* ನಗರ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ* ಅತಿ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್* ಬಿಜೆಪಿಯ ಸೊಕ್ಕನ್ನು ರಾಜ್ಯದ ಜನ ಮುರಿದಿದ್ದಾರೆ ಎಂದ ಸಿದ್ದು
ಬೆಂಗಳೂರು, (ಡಿ. 30): ರಾಜ್ಯದಲ್ಲಿ ಸೋಮವಾರ ( ಡಿ.27) ರಂದು ನಡೆದಿದ್ದ 19 ಜಿಲ್ಲೆಗಳ 58 ನಗರ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ(Local Body Election Result) ಪ್ರಕಟವಾಗಿದೆ. ಘಟಾನುಘಟಿ ನಾಯಕರಿಗೆ ಭಾರಿ ಮುಖಭಂಗವಾಗಿದೆ.
ಅದರಲ್ಲೂ ಆಡಳಿತರೂಢ ಪಕ್ಷದ ನಾಯಕರ ಕ್ಷೇತ್ರಗಳಲ್ಲಿ ಕಾಂಗ್ರೆಸ್Congress) ಮೇಲಗೈ ಸಾಧಿಸಿದೆ. ಇನ್ನು ಈ ಫಲಿತಾಂಶದ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ(Siddaramaiah) ವ್ಯಾಖ್ಯಾನಿಸಿದ್ದು ಹೀಗೆ...
ಫಲಿತಾಂಶದ ಬಗ್ಗೆ ಸಾಮಾಜಿಕ ಜಾಲತಾಣಗಳ ಮೂಲಕ ಪ್ರತಿಕ್ರಿಯಿಸಿದ್ದು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ 1,187 ಸ್ಥಾನಗಳ ಪೈಕಿ 500ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಇದೆ ಎಂಬುದನ್ನು ಈ ಫಲಿತಾಂಶ ಇನ್ನೊಮ್ಮೆ ಸಾಬೀತು ಮಾಡಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
Local Body Poll Result ಕಾಂಗ್ರೆಸ್ ಮೇಲುಗೈ, ಸಿಎಂ, ರಾಮುಲು, ಆಚಾರ್, ಸಿಂಗ್, ಜೊಲ್ಲೆಗೆ ಮುಖಭಂಗ
ಚುನಾವಣೆಯಲ್ಲಿ ಹಣ ಖರ್ಚು ಮಾಡಿದರೆ ಗೆಲ್ಲಬಹುದು ಎಂಬ ಬಿಜೆಪಿಯ(BJP) ಸೊಕ್ಕನ್ನು ರಾಜ್ಯದ ಜನ ಮುರಿದಿದ್ದಾರೆ. ಈ ಫಲಿತಾಂಶ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆ, ಭ್ರಷ್ಟಾಚಾರ ಮತ್ತು ದುರಾಡಳಿತಕ್ಕೆ ಜನತೆ ನೀಡಿರುವ ಸಂದೇಶ ಎಂದಿದ್ದಾರೆ.
ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಿ, ಮತ ನೀಡಿದ ಎಲ್ಲಾ ಮತದಾರರಿಗೆ ಮತ್ತು ಅಭ್ಯರ್ಥಿಗಳ ಪರವಾಗಿ ದುಡಿದ ಎಲ್ಲಾ ನಾಯಕರು, ಕಾರ್ಯಕರ್ತರಿಗೆ ಧನ್ಯವಾದಗಳು ಹಾಗೂ ಜಯಗಳಿಸಿರುವ ನಮ್ಮ ಪಕ್ಷದ ಎಲ್ಲಾ ಅಭ್ಯರ್ಥಿಗಳಿಗೆ ಅಭಿನಂದನೆಗಳು ಎಂದು ಪೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.
ಫಲಿತಾಂಶ ವಿವರ
ರಾಜ್ಯದಲ್ಲಿ ಡಿಸೆಂಬರ್ 27ರಂದು ನಡೆದಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇಂದು ಪ್ರಕಟಗೊಳ್ಳುತ್ತಿದ್ದು, ಸ್ವಕ್ಷೇತ್ರದಲ್ಲೇ ಸಿಎಂ ಬಸವರಾಜ ಬೊಮ್ಮಾಯಿ ಸಚಿವರಾದ ಶ್ರೀರಾಮುಲು, ಶಶಿಕಲಾ ಜೊಲ್ಲೆ ಅವರಿಗೆ ಮುಖಭಂಗವಾಗಿದೆ.
ಬಂಕಾಪುರ ಪುರಸಭೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು, ಸಿಎಂ ಬೊಮ್ಮಾಯಿ ಸ್ವಕ್ಷೇತ್ರದಲ್ಲಿ ಭಾರಿ ಮುಖಭಂಗವಾಗಿದೆ ಕಾಂಗ್ರೆಸ್ 14 ಬಿಜೆಪಿ 7 ಇತರೇ 2 ಕ್ಷೇತ್ರದಲ್ಲಿ ಗೆಲುವು ಸಾಧಿಸಿವೆ.ಹಾಗೆಯೇ ಹಾವೇರಿ ಜಿಲ್ಲೆಯ ಗುತ್ತಲ ಪಟ್ಟಣ ಪಂಚಾಯಿತಿ 18 ವಾರ್ಡ್ ಗಳ ಪೈಕಿ ಕಾಂಗ್ರೆಸ್ 11 ಬಿಜೆಪಿ 6 ಇತರೇ 1ರಲ್ಲಿ ಗೆಲುವು ಸಾಧಿಸಿದೆ.
ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಕಾಂಗ್ರೆಸ್ ಮಡಿಲಿಗೆ. ಸಾರಿಗೆ ಸಚಿವ ಬಿ.ಶ್ರೀರಾಮುಲುಗೆ ಭಾರಿ ಮುಖಭಂಗವಾಗಿದೆ. ನಾಯಕನಹಟ್ಟಿ ಪ.ಪಂ.ನ 16 ವಾರ್ಡ್ ಗಳಲ್ಲಿ ಕಾಂಗ್ರೆಸ್ 9, ಪಕ್ಷೇತರ ಅಭ್ಯರ್ಥಿಗಳೂ 3 ವಾರ್ಡ್ ಗಳಲ್ಲಿ ಗೆಲುವು ಸಾಧಿಸಿದ್ದು, ಬಿಜೆಪಿ ಖಾತೆ ತೆರೆಯದೆ ಬಿ.ಶ್ರೀರಾಮುಲುಗೆ ಮುಖಭಂಗ ಅನುಭವಿಸಿದ್ದಾರೆ. ಬೆಳಗಾವಿ ಜಿಲ್ಲೆ ಯಕ್ಸಂಬಾ ಪ.ಪಂ ಕಾಂಗ್ರೆಸ್ ತೆಕ್ಕೆಗೆ. 17ವಾರ್ಡ್ ಗಳ ಪೈಕಿ ಕಾಂಗ್ರೆಸ್ 10, ಬಿಜೆಪಿ 1ರಲ್ಲಿ ಗೆಲುವು ಸಾಧಿಸಿದ್ದು ಸಚಿವೆ ಶಶಿಕಲಾ ಜೊಲ್ಲೆ ಸ್ವಗ್ರಾಮದಲ್ಲೇ ಕಾಂಗ್ರೆಸ್ ಗೆ ಗೆಲುವು ದೊರಕಿದೆ.
ಇನ್ನು ಯಾದಗಿರಿಯ ಕಕ್ಕೇರಾ 4 ವಾರ್ಡ್ ಗಳಲ್ಲಿ ಕಾಂಗ್ರೆಸ್ ಗೆದ್ದಿದೆ. ಕುಕನೂರು ಪಟ್ಟಣ ಪಂಚಾಯತ್ನ ಸ್ವ ಕ್ಷೇತ್ರದಲ್ಲಿ ಸಚಿವ ಹಾಲಪ್ಪ ತೀವ್ರ ಮುಖಭಂಗ ವಾಗಿದ್ದು ಕಾಂಗ್ರೆಸ್ 10, ಬಿಜೆಪಿ 9 ರಲ್ಲಿ ಗೆಲುವು ಸಾಧಿಸಿದೆ. ಇನ್ನು ಕೊಪ್ಪಫನ ಕಾರಟಗಿ ಪುರಸಭೆಯಲ್ಲಿ ಕಾಂಗ್ರೆಸ್ 12 ಬಿಜೆಪಿ 10 ಇತರೆ1 ವಾರ್ಡ್ ಗಳಲ್ಲಿ ಜಯಸಾಧಿಸಿವೆ.
ಮತ್ತೊಂದೆಡೆ ಉಡುಪಿ ಜಿಲ್ಲೆ ಕಾಪು ಪುರಸಭೆ ಬಿಜೆಪಿ ಪಾಲಾಗಿದೆ. 23 ವಾರ್ಡ್ ಪೈಕಿ ಬಿಜೆಪಿ 12, ಕಾಂಗ್ರೆಸ್ 7, ಎಸ್ಡಿಪಿಐ 3, ಜೆಡಿಎಸ್ 1 ವಾರ್ಡ್ನಲ್ಲಿ ಗೆಲುವು ಸಾಧಿಸಿದೆ. ಹಾಗೂ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಹಾರೂಗೇರಿ ಪುರಸಭೆ ಬಿಜೆಪಿ ಪಾಲಾಗಿದೆ. 23 ವಾರ್ಡ್‌ಗಳ ಪೈಕಿ 15ವಾರ್ಡ್‌ಗಳಲ್ಲಿ ಜಯ ಸಾಧಿಸಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಕ್ಕಿದೆ. ಕಾಂಗ್ರೆಸ್ 7, ಬಿಜೆಪಿ 15, ಪಕ್ಷೇತರ 1 ಸ್ಥಾನ ಪಡೆದಿದ್ದಾರೆ. ಕಕ್ಕೇರಾ ಪುರಸಭೆಯಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿದೆ. ಬಿಜೆಪಿ ಶಾಸಕ ರಾಜುಗೌಡಗೆ ಬಾರಿ ಮುಖಭಂಗವಾಗಿದೆ.
ಬಿಡದಿ ಪುರಸಭೆಯಲ್ಲಿ ಜೆಡಿಎಸ್ ಗೆಲುವು ಸಾಧಿಸಿದೆ. 23 ವಾರ್ಡ್ ಗಳ ಪೈಕಿ 14 ವಾರ್ಡ್ ಗಳಲ್ಲಿ ಜೆಡಿಎಸ್ ಗೆ ಗೆಲುವು ಸಿಕ್ಕಿದೆ. 9 ವಾರ್ಡ್‌ಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಬಿಡದಿ ಪುರಸಭೆಯಲ್ಲಿ ಖಾತೆ ತೆರೆಯುವಲ್ಲಿ ಬಿಜೆಪಿ ವಿಫಲವಾಗಿದೆ.
