ಬಾಗಲಕೋಟೆ, (ಅ.20): ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತೆಗೆಯುವ ಪ್ರಯತ್ನ ಬಿಜೆಪಿಯಲ್ಲೇ ನಡೆದಿದೆ. ನಾವಂತೂ ಸರ್ಕಾರ ಬೀಳಿಸೋಕೆ ಹೋಗೊಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಯಡಿಯೂರಪ್ಪ ಬಹಳ ದಿನ ಸಿಎಂ ಆಗಿ ಇರೊಲ್ಲ ಎಂದು ಶಾಸಕ ಬಸನಗೌಡ ಯತ್ನಾಳ ಅವರ ಹೇಳಿಕೆಯ ಬಗ್ಗೆ ಬಾದಾಮಿ ಪಟ್ಟಣದಲ್ಲಿ ಮಂಗಳವಾರ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ,  ಬಿಜೆಪಿಯವರ ಆಂತರಿಕ ತಿಕ್ಕಾಟದಿಂದ ಸಕಾ೯ರ ಬಿದ್ದು ಹೋದರೆ ನಾವು ಚುನಾವಣೆ ಎದುರಿಸಲು ಸಿದ್ಧ ಎಂದು ಸ್ಪಷ್ಟಪಡಿಸಿದರು.

ಜೆಡಿಎಸ್‌ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಘಟಾನುಘಟಿ ನಾಯಕರು ಕಾಂಗ್ರೆಸ್ ಸೇರ್ಪಡೆ...!

ಯಡಿಯೂರಪ್ಪನವರನ್ನು ಕೆಳಗಿಳಿಸೋ ಬಗ್ಗೆ ಚಚೆ೯ ನಡೀತಾ ಇರೋದು ನಿಜ. ಆದರೆ ಯಾವಾಗ ಇಳಿಸ್ತಾರೆ, ಯಾರು ಸಿಎಂ ಆಗ್ತಾರೆ ಅಂತ ನನಗೆ ಗೊತ್ತಿಲ್ಲ, ಚಚೆ೯ಯಂತೂ ನಡೀತಾ ಇದೆ ಎಂದು ಹೇಳಿದರು.

ಉತ್ತರ ಕನಾ೯ಟಕ ಭಾಗದವರು ಸಿಎಂ ಆಗಲಿದ್ದಾರೆ ಎಂಬ ಯತ್ನಾಳ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅದು ಅವರ ಪಕ್ಷದ ವಿಚಾರ, ನಾನೇಕೆ ಮಾತನಾಡಲಿ, ಯಡಿಯೂರಪ್ಪ ಆ ಬಗ್ಗೆ ಮಾತನಾಡಲಿ ಎಂದು ತಿಳಿಸಿದರು.

ಬಸನಗೌಡ ಪಾಟೀಲ ಯತ್ನಾಳ ಅವರ ಕ್ಷೇತ್ರದ ಅನುದಾನ ಕಡಿತಗೊಂಡ ನಂತರ ಅವರಲ್ಲಿ ಸಿಎಂ ಬಗ್ಗೆ ಅಸಮಾಧಾನವಾಗಿದೆ. ಪಾಪ ಅವರಿಗೂ ಈಗ ಬಿಸಿ ಮುಟ್ಟಿದೆ. ಹೀಗಾಗಿಯೇ ಸತ್ಯ ಹೇಳೋಕೆ ಶುರು ಮಾಡಿದ್ದಾರೆ ಎಂದು ಕಟುಕಿದರು.