ಬೆಂಗಳೂರು, (ಜೂನ್.06): ಮಂಡ್ಯ ಮೈಷುಗರ್ ಸಕ್ಕರೆ ಕಾರ್ಖಾನೆಯನ್ನು ಖಾಸಗೀಕರಣಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಆದ್ರೆ, ಇದಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಈ ಸಂಬಂಧ ಸಾಧಕ-ಬಾಧಕಗಳ ಚರ್ಚೆಗಳು ನಡೆದಿವೆ. ಇದರ ಮಧ್ಯೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಈ ಕುರಿತು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಮೈಷುಗರ್‌ ಖಾಸಗಿಕರಣ ಫುಲ್‌ ಸ್ಟಾಪ್‌? ರೈತರ ನೆರವಿಗೆ ಧಾವಿಸಿದ ಸಿಎಂ

ಕಾರ್ಖಾನೆ ಕುರಿತು ಸಿದ್ದ ಪತ್ರ

ಮಂಡ್ಯ ಜಿಲ್ಲೆಯ ಕಬ್ಬು ಬೆಳೆಗಾರರ ವಾರ್ಷಿಕ 9 ಲಕ್ಷ ಮೆಟ್ರಿಕ್ ಟನ್ ಕಬ್ಬು ಅರೆಯುತ್ತಿದ್ದ ಕಾರ್ಖಾನೆ ಮೈಶುಗರ್ ಕಾರ್ಖಾನೆಯಾಗಿದೆ. ಸಾವಿರಾರು ಕೋಟಿ ಮೌಲ್ಯವುಳ್ಳ ಈ ಕಂಪನಿಯನ್ನು ಯಾವುದೇ ಕಾರಣಕ್ಕೂ ಖಾಸಗಿ ವ್ಯಕ್ತಿಗಳಿಗೆ ಮಾರಾಟ ಮಾಡಬಾರದು ಎಂಬುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಪತ್ರದ ಮೂಲಕ ಒತ್ತಾಯಿಸಿದ್ದಾರೆ.

ಈ ಕುರಿತಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಮಾಜಿ ಸಿಎಂ ಸಿದ್ದರಾಮಯ್ಯ, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ವಿಶೇಷ ಆಸಕ್ತಿಯಿಂದಾಗಿ 1933ರಲ್ಲಿ ಮೈಸೂರು ಸಕ್ಕರೆ ಕಾರ್ಖಾನೆ ಆರಂಭಗೊಂಡಿತ್ತು. ಮುಂದೆ ಇದನ್ನು ಮೈಶುಗರ್ ಕಾರ್ಖಾನೆ ಎಂಬುದಾಗಿ ಕರೆಯಲಾಯಿತು. ಇದು ಕರ್ನಾಟಕದ ಮೊಟ್ಟಮೊದಲ ಏಕೈಕ ಸರ್ಕಾರಿ ಕಾರ್ಖಾನೆ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.

ಮಂಡ್ಯ: ಮೈಶುಗರ್ ಕಾರ್ಖಾನೆ ಪುನಾರಂಭ

ಇಂತಹ ಮೈಶುಗರ್ ಕಾರ್ಖಾನೆ ಮಂಡ್ಯ ರೈತರ ಬದುಕನ್ನು ಸುಧಾರಿಸಿ, ಮಂಡ್ಯದಂತಹ ನಗರ ಪಟ್ಟಣಗಳು ರೂಪುಗಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಹಳೇ ಮೈಸೂರು ಭಾಗದ ಇಂತಹ ದೀರ್ಘ ಇತಿಹಾಸವುಳ್ಳ ಕಾರ್ಖಾನೆಯನ್ನು ಖಾಸಗಿಯವರಿಗೆ ಮಾರಾಟ ಮಾಡಲು ರಾಜ್ಯ ಸರ್ಕಾರ ಮುಂದಾಗಿರುವುದು ದುರದೃಷ್ಠಕರ ಸಂಗತಿಯಾಗಿದೆ.

ಸಾವಿರಾರು ಕೋಟಿ ಮೌಲ್ಯವುಳ್ಳ ಈ ಕಂಪನಿಯನ್ನು ಯಾವುದೇ ಕಾರಣಕ್ಕೂ ಖಾಸಗಿ ವ್ಯಕ್ತಿಗಳಿಗೆ ಮಾರಾಟ ಮಾಡಬಾರದು. ಸರ್ಕಾರವೇ ಒಂದಿಷ್ಟು ಬಂಡವಾಳವನ್ನು ನೀಡಿ, ಕಾರ್ಖಾನೆಯನ್ನು ಆಧುನೀಕರಣ ಮಾಡಿ, ಇನ್ನಷ್ಟು ಶಕ್ತಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.