'ಕೊರೋನಾ ಚಿಕಿತ್ಸೆಗೆ ನಿಗದಿಪಡಿಸಿರೋ ದರ ಸೋಂಕಿತರಿಗೆ ಹೃದಯಾಘಾತವಾಗುವಂತಿದೆ '

ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಚಿಕಿತ್ಸೆಗೆ ನಿಗದಿಪಡಿಸಿರೋ ದರ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 

Siddaramaiah Slams Karnataka Govt Over fixed private hospital fee for covid19 treatment

ಬೆಂಗಳೂರು, (ಜೂನ್.23) : ಪಕ್ಷದ ನಾಯಕ ಸಿದ್ದರಾಮಯ್ಯ ಇದೀಗ ಕೊರೋನಾ ಸೋಂಕಿತರಿಗೆ ದರ ನಿಗದಿಪಡಿಸಿದ್ದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದು,  ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಬೇಕು ಒತ್ತಾಯಿಸಿದ್ದಾರೆ.

 ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ. ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಚಿಕಿತ್ಸೆಗಾಗಿ ರಾಜ್ಯ ಸರ್ಕಾರ  ನಿಗದಿಪಡಿಸಿರುವ ವೆಚ್ಚದ ವಿವರ ಸೋಂಕಿತರಿಗೆ ಹೃದಯಾಘಾತವಾಗುವಂತಿದೆ. ಒಂದು ಜವಾಬ್ದಾರಿಯುತ ಸರ್ಕಾರ ತನ್ನೆಲ್ಲ ಸೂಕ್ಷ್ಮತೆಯನ್ನು ಕಳೆದುಕೊಂಡು ಇಷ್ಟೊಂದು ಅಮಾನವೀಯ, ಇಷ್ಟೊಂದು ಜನವಿರೋಧಿಯಾಗಲು ಹೇಗೆ ಸಾಧ್ಯ? ಎಂದು ಜರಿದಿದ್ದಾರೆ.

ಕೊರೋನಾ ವಿರುದ್ಧ ಹೋರಾಟಕ್ಕೆ ಖಾಸಗಿ ಆಸ್ಪತ್ರೆಗಳು ಅಖಾಡಕ್ಕೆ: ಇಲ್ಲಿದೆ ದರ ಪಟ್ಟಿ

ಕೊರೋನಾ ಸೋಂಕನ್ನು ನಿಯಂತ್ರಿಸಲು ಸಂಪೂರ್ಣ ವಿಫಲವಾಗಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ತಾವು ನಿರ್ವಹಿಸಬೇಕಾಗಿರುವ ಜವಾಬ್ದಾರಿಯನ್ನು ಖಾಸಗಿಯವರ ಹೆಗಲಿಗೆ ವರ್ಗಾಯಿಸಲು ಹೊರಟಿವೆ. ಈ ಮೂಲಕ ಬಡ-ಅಸಹಾಯಕ ಜನರನ್ನು ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬಲಿಪಶುಮಾಡಲು ನಿರ್ಧರಿಸಿದೆ ಎಂದು ಕಿಡಿಕಾರಿದರು.

ಕೊರೋನಾ ಸೋಂಕಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ನಿಗದಿಪಡಿಸಿರುವ ಚಿಕಿತ್ಸಾ ಶುಲ್ಕವನ್ನು ಕಣ್ಣುಮುಚ್ಚಿ ಅನುಮೋದಿಸಿ ಜಾರಿಗೆ ತರಲು ಹೊರಟಿರುವ ರಾಜ್ಯ ಸರ್ಕಾರ ಖಾಸಗಿ ಆಸ್ಪತ್ರೆಗಳ ಲಾಬಿಗೆ ಮಣಿದಂತಿದೆ. ಸಿಎಂ ಯಡಿಯೂರಪ್ಪ ನೆರವಾಗಲು ಹೊರಟಿರುವುದು ಸೋಂಕಿತರಿಗೋ? ಖಾಸಗಿ ಆಸ್ಪತ್ರೆಗಳಿಗೋ? ಎಂದು ಪ್ರಶ್ನಿಸಿದರು.

ಸ್ವಾಂಡರ್ಟ್ ಟ್ರೀಟ್‌ಮೆಂಟ್ ಆಗ್ರಹ
ಕೊರೋನಾ ರೋಗಿಗಳಿಗೆ ಎಲ್ಲಾ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಬೇಕು. ಜೊತೆಗೆ ಸ್ವಾಂಡರ್ಟ್ ಟ್ರೀಟ್‌ಮೆಂಟ್ ಪ್ರೊಟೊಕಾಲ್ ಜಾರಿಗೆ ತರಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಆಸ್ಪತ್ರೆಗಳಲ್ಲಿ ಸ್ಟಾಂಡರ್ಡ್ ಟ್ರೀಟ್ ಮೆಂಟ್ ಪ್ರೊಟೊಕಾಲ್ ಜಾರಿಯಾಗುತ್ತಿರುವ ಬಗ್ಗೆ ನಿಗಾ ವಹಿಸಲು ಸಮಿತಿ ರಚನೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. 

Latest Videos
Follow Us:
Download App:
  • android
  • ios