ಸಿದ್ದರಾಮಯ್ಯ ರಾಜೀನಾಮೆ ನೀಡಿ ನೈತಿಕತೆಯ ಮೆಲ್ಪಂಕ್ತಿ ಮೆರೆಯಬೇಕು: ಬಸವರಾಜ ಬೊಮ್ಮಾಯಿ
ಸಿಎಂ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ರಾಜಕಾರಣದಲ್ಲಿ ಅವರದ್ದೇಯಾದ ಗುರುತಿದೆ. ತಮ್ಮದೇ ಜನಾಭಿಪ್ರಾಯ ಇದೆ . ಅದನ್ನು ಉಳಿಸಿಕೊಂಡು ಹೋಗಬೇಕಾದರೆ ನೈತಿಕತೆಯ ಮೆಲ್ಪಂಕ್ತಿ ಮೆರೆಯಬೇಕು. ಎಲ್ಲರಂತೆ ಉದಾಹರಣೆ ಕೊಟ್ರೆ ಇವರೂ ಅವರ ಸಾಲಿಗೆ ಸೇರ್ತಾರೆ: ಮಾಜಿ ಸಿಎಂ ಹಾಗೂ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ(ಸೆ.26): ತಮಗಿರೋ ಗೌರವ ಉಳಿಯಬೇಕೆಂದ್ರೆ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಬೇಕು ಎಂದು ಮಾಜಿ ಸಿಎಂ ಹಾಗೂ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಇಂದು(ಗುರುವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ ಅವರು, ಸಿಎಂ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ರಾಜಕಾರಣದಲ್ಲಿ ಅವರದ್ದೇಯಾದ ಗುರುತಿದೆ. ತಮ್ಮದೇ ಜನಾಭಿಪ್ರಾಯ ಇದೆ . ಅದನ್ನು ಉಳಿಸಿಕೊಂಡು ಹೋಗಬೇಕಾದರೆ ನೈತಿಕತೆಯ ಮೆಲ್ಪಂಕ್ತಿ ಮೆರೆಯಬೇಕು. ಎಲ್ಲರಂತೆ ಉದಾಹರಣೆ ಕೊಟ್ರೆ ಇವರೂ ಅವರ ಸಾಲಿಗೆ ಸೇರ್ತಾರೆ. ಅವರ ವಿರುದ್ಧ ದೂರು ಕೊಟ್ಟಿದ್ದಾರೆ. ರಾಜ್ಯಪಾಲರು ಆದೇಶ ಕೊಟ್ಟ ಅದರ ನಂತರ ಹೈಕೋರ್ಟ್ ಹಾಗೂ ಸೇಷನ್ ಕೋರ್ಟ್ ಆದೇಶ ಕೊಟ್ಟಿದೆ. ಪ್ರತಿ ಹಂತದಲ್ಲೂ ಕೇಸ್ ಇನ್ನಷ್ಟು ಬಿಗಿಗೊಳ್ಳುತ್ತಿದೆ. ಮುಂದೆ ಚಿಂತನೆ ಮಾಡುವ ಅವಶ್ಯಕತೆ ಇದೆ. ಕೋರ್ಟ್ ನಲ್ಲಿ ಫೈಟ್ ಮಾಡೋಕೆ ಯಾರಿಗಾದ್ರೂ ಅವಕಾಶ ಇದೆ. ಸಾರ್ವಜನಿಕವಾಗಿ ಅವರ ಮೇಲೆ ಇರುವ ವಿಶ್ವಾಸ ಉಳಿಸಿಕೊಳ್ಳಬೇಕು ಅದನ್ನು ಉಳಿಸಿಕೊಂಡು ಹೋಗ್ತಾರೆ ಅನ್ನೋ ವಿಶ್ವಾಸ ಇದೆ ಎಂದು ತಿಳಿಸಿದ್ದಾರೆ.
ನೈತಿಕತೆ ಬಗ್ಗೆ ಹೇಳುವ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆಗೆ ಸಹಕರಿಸಲಿ: ಆರಗ ಜ್ಞಾನೇಂದ್ರ
ವಾಲ್ಮೀಕಿ ಹಗರಣ ಈಗಾಗಲೇ ಒಂದು ಹಂತ ತಲುಪಿದೆ. ಎಸ್‌ಐಟಿಯಲ್ಲಿ ಮಂತ್ರಿಗಳು, ಅಧ್ಯಕ್ಷರ ಹೆಸರಿಲ್ಲದೆ ಚಾರ್ಜ್ ಶೀಟ್ ಸಲ್ಲಿಸಿದ್ರು. ಅವಾಗಲೇ ಮುಚ್ಚಿ ಹಾಕುವ ಪ್ರಯತ್ನ ಮಾಡಿದ್ರು. ಆದ್ರೆ ಸಿಬಿಐ, ಇಡಿಯಲ್ಲಿ ತನಿಖೆ ಮಾಡ್ತಿರೋದ್ರಿಂದ ಅವರು ಚಾರ್ಜ್ ಶೀಟ್ ಹಾಕಿದ್ದಾರೆ. ಕ್ರಮ ಕೈಗೊಳ್ಳೋದು ಅನಿವಾರ್ಯ. ತಪ್ಪು ಆದಲ್ಲಿ ವಿರೋಧ ಪಕ್ಷವಾಗಿ ಹೋರಾಟ ಮಾಡುವ ಅವಶ್ಯಕತೆ ಇದೆ ಎಂದು ಹೇಳಿದ್ದಾರೆ.
ಅಹಿಂದ ಬೆಂಗಳೂರು ಚಲೋಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಬಸವರಾಜ ಬೊಮ್ಮಾಯಿ ಅವರು, ಅದರ ಬಗ್ಗೆ ನಾನು ಏನು ಹೇಳಿಕೆ ನೀಡಲ್ಲ. ಸಿದ್ದರಾಮಯ್ಯ ವಿರುದ್ಧ ಬಿಜೆಪಿಯಿಂದ ಹೋರಾಟ ಮುಂದುವರಿಯಲಿದೆ ಎಂದಷ್ಟೇ ತಿಳಿಸಿದ್ದಾರೆ.
ಬಿಜೆಪಿಗೆ ಯಾವ ನೈತಿಕತೆ ಇದೆ ಅನ್ನೋ ವಿಚಾರದ ಬಗ್ಗೆ ಮಾತನಾಡಿದ ಬೊಮ್ಮಾಯಿ, ಯಾರ ಮೇಲೆ ಆರೋಪ ಇದೆ, ಇಲ್ಲಾ ಅನ್ನೋದು ಪ್ರಶ್ನೆ ಅಲ್ಲಾ. ಈಗ ಸಿದ್ದರಾಮಯ್ಯ ಅವರ ಪ್ರಶ್ನೆ ಬಂದಿದೆ. ಹಿಂದೆ ಅವರು ವಿರೋಧ ಪಕ್ಷ ಇದ್ದಾಗ ಎಲ್ಲರ ನೈತಿಕತೆ ಪ್ರಶ್ನೆ ಮಾಡ್ತಿದ್ರು, ಈಗ ಅವರು ಮುಖ್ಯಮಂತ್ರಿ ಆಗಿದ್ದಾರೆ. ಅವರ ನೈತಿಕತೆ ಪ್ರಶ್ನೆ ಮಾಡ್ಕೊಳ್ಳಬೇಕು. ಅದಕ್ಕೆ ಉತ್ತರ ಕೊಡಬೇಕು ಎಂದು ಹೇಳಿದ್ದಾರೆ.