಣಿ ಟ್ಟೀಟ್ ಮಾಡಿದ್ದು,ಯುಪಿಎ ಕಾಲದಲ್ಲಿ ಕಚ್ಚಾ ತೈಲ ಬೆಲೆ ಬ್ಯಾರಲ್‌ಗೆ 125 ಡಾಲರ್ ಇದ್ದಾಗ ಪೆಟ್ರೋಲ್ ಬೆಲೆ 65 ರೂಪಾಯಿಗಳಾಗಿತ್ತು. ಬಿಜೆಪಿ ಸರ್ಕಾರದಲ್ಲಿ ಕಚ್ಚಾ ತೈಲ ಬೆಲೆ ಬ್ಯಾರಲ್‌ಗೆ 82 ಡಾಲರ್ ಇದೆ. ಹೀಗಿರುವಾಗ ಪೆಟ್ರೋಲ್ ಬೆಲೆ 100 ರೂಪಾಯಿಗೆ ಇಳಿಸಿದ್ದು ಮಹಾನ್ ಸಾಧನೆ ಎಂದು ಅವರು ವ್ಯಂಗ್ಯವಾಡಿದ್ದಾರೆ.
ಉಪಚುನಾವಣೆಗಳ ಕೊಡುಗೆ
ಚುನಾವಣೆಯಲ್ಲಿ ಮತದಾರರು ಬಿಜೆಪಿ ಸೋಲಿಸಿದರೆ ಪೆಟ್ರೋಲ್ –ಡೀಸೆಲ್ ಬೆಲೆ ಇಳಿಯುತ್ತದೆ ಎನ್ನುವ ಪಾಠವನ್ನು ಹೇಳಿಕೊಟ್ಟ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು ಎಂದು ಹೇಳಿರುವ ಸಿದ್ದರಾಮಯ್ಯ, ಇದು ಪ್ರಧಾನಿಗಳು ನೀಡಿದ ದೀಪಾವಳಿ ಕೊಡುಗೆ ಅಲ್ಲ, ಇದು ದೇಶದಾದ್ಯಂತ ನಡೆದ ಉಪಚುನಾವಣೆಗಳ (By Election) ಕೊಡುಗೆ ಎಂದು ಲೇವಡಿ ಮಾಡಿದ್ದಾರೆ.
ಅಡುಗೆ ಅನಿಲ ಬೆಲೆ ಸಾವಿರ ರೂಪಾಯಿ ತಲುಪಿದೆ. ಆಹಾರ ಧಾನ್ಯ, ಖಾದ್ಯ ತೈಲದ ಬೆಲೆ ಏರುತ್ತಲೇ ಇದೆ. ಈ ಬೆಲೆಗಳು ಕೂಡಾ ಇಳಿಯಬೇಕಾದರೆ ಬಿಜೆಪಿಯನ್ನು ಇನ್ನಷ್ಟು ಚುನಾವಣೆಗಳಲ್ಲಿ ಮತದಾರರು ಸೋಲಿಸುತ್ತಲೇ ಇರಬೇಕು ಎಂದು ಹೇಳಿದ್ದಾರೆ.
ಸದ್ಯದಲ್ಲಿಯೇ ನಮ್ಮ ರಾಜ್ಯದಲ್ಲಿ ತಾಲೂಕು ಮತ್ತು ಜಿಲ್ಲಾ ಪಂಚಾಯತಿಗಳಿಗೆ ಹಾಗೂ ಬೆಂಗಳೂರು ಮಹಾನಗರ ಪಾಲಿಕೆಗೆ(BBMP) ಚುನಾವಣೆಗಳು (Election) ನಡೆಯಲಿವೆ. ನರೇಂದ್ರ ಮೋದಿ ಅವರು ಹೇಳಿಕೊಟ್ಟಿರುವ ಪಾಠವನ್ನು ಮತದಾರರು ನೆನಪಲ್ಲಿಟ್ಟುಕೊಂಡು ಮತದಾನ ನಡೆಸಬೇಕು ಎಂದು ಸಿದ್ದರಾಮಯ್ಯ ಕರೆ ನೀಡಿದ್ದಾರೆ.
ಕೇಂದ್ರ ಸರ್ಕಾರದ ದರ ಕಡಿತ ಗುರುವಾರದಿಂದಲೇ ಜಾರಿಗೆ ಬಂದಿದ್ದು, ರಾಜ್ಯ ಸರ್ಕಾರದ ಘೋಷಣೆ ಶುಕ್ರವಾರ ಜಾರಿಗೆ ಬಂದಿದೆ. ಇಷ್ಟೊಂದು ದೊಡ್ಡ ಮೊತ್ತದ ಕಡಿತ ಇದೇ ಮೊದಲು. ಹೀಗಾಗಿ ರಾಜ್ಯದ ಜನರಿಗೆ ದೊಡ್ಡ ನಿರಾಳತೆ ಉಂಟಾಗಿದೆ.
ರಾಜ್ಯಕ್ಕೆ 2100 ಕೋಟಿ ರು. ಹೊರೆ:
ಕರ್ನಾಟಕ ಪಾಲಿನ ದರ ಇಳಕೆ ಘೋಷಿಸಿ ಬಗ್ಗೆ ಬುಧವಾರ ರಾತ್ರಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ನಿರ್ಧಾರ ಗುರುವಾರ ಸಂಜೆಯಿಂದ ಅನ್ವಯವಾಗಲಿದೆ. ರಾಜ್ಯ ಸರ್ಕಾರಕ್ಕೆ ಬೊಕ್ಕಸಕ್ಕೆ ಅಂದಾಜು 2,100 ಕೋಟಿ ರು. ನಷ್ಟವಾಗುತ್ತದೆ ಎಂದಿದ್ದಾರೆ,
