ರಮೇಶ್ ಜಾರಕಿಹೊಳಿ ಮತ್ತೆ ಕಾಂಗ್ರೆಸ್ ಸೇರ್ಪಡೆ ಸುದ್ದಿ: ಈ ಬಗ್ಗೆ ಸಿದ್ದು ಪ್ರತಿಕ್ರಿಯಿಸಿದ್ದು ಹೀಗೆ
* ಪಕ್ಷ ಬಿಟ್ಟು ಹೋದವರಿಗೆ ಸಿದ್ದರಾಮಯ್ಯ ಖಡಕ್ ಸಂದೇಶ
* ರಮೇಶ್ ಜಾರಕಿಹೊಳಿ ಮತ್ತೆ ಕಾಂಗ್ರೆಸ್ ಸೇರ್ಪಡೆ ಸುದ್ದಿಗೆ ಸಿದ್ದು ಪ್ರತಿಕ್ರಿಯೆ
* ನಾಯಕತ್ವ ಬದಲಾವಣೆ ಬಗ್ಗೆಯೂ ಹೊಸ ಬಾಂಬ್ ಸಿಡಿಸಿದ ಸಿದ್ದು
ಕೊಪ್ಪಳ, (ಜೂನ್.21): ನಮ್ಮ ಪಕ್ಷಕ್ಕೆ ದ್ರೋಹ ಮಾಡಿ ಹೋದವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಶಾಸಕ ಸ್ಥಾನಕ್ಕೂ ರಾಜೀನಾಮೆ ಕೊಡಲು ಮುಂದಾಗಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮತ್ತೆ ಕಾಂಗ್ರೆಸ್ ನತ್ತ ಮುಖ ಮಾಡುವ ಸಾಧ್ಯತೆ ಬಗ್ಗೆ ಸುದ್ದಿಗಳು ಹರಡುತ್ತಿರುವ ಹಿನ್ನೆಲೆಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಕಾಂಗ್ರೆಸ್ ಗೆ ಮೋಸ ಮಾಡಿ, ವ್ಯಾಪಾರಕ್ಕಾಗಿ ಬಿಜೆಪಿ ಸೇರಿ ಸರ್ಕಾರ ರಚನೆಗೆ ಕಾರಣರಾದವರು. ಈಗ ಮತ್ತೆ ವಾಪಸ್ ಬಂದರೆ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ ಎಂದು ಹೇಳಿದರು.
ಮತ್ತೆ ಮುಂಬೈ ಅಡ್ಡಕ್ಕೆ ಜಾರಕಿಹೊಳಿ, ರಾಜ್ಯ ರಾಜಕಾರಣದಲ್ಲಿ ಹಲ್ ಚಲ್ ಎಬ್ಬಿಸಿದ ಸಾಹುಕಾರ
ಇದೇ ವೇಳೆ ಕಾಂಗ್ರೆಸ್ ನಲ್ಲಿ ಗುಂಪುಗಾರಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಮ್ಮ ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆಯಾಗಲಿ, ಬಣ ರಾಜಕೀಯವಾಗಲಿ ಇಲ್ಲ. ನಮ್ಮಲ್ಲಿರುವುದು ಒಂದೇ ಬಣ ಅದು ಅಖಿಲ ಭಾರತ ಕಾಂಗ್ರೆಸ್ ಬಣ ಎಂದರು.
ಇನ್ನು ಬಿಜೆಪಿಯಲ್ಲಿ ನಾಯಕತ್ವದ ಬಗ್ಗೆ ಗೊಂದಲವಿಲ್ಲದಿದ್ದರೆ ಅರುಣ್ ಸಿಂಗ್ ಸುಮ್ಮನೆ ರಾಜ್ಯಕ್ಕೆ ಬರುತ್ತಿದ್ದರೆ? ಎಂದು ಪ್ರಶ್ನಿಸಿರುವ ಸಿದ್ದರಾಮಯ್ಯ, ನನಗಿರುವ ಮಾಹಿತಿ ಪ್ರಕಾರ ಸಿಎಂ ಯಡಿಯೂರಪ್ಪ ಬದಲಾಗುತ್ತಾರೆ ಎಂದು ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದರು.