ಪಠ್ಯ ಪರಿಷ್ಕರಣೆ ವಿವಾದ: ಸಚಿವ ಬಿಸಿ ನಾಗೇಶ್​ಗೆ ಸಿದ್ದರಾಮಯ್ಯ ಸಾಲು-ಸಾಲು ಪ್ರಶ್ನೆ

* ಕರ್ನಾಟಕದಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ವಿವಾದ
* ಸಚಿವ ಬಿಸಿ ನಾಗೇಶ್‌ಗೆ ಸಿದ್ದರಾಮಯ್ಯ ಪ್ರಶ್ನೆಗಳ ಸುರಿಮಳೆ
* ಸರಣಿ ಟ್ವೀಟ್ ಮೂಲಕ ಪ್ರಶ್ನಿಸಿದ ಸಿದ್ದರಾಮಯ್ಯ

Siddaramaiah questioned to BC Nagesh Over text-book-revision rbj

ಬೆಂಗಳೂರು, (ಜೂನ್.05): ಕರ್ನಾಟಕದಲ್ಲಿ ಶಾಲಾ ಪಠ್ಯಪರಿಷ್ಕರಣೆ ವಿವಾದ ತಾರಕಕ್ಕೇರಿದ್ದು, ಈ ಬಗ್ಗೆ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಆರೋಪ ಪ್ರತ್ಯಾರೋಪಗಳು ಸಹ ಜೋರಾಗಿವೆ. ಇನ್ನು ಇದರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲೂ ಪರ-ವಿರೋಧದ ಚರ್ಚೆಗಳು ನಡೆಯುತ್ತಿವೆ.

ರೋಹಿತ್ ಚಕ್ರತೀರ್ಥ ಸಮಿತಿ ವಿರುದ್ಧ ಸಾಹಿತಿಗಳು, ವಿದ್ಯಾರ್ಥಿಗಳು ಸೇರಿ ವಿರೋಧ ಪಕ್ಷಗಳು ಧ್ವನಿ ಎತ್ತಿವೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ, ಸರಣಿ ಟ್ವೀಟ್ ಮಾಡಿದ್ದು, ಈ ಹಿಂದೂಗಳು ಯಾರು? ಎನ್ನುವುದನ್ನು ಬಹಿರಂಗ ಪಡಿಸಿ, ಯಾವುದರಿಂದ ಯಾರ ಭಾವನೆಗೆ ಧಕ್ಕೆಯಾಗಿದೆ ಎನ್ನುವುದನ್ನೂ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪರಿಷ್ಕೃತ ಪಠ್ಯದಲ್ಲಿ ಬಸವಣ್ಣ, ಅಂಬೇಡ್ಕರ್, ಸಾವಿತ್ರಿಬಾಯಿ ಫುಲೆ, ನಾರಾಯಣ ಗುರು, ಕುವೆಂಪು ಸೇರಿದಂತೆ ಹಲವು ಮಹನೀಯರ ವ್ಯಕ್ತಿತ್ವವನ್ನು ಕಡೆಗಣಿಸಲಾಗಿದೆ. ಇವರನ್ನು ಪರಿಷ್ಕೃತ ಸಮಿತಿಯ ಕಿಡಿಗೇಡಿ ಅಧ್ಯಕ್ಷ ತುಚ್ಛೀಕರಿಸಿದ್ದಾನೆ ಎಂದು ಪ್ರತಿಭಟಿಸುತ್ತಿರುವವರು ಅನ್ಯಧರ್ಮೀಯರಲ್ಲ, ಹಿಂದೂಗಳೇ ಅಲ್ವಾ? ಎಂದು ಸಿದ್ದರಾಮಯ್ಯ ಅವರು ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರಿಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದಾರೆ.

ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರ ಸಮರ್ಥಿಸಿಕೊಂಡ BC Nagesh

ಪಠ್ಯಪರಿಷ್ಕರಣಾ ಸಮಿತಿಯಲ್ಲಿ ದಲಿತ ಮತ್ತು ಹಿಂದುಳಿದ ಜಾತಿಗಳ ವಿದ್ವಾಂಸರಿಗೆ ಪ್ರಾತಿನಿಧ್ಯವೇ ನೀಡಿಲ್ಲ ಎಂದು ಟ್ವೋಟ್ ಮಾಡಿರುವ ಅವರು, ಶಿಕ್ಷಣ ಸಚಿವರು ಕಾಳಜಿ ತೋರುತ್ತಿರುವ ಹಿಂದೂಗಳ ವ್ಯಾಖ್ಯಾನದಲ್ಲಿ ಈ ಸಮುದಾಯಗಳು ಸೇರಿಕೊಳ್ಳುವುದಿಲ್ಲವೇ? ಈ ಕಾರಣಕ್ಕಾಗಿ ಅವರಿಗೆ ಪ್ರಾತಿನಿಧ್ಯ ನೀಡಿಲ್ಲವೇ? ಎಂದು ಪ್ರಶ್ನಿಸಿದ್ದಾರೆ. ಜೊತೆಗೆ ಈ ದೇಶದ ಬಡವರಲ್ಲಿ ಬಹುಸಂಖ್ಯೆಯಲ್ಲಿರುವುದು ಹಿಂದೂ ಧರ್ಮದ ದಲಿತರು ಮತ್ತು ಹಿಂದುಳಿದ ಜಾತಿಗಳು. ಸರ್ಕಾರಿ ಶಾಲೆಗಳಲ್ಲಿ ಈ ಮಕ್ಕಳ ಸಂಖ್ಯೆಯೇ ಹೆಚ್ಚು. ಬುದ್ಧ, ಬಸವ, ಅಂಬೇಡ್ಕರ್, ಸಾವಿತ್ರಿಬಾಯಿ ಫುಲೆ, ನಾರಾಯಣ ಗುರು, ಕುವೆಂಪು ಅವರಿಗೆ ಆಗಿರುವ ಅವಮಾನದಿಂದ ಈ ಮಕ್ಕಳ ಭಾವನೆಗೂ ಧಕ್ಕೆಯಾಗಿದೆಯಲ್ವಾ? ಎಂದು ಕೇಳಿದ್ದಾರೆ.

ಬಸವಣ್ಣ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹಿಂದೂ ಧರ್ಮವನ್ನು ತ್ಯಜಿಸಿದ ಕಾರಣಕ್ಕೆ ಅವರನ್ನು ನಿರ್ಲಕ್ಷಿಸಲಾಯಿತಾ? ಎಂದು ಪ್ರಶ್ನೆ ಮಾಡಿರುವ ಸಿದ್ದರಾಮಯ್ಯ, ನಾರಾಯಣ ಗುರು, ಪೆರಿಯಾರ್, ಕುವೆಂಪು ಅವರು ಹಿಂದೂ ಧರ್ಮದ ದೋಷಗಳನ್ನು ಎತ್ತಿ ತೋರಿಸಿದ್ದಕ್ಕಾಗಿ ನಿರ್ಲಕ್ಷ್ಯ ಮಾಡಲಾಯಿತಾ ಎಂದು ಟ್ವೀಟ್ ಮಾಡಿದ್ದಾರೆ.

Latest Videos
Follow Us:
Download App:
  • android
  • ios