ಆರೆಸ್ಸೆಸ್‌ ಕಂಡರೆ ಎಲ್ಲರಿಗೂ ಭಯ: ಸದಾನಂದಗೌಡ ಮಾತಿಗೆ ಸಿದ್ದು ತಿರುಗೇಟು!

ಆರ್‌ಎಸ್‌ಎಸ್‌ ಕಂಡರೆ ನನಗೆ ಭಯ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಹೇಳಿರುವುದು ನೂರಕ್ಕೆ ನೂರರಷ್ಟು ಸತ್ಯ. ಭಯ ಹುಟ್ಟಿಸುವವರನ್ನು ಸಾಮಾನ್ಯ ಭಾಷೆಯಲ್ಲಿ ಭಯೋತ್ಪಾದಕರು ಎನ್ನಲಾಗುತ್ತದೆ.

Siddaramaiah Says Every Indians Fears On RSS After Dv Sadananda Gowda Remark gvd

ಬೆಂಗಳೂರು (ಜೂ.03): ಆರ್‌ಎಸ್‌ಎಸ್‌ ಕಂಡರೆ ನನಗೆ ಭಯ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಹೇಳಿರುವುದು ನೂರಕ್ಕೆ ನೂರರಷ್ಟು ಸತ್ಯ. ಭಯ ಹುಟ್ಟಿಸುವವರನ್ನು ಸಾಮಾನ್ಯ ಭಾಷೆಯಲ್ಲಿ ಭಯೋತ್ಪಾದಕರು ಎನ್ನಲಾಗುತ್ತದೆ. ನನಗೆ ಮಾತ್ರವಲ್ಲ, ಅಹಿಂಸೆಯ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಭಾರತೀಯನಿಗೂ ಆರ್‌ಎಸ್‌ಎಸ್‌ ಕಂಡರೆ ಭಯ ಇದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ಭಯ ಹುಟ್ಟಿಸುವವರನ್ನು ಸಾಮಾನ್ಯ ಭಾಷೆಯಲ್ಲಿ ಭಯೋತ್ಪಾದಕರು ಎನ್ನಲಾಗುತ್ತದೆ. ಡಿ.ವಿ.ಸದಾನಂದಗೌಡ ಅವರು ಯಾಕೆ ತನ್ನ ಮಾತೃಸಂಸ್ಥೆಯ ಮೇಲೆ ಈ ರೀತಿಯ ಆರೋಪ ಮಾಡುತ್ತಿದ್ದಾರೆ ಎನ್ನುವುದನ್ನು ಅವರೇ ಹೇಳಬೇಕು. ಆರ್‌ಎಸ್‌ಎಸ್‌ ಬಗೆಗಿನ ಭಯದ ಕಾರಣದಿಂದಾಗಿಯೇ ಮಹಾತ್ಮ ಗಾಂಧೀಜಿಯವರ ಹತ್ಯೆಯ ನಂತರ ಆರ್‌ಎಸ್‌ಎಸ್‌ ಮೇಲೆ ದೇಶದ ಮೊದಲ ಗೃಹ ಸಚಿವ ವಲ್ಲಭಭಾಯಿ ಪಟೇಲ್‌ ಅವರು ನಿಷೇಧ ಹೇರಿದ್ದು ಎನ್ನುವುದು ನೆನಪಿರಲಿ ಎಂದು ಹೇಳಿದ್ದಾರೆ.

ಮಸೀದಿ ಜಾಗದಲ್ಲಿ ದೇವಸ್ಥಾನ ನಿರ್ಮಿಸಿದ್ದರೆ ಸಿದ್ದರಾಮಯ್ಯ ಏನಂತಿದ್ದರು?: ಸಚಿವ ಕೋಟಾ ಪ್ರಶ್ನೆ

ಉನ್ನತ ಪದಾಧಿಕಾರದಿಂದ ಈ ದೇಶದ ಬಹುಸಂಖ್ಯಾತ ಹಿಂದೂಗಳಾದ ದಲಿತರು ಮತ್ತು ಹಿಂದುಳಿದ ಜಾತಿಗಳನ್ನು ದೂರ ಇಟ್ಟಿರುವ ಕಾರಣಕ್ಕಾಗಿಯೇ ಈ ಸಮುದಾಯಗಳಂತೆ ನನಗೂ ಆರ್‌ಎಸ್‌ಎಸ್‌ ಬಗ್ಗೆ ಭಯ ಇದೆ. ಯಾವುದೇ ವ್ಯಕ್ತಿ-ಸಿದ್ಧಾಂತ-ಸಂಸ್ಥೆ ಇತರರಲ್ಲಿ ಗೌರವ ಹುಟ್ಟಿಸಬೇಕೆ ಹೊರತು ಭಯ ಹುಟ್ಟಿಸುವುದಲ್ಲ. ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಾದವರು ಭಯವನ್ನು ಉತ್ಪಾದಿಸುವವರೇ ಹೊರತು ಭಯಪಡುವವರಲ್ಲ ಎಂದು ತಿರುಗೇಟು ನೀಡಿದ್ದಾರೆ.

'ಆರ್‌ಎಸ್‌ಎಸ್‌ ಟೀಕಿಸೋದನ್ನ ಸಿದ್ದರಾಮಯ್ಯ ನಿಲ್ಲಿಸದಿದ್ದರೆ ಪರಿಸ್ಥಿತಿ ಸರಿಯಿರಲ್ಲ'

ಆರ್‌ಎಸ್‌ಎಸ್‌ ಉನ್ನತ ಪದಾಧಿಕಾರ ಯಾಕೆ ಒಂದು ಜಾತಿಗೆ ಸೀಮಿತವಾಗಿದೆ? ಯಾಕೆ ಅಲ್ಲಿ ಹಿಂದುಗಳೇ ಆಗಿರುವ ದಲಿತ ಮತ್ತು ಹಿಂದುಳಿದ ಜಾತಿಗಳಿಲ್ಲ ಎನ್ನುವ ನನ್ನ ಸರಳ ಪ್ರಶ್ನೆಗೆ ಯಾಕೆ ಯಾರೂ ಉತ್ತರಿಸುತ್ತಿಲ್ಲ. ಮೀಸಲಾತಿ, ಭೂ- ಸುಧಾರಣೆಯಂತಹ ಬಹುಸಂಖ್ಯೆಯ ಹಿಂದೂಗಳೇ ಫಲಾನುಭವಿಗಳಾಗಿರುವ ಸಾಮಾಜಿಕ ನ್ಯಾಯದ ಕಾನೂನುಗಳನ್ನೇ ವಿರೋಧಿಸುವ ಆರ್‌ಎಸ್‌ಎಸ್‌ ಬಗ್ಗೆ ಭಯವಲ್ಲದೆ ಪ್ರೀತಿ ಇರಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ. ತಮ್ಮ ಮಕ್ಕಳಿಗೆ ದೇಶ-ವಿದೇಶದಲ್ಲಿ ಉನ್ನತ ಶಿಕ್ಷಣ ಕೊಡಿಸಿ, ದಲಿತ, ಹಿಂದುಳಿದ ಸಮುದಾಯದ ಬಡವರ ಮಕ್ಕಳನ್ನು ಹಿಂಸಾಚಾರಕ್ಕೆ ಇಳಿಸಿ ಜೈಲಿಗೆ ಅಟ್ಟುವ ಆರ್‌ಎಸ್‌ಎಸ್‌ ಬಗ್ಗೆ ಭಯ ಸಹಜ ಅಲ್ಲವೇ ಡಿ.ವಿ.ಸದಾನಂದಗೌಡ ಅವರೇ ಎಂದು ವಾಗ್ದಾಳಿ ನಡೆಸಿದ್ದಾರೆ.

Latest Videos
Follow Us:
Download App:
  • android
  • ios