ಪಂಚಮಸಾಲಿ, ಒಕ್ಕಲಿಗ ಮೀಸಲು ಕಣ್ಣೊರೆಸುವ ತಂತ್ರ: ಸಿದ್ದು ಟೀಕೆ

ಡಬಲ್‌ ಇಂಜಿನ್‌ ಸರ್ಕಾರಕ್ಕೆ ಗೆಜೆಟ್‌ ನೋಟಿಫಿಕೇಶನ್‌ ಹೊರಡಿಸಲು ಆಗುತ್ತಿಲ್ಲ. 1.50 ಲಕ್ಷ ಕೋಟಿ ನೀರಾವರಿಗೆ ನೀಡುವುದಾಗಿ ಬಿಜೆಪಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು. ಬರೀ .45 ಸಾವಿರ ಕೋಟಿ ಖರ್ಚು ಮಾಡಿದೆ. ಇನ್ನೂ .100 ಕೋಟಿ ಖರ್ಚು ಏಕೆ ಮಾಡಿಲ್ಲ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ

Siddaramaiah Slams Karnataka BJP Government grg

ವಿಜಯಪುರ(ಜ.01): ಒಕ್ಕಲಿಗರಿಗೆ ಮತ್ತು ಲಿಂಗಾಯತರಿಗೆ ಸರ್ಕಾರ ಘೋಷಣೆ ಮಾಡಿರುವ ಮೀಸಲಾತಿ ಕಣ್ಣೊರೆಸುವ ತಂತ್ರ ಅಷ್ಟೆ. ಅದಕ್ಕೆ ಸಂವಿಧಾನದಲ್ಲಿ ಯಾವುದೇ ಮಾನ್ಯತೆ ಇಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಶನಿವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಒಕ್ಕಲಿಗರ ಸಮಾಜವನ್ನು 2ಸಿ ಮತ್ತು ಲಿಂಗಾಯತ ಸಮುದಾಯದವನ್ನು 2ಡಿಗೆ ಸೇರ್ಪಡೆ ಮಾಡಿರುವ ಕುರಿತು ಅಧ್ಯಯನ ಮಾಡಬೇಕಿದೆ. 3ಎ, 3ಬಿ ಜಾತಿಗಳು 2ಸಿ ಮತ್ತು 2ಡಿಗೆ ಬರುತ್ತವೆಯಾ? 2ಸಿ, 2ಡಿ ಅವರಿಗೆ ಇವರು ಏನೆಲ್ಲ ಕೊಡ್ತಾರೆ ಎಂದು ಗೊತ್ತಾಗಬೇಕಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಇದೇ ವೇಳೆ ಗುತ್ತಿಗೆದಾರ ಕೆಂಪಣ್ಣ ಜೊತೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗುತ್ತಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಕಟೀಲ್‌ ಒಬ್ಬ ವಿದೂಷಕ. ವಿದೂಷಕನ ಮಾತಿಗೆ ನಾನು ಉತ್ತರ ನೀಡುವುದಿಲ್ಲ ಎಂದು ಹೇಳಿದರು. ಕೆಂಪಣ್ಣ ಯಾರು ಎಂಬುವುದು ತಮಗೆ ಗೊತ್ತಿಲ್ಲ ಎಂದರು.

Karnataka Assembly Election 2023: ಕಾಂಗ್ರೆಸ್ ಸೇರ್ಪಡೆ ಬಗ್ಗೆ ಸಂಸದ ರಮೇಶ ಜಿಗಜಿಣಗಿ ಪ್ರತಿಕ್ರಿಯೆ

ಕೃಷ್ಣಾ ಮೇಲ್ದಂಡೆ ಯೋಜನೆ ವಿಷಯದಲ್ಲಿ ನಾವು ನುಡಿದಂತೆ ನಡೆದಿದ್ದೇವೆ. ಯುಕೆಪಿ ಯೋಜನೆಗೆ 1964ರಲ್ಲಿ ಆಗಿನ ಪ್ರಧಾನ ಮಂತ್ರಿ ಲಾಲ್‌ಬಹದ್ದೂರ ಶಾಸ್ತ್ರಿ ಅವರು ಶಂಕುಸ್ಥಾಪನೆ ನೆರವೇರಿಸಿದ್ದರು. 58 ವರ್ಷವಾದರೂ ಇನ್ನು ವಿಳಂಬ ಮಾಡಲಾಗುತ್ತಿದೆ. ಬ್ರಿಜೇಶ್‌ಕುಮಾರ ನ್ಯಾಯಾಧಿಕರಣ ತೀರ್ಪು ನೀಡಿದೆ. 9 ವರ್ಷವಾದರೂ ಕೇಂದ್ರ ಸರ್ಕಾರ ಗೆಜೆಟ್‌ ನೋಟಿಫಿಕೇಶನ್‌ ಹೊರಡಿಸಿಲ್ಲ. ಇದರಿಂದಾಗಿ ಈ ಯೋಜನೆ ವಿಳಂಬವಾಗುತ್ತಿದೆ ಎಂದರು.
ಡಬಲ್‌ ಇಂಜಿನ್‌ ಸರ್ಕಾರಕ್ಕೆ ಗೆಜೆಟ್‌ ನೋಟಿಫಿಕೇಶನ್‌ ಹೊರಡಿಸಲು ಆಗುತ್ತಿಲ್ಲ. 1.50 ಲಕ್ಷ ಕೋಟಿ ನೀರಾವರಿಗೆ ನೀಡುವುದಾಗಿ ಬಿಜೆಪಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು. ಬರೀ .45 ಸಾವಿರ ಕೋಟಿ ಖರ್ಚು ಮಾಡಿದೆ. ಇನ್ನೂ .100 ಕೋಟಿ ಖರ್ಚು ಏಕೆ ಮಾಡಿಲ್ಲ ಎಂದು ಪ್ರಶ್ನಿಸಿದರು. ನಾವು ಮತ್ತೆ ಅಧಿಕಾರಕ್ಕೆ ಬಂದರೆ . 2ಲಕ್ಷ ಕೋಟಿ ಖರ್ಚು ಮಾಡಿ ರಾಜ್ಯದ ಎಲ್ಲ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುತ್ತೇವೆ ಎಂದು ತಿಳಿಸಿದರು.

Latest Videos
Follow Us:
Download App:
  • android
  • ios