ಬಿಜೆಪಿ ಸೇರ್ಪಡೆ ಸುದ್ದಿಗೆ ಸಿದ್ದರಾಮಯ್ಯ ಖಡಕ್ ಪ್ರತಿಕ್ರಿಯೆ..!

ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ಸೇರ್ತರೆ, ಕೇಂದ್ರದಲ್ಲಿ ಮಂತ್ರಿಯಾಗುವುದು ಫಿಕ್ಸ್ ಎನ್ನುವ ಸುದ್ದಿಗೆ ಸ್ವತಃ ಸಿದ್ದರಾಮಯ್ಯನವರೇ ಪ್ರತಿಕ್ರಿಯಿಸಿದ್ದು, ಅದು ಈ ಕೆಳಗಿನಂತಿದೆ.

siddaramaiah Reacts On He Join to BJP Satement By Baburao Chinchansur

ಬೆಂಗಳೂರು, (ಮಾ. 09): 'ನಾನು ಬಿಜೆಪಿ ಸೇರುತ್ತೇನೆ ಎಂದು ಹೇಳಿರುವುದು ಮೂರ್ಖತನದ ಹೇಳಿಕೆ' ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. 

ಬಿಜೆಪಿಗೆ ಬಂದು ಕೇಂದ್ರ ಮಂತ್ರಿಯಾಗಿತ್ತಾರೆ ಎಂದು ಮಾಜಿ ಸಚಿವ ಬಾಬೂರಾವ್ ಚಿಂಚನಸೂರ ಹೇಳಿಕೆ ನೀಡಿದ್ದರು. ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. 

'ಸಿದ್ದರಾಮಯ್ಯ ಬಿಜೆಪಿಗೆ ಬಂದು ಕೇಂದ್ರ ಮಂತ್ರಿ ಆಗೋದು ಫಿಕ್ಸ್'

ಇದೀಗ ಇದಕ್ಕೆ ಸ್ವತಃ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ನಾನು ಬಿಜೆಪಿ ಸೇರುತ್ತೇನೆ ಎಂದು ಹೇಳಿರುವುದು ಮೂರ್ಖತನದ ಹೇಳಿಕೆ. ಕಾನೂನು ವಿದ್ಯಾರ್ಥಿಯಾಗಿ 1972ರಲ್ಲಿ ರಾಜಕೀಯ ಪ್ರವೇಶ ಮಾಡಿದಾಗಿಂದ ಸಾಮಾಜಿಕ ನ್ಯಾಯ, ಸಮಾನತೆ, ಮೀಸಲಾತಿ ವ್ಯವಸ್ಥೆ ಪರ ಹೋರಾಡುತ್ತಾ ಬಂದಿದ್ದೇನೆ, ಬಿಜೆಪಿ ಈ ಎಲ್ಲಾ ತತ್ವಗಳಿಗೂ ವಿರುದ್ಧವಾಗಿದೆ. ಹೀಗಿರುವಾಗ ಬಿಜೆಪಿ ಸೇರಲು ಸಾಧ್ಯವೇ? ಇದೊಂದು ಮೂರ್ಖತನದ ಪ್ರಚಾರ ಎಂದು ಟ್ವೀಟ್ ಮಾಡಿದ್ದಾರೆ.

ಯಾರೇ ಆಗಲಿ ಒಂದು ಸಿದ್ಧಾಂತಕ್ಕೆ ಬದ್ಧವಾಗಿದ್ದಾಗ ಪದೇ ಪದೇ ಪಕ್ಷ ಬದಲಿಸುವಂತಹ ಸನ್ನಿವೇಶವೇ ಉದ್ಭವಿಸುವುದಿಲ್ಲ. ಅವಕಾಶವಾದಿ ರಾಜಕಾರಣಿಗಳು ಮಾತ್ರ ಅಧಿಕಾರ ಹುಡುಕಿಕೊಂಡು ಹೋಗುತ್ತಾರೆ. ಪ್ರಜಾಪ್ರಭುತ್ವದಲ್ಲಿ ಅಧಿಕಾರ ಜನರಿಂದ ನೇರವಾಗಿ ಸಿಗಬೇಕೇ ಹೊರತು ವಾಮಮಾರ್ಗದ ಮೂಲಕ ಅಧಿಕಾರ ಪಡೆಯಲು ಹಪಹಪಿಸಬಾರದು ಎಂದಿದ್ದಾರೆ.

ಈ ಮೂಲಕ ತಮ್ಮ ಕಾರ್ಯಕರ್ತರಲ್ಲಿ ಮೂಡಿಸಿದ್ದ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಶುಕ್ರವಾರ ಕಲಬುರಗಿಯಲ್ಲಿ ಮಾತನಾಡಿದ್ದ ಬಾಬೂರಾವ್ ಚಿಂಚನಸೂರ, ಸಿದ್ದರಾಮಯ್ಯ ಬಿಜೆಪಿ ಸೇರಿದರೆ ಕೇಂದ್ರ ಸಚಿವರಾಗಲಿದ್ದಾರೆ. ಅವರನ್ನು ನಾನು ಪಕ್ಷಕ್ಕೆ ಸ್ವಾಗತಿಸುತ್ತೇನೆ ಎಂದು ಹೇಳಿಕೆ ಕೊಟ್ಟಿದ್ದರು.

ಮಾರ್ಚ್ 09ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Latest Videos
Follow Us:
Download App:
  • android
  • ios