'ರಾಜ್ಯಗಳಿಗೆ ತುರ್ತಾಗಿ ಬೇಕಾಗಿರುವುದು ನೆರವಿನ ಹಸ್ತವೇ ಹೊರತು ಉಪದೇಶದ ಬುರುಡೆ ಮಾತಲ್ಲ'

ಕೊರೋನಾ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನುದ್ದೇಶಿಸಿದ ಮಾಡಿದ ಭಾಷಣ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು ಹೀಗೆ...

Siddaramaiah reacts On PM 'Narendra Modi Speech about Covid19 rbj

ಬೆಂಗಳೂರು, (ಏ.20): ದೇಶದಲ್ಲಿ ಕೊರೋನಾ ಎರಡನೇ ಅಲೆ ತಾಂಡವವಾಡುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿದ ಮಾತನಾಡಿ ಹಲವು ಉಪದೇಶಗಳನ್ನ ನೀಡಿದರು. ಇನ್ನು ಮೋದಿ ಅವರ ಭಾಷಣಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅಸಮಾಧಾನ ಹೊರಹಾಕಿದ್ದಾರೆ.

ಸಾಮಾಜಿ ಜಾಲತಾಣಗಳಲ್ಲಿ ಬರೆದುಕೊಂಡಿರುವ ಸಿದ್ದರಾಮಯ್ಯ, ಇಂದು (ಏ.20) ರಾತ್ರಿ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ಭಾಷಣ ಅತ್ಯಂತ ನಿರಾಶದಾಯಕ. ಕೊರೊನಾ ಸೋಂಕಿನಿಂದ ತತ್ತರಿಸಿಹೋಗಿರುವ ರಾಜ್ಯಗಳಿಗೆ ತುರ್ತಾಗಿ ಬೇಕಾಗಿರುವುದು ನೆರವಿನ ಹಸ್ತವೇ ಹೊರತು ಉಪದೇಶದ ಬುರುಡೆ ಮಾತಲ್ಲ ಎಂದು ಕಿಡಿಕಾರಿದರು.

ದೇಶವನ್ನುದ್ದೇಶಿ ಮೋದಿ ಮಾತು: ಕೊರೋನಾ ನಿಯಂತ್ರಣಕ್ಕೆ ಮಹತ್ವದ ಸಲಹೆ ನೀಡಿದ ಪ್ರಧಾನಿ

ರಾಜ್ಯದಲ್ಲಿ ಕೊರೊನಾ ಸೋಂಕಿತರು‌ ಚಿಕಿತ್ಸೆಗೆ ಆಮ್ಲಜನಕ ಇಲ್ಲದೆ, ಐಸಿಯು ಹಾಸಿಗೆಗಳಿಲ್ಲದೆ,‌ ರೆಮಿಡಿಸಿವೆರ್‌ನಂತಹ ಪ್ರಾಣರಕ್ಷಕ ಔಷಧಿ ಸಿಗದೆ ಜೀವ ಕಳೆದುಕೊಳ್ಳುತ್ತಿದ್ದಾರೆ. ಈ ಸಮಸ್ಯೆಗಳಿಗೆ ಯಾವುದೇ ಪರಿಹಾರ ನೀಡದ ಮೋದಿ ಜನತೆಗೆ ಜವಾಬ್ದಾರಿಯ ಪಾಠ ಹೇಳಿದ್ದಾರೆ. ಪ್ರಧಾನಿಗಳೇ, ಮೊದಲು ನಿಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಿ ಎಂದಿದ್ದಾರೆ.

ಕೊರೊನಾ ಉಲ್ಭಣಗೊಂಡಿರುವ ಕಾರಣದಿಂದಾಗಿ ಲಾಕ್‌ಡೌನ್ ಅನಿವಾರ್ಯ ಎಂಬಂತೆ ರಾಜ್ಯ ಸರ್ಕಾರ ಮಾತನಾಡುತ್ತಿದೆ. ಲಾಕ್ ಡೌನ್ ಹೇರಿದರೆ ಕಷ್ಟನಷ್ಟಕ್ಕೀಡಾಗುವ ಜನತೆಗೆ ಕೇಂದ್ರಸರ್ಕಾರ ನೀಡುವ ನೆರವಿನ ಘೋಷಣೆಯನ್ನು ಜನ ನಿರೀಕ್ಷಿಸಿದ್ದರು. ಮೋದಿ ಭಾಷಣ 'ನಿಮ್ಮ ತಲೆ ಮೇಲೆ ನಿಮ್ಮ‌ ಕೈ' ಎಂಬ ಸಂದೇಶ ನೀಡಿದೆ.

ಕೊರೊನಾ ಪರಿಣಾಮವನ್ನು ಸಮರ್ಥವಾಗಿ ನಿರ್ವಹಿಸಲಾಗದೆ ರಾಜ್ಯದ ಆರ್ಥಿಕ ಸ್ಥಿತಿ ದಿವಾಳಿಯ ಅಂಚಿಗೆ ಬಂದು ನಿಂತಿದೆ. ಇದಕ್ಕೆ ನ್ಯಾಯಬದ್ಧವಾಗಿ ತೆರಿಗೆ ಪಾಲನ್ನು ನೀಡದಿರುವ ಕೇಂದ್ರ ಸರ್ಕಾರವೂ ಕಾರಣ. ಪ್ರಧಾನಿಯವರೇ, ನೀವು ವಿಶೇಷ ಆರ್ಥಿಕ ನೆರವನ್ನು ಕೊಡುವುದು ಬೇಡ, ನಮ್ಮ ನ್ಯಾಯಬದ್ಧ ಪಾಲನ್ನಷ್ಟಾದರೂ ನೀಡಿ ಪುಣ್ಯ ಕಟ್ಟಿಕೊಳ್ಳಿ ಎಂದು ಮನವಿ ಮಾಡಿದರು.

Latest Videos
Follow Us:
Download App:
  • android
  • ios