ನೈತಿಕತೆ ಇದ್ದರೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು: ನಳಿನ್ ಕುಮಾರ್ ಕಟೀಲ್
ಮುಡಾ ಹಗರಣದಲ್ಲಿ ಸಾವಿರಾರು ಕೋಟಿ ರು. ಲೂಟಿ ಆಗಿದೆ. ವಾಲ್ಮೀಕಿ ನಿಗಮದಲ್ಲೂ 187 ಕೋಟಿ ರು. ಹಗರಣ ಆಗಿದೆ. ಆದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರದ ಆಸೆಗೆ ಅಂಟಿ ಕುಳಿತುಕೊಂಡಿದ್ದಾರೆ ಎಂದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್
ಮಂಗಳೂರು(ಆ.21): ಕಾಂಗ್ರೆಸ್ ನಾಯಕರು ಹತಾಶರಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ನೈತಿಕತೆ ಇದ್ದರೆ ಸಿದ್ದರಾಮಯ್ಯ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಒತ್ತಾಯಿಸಿದ್ದಾರೆ.
ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿರುವ ಅವರು, ಮುಡಾ ಹಗರಣದಲ್ಲಿ ಸಾವಿರಾರು ಕೋಟಿ ರು. ಲೂಟಿ ಆಗಿದೆ. ವಾಲ್ಮೀಕಿ ನಿಗಮದಲ್ಲೂ 187 ಕೋಟಿ ರು. ಹಗರಣ ಆಗಿದೆ. ಆದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರದ ಆಸೆಗೆ ಅಂಟಿ ಕುಳಿತುಕೊಂಡಿದ್ದಾರೆ ಎಂದರು.
ಬಿಜೆಪಿ ಅಧ್ಯಕ್ಷರಂತೆ ರಾಜ್ಯಪಾಲರ ಕೆಲಸ: ಬಿ.ಕೆ. ಹರಿಪ್ರಸಾದ್
ಹೋರಾಟದ ನೆಪದಲ್ಲಿ ಕಾಂಗ್ರೆಸ್ ಆರಾಜಕತೆ ಸೃಷ್ಟಿಸಲು ಪ್ರಯತ್ನಿಸುತ್ತಿದೆ. ಕಾನೂನು ಸುವ್ಯವಸ್ಥೆ ಹದಗೆಡಲು ಕಾರಣವಾಗುತ್ತಿದೆ. ರಾಜ್ಯಪಾಲರ ನಡೆ ಸಮರ್ಥನೀಯವಾಗಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವ ರಾಜ್ಯಪಾಲರನ್ನು ನಿಂದಿಸುತ್ತಿರುವುದು ಕಾಂಗ್ರೆಸ್‌ನ ಹೇಯ ರಾಜಕಾರಣ ಎಂದು ನಳಿನ್ ಹೇಳಿದರು.