ಕೋವಿಡ್‌ -19 ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂಬ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಕ್ಕೆ ಆರೋಗ್ಯ ಸಚಿವ ಬಿ ಶ್ರೀರಾಮುಲು ಉತ್ತರ ನೀಡಿದ್ದರು. ಇದೀಗ ಶ್ರೀರಾಮುಲು ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಬೆಂಗಳೂರು(ಜು.20): ಕೊರೊನಾ ನಿಯಂತ್ರಣದಲ್ಲಿನ ಅವ್ಯವಹಾರದ ಬಗೆಗಿನ ನನ್ನ ಆರೋಪಕ್ಕೆ ಪತ್ರಿಕಾಗೋಷ್ಠಿಯಲ್ಲಿ ಉತ್ತರ ನೀಡಲು ಪ್ರಯತ್ನಿಸಿರುವ ಆರೋಗ್ಯ ಸಚಿವ ಶ್ರೀರಾಮುಲು ಮತ್ತು ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ ಸತ್ಯವನ್ನು ಬಿಚ್ಚಿಡುವ ಬದಲಿಗೆ ಸುಳ್ಳನ್ನು ಮುಚ್ಚಿಡಲು ಪರದಾಡಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಶ್ರೀರಾಮುಲು ಅವರು ಕೋವಿಡ್‌ -19 ಉಪಕರಣಗಳ ಖರೀದಿಯ ಲೆಕ್ಕ ಹೇಳಿಕೆ ಸರಣಿ ಟ್ವೀಟ್​​ಗಳ ಮೂಲಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಒಟ್ಟು 323 ರೂ. ಕೋಟಿ ಖರ್ಚು ಮಾಡಿದೆ ಎಂದು ಶ್ರೀರಾಮುಲು ತಿಳಿಸಿದ್ದಾರೆ. ಆದರೆ ಅವರು ನೀಡಿರುವ ಲೆಕ್ಕವನ್ನು ಎಷ್ಟೇ ಕೂಡಿಸಿ ಕಳೆದರೂ ಅದು 100 ಕೋಟಿ ರೂಪಾಯಿ ದಾಟುವುದಿಲ್ಲ ಎಂದು ಮತ್ತೊಂದು ಟ್ವೀಟ್​​ನಲ್ಲಿ ಸಿದ್ದರಾಮಯ್ಯ ಕುಟುಕಿದ್ಧಾರೆ.

ಭ್ರಷ್ಟಾಚಾರ ಆರೋಪ: ಲೆಕ್ಕ ಕೊಟ್ಟ ಶ್ರೀರಾಮುಲು, ಅವ್ಯವಹಾರ ಸಾಬೀತಾದ್ರೆ ರಾಜೀನಾಮೆ ಸವಾಲ್

Scroll to load tweet…

ನಾನು ಕೇಳಿರುವ ಯಾವ ಪ್ರಶ್ನೆಗಳಿಗೆ ಸಚಿವರು ಉತ್ತರ ನೀಡಿದ್ದಾರೆನ್ನುವುದು ನನಗೆ ತಿಳಿದಿಲ್ಲ. ರಾಜ್ಯ ಸರ್ಕಾರದ ಲಿಖಿತ ಸ್ಪಷ್ಟನೆ ಕೈ ಸೇರಿದ ನಂತರ ವಿವರವಾಗಿ ಪ್ರತಿಕ್ರಿಯಿಸುವೆ. ಆದರೆ, ಪತ್ರಿಕಾಗೋಷ್ಠಿಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಕಾಣಲಿಲ್ಲ. ಸರ್ಕಾರದೊಳಗೊಂದು ಸರ್ಕಾರ ಇದೆಯೇ? ಎಂದಿದ್ದಾರೆ.

ಉಳಿದ ದುಡ್ಡಿಗೆ ಲೆಕ್ಕ ಎಲ್ಲಿದೆ? ಪಿಎಂ ಕೇರ್ಸ್​ನಲ್ಲಿ ಕೇಂದ್ರ ಸರ್ಕಾರ ತಲಾ 4ರೂ. ಲಕ್ಷ ಕೊಟ್ಟು ವೆಂಟಿಲೇಟರ್ ಖರೀದಿಸಿದೆ. ನಮ್ಮಲ್ಲಿ ಮಾತ್ರ ವೆಂಟಿಲೇಟರ್‌ಗಳನ್ನು 12 ರಿಂದ 18 ಲಕ್ಷ ರೂಪಾಯಿ ವರೆಗೆ ನೀಡಿ ಖರೀದಿಸಲಾಗಿದೆ. ಅಂತಹ ವಿಶೇಷತೆ ಈ ವೆಂಟಿಲೇಟರ್​​ಗಳಲ್ಲೇನಿದೆ? ಇವುಗಳ ಬೆಲೆಯಲ್ಲಿ ಯಾಕೆ ಇಷ್ಟೊಂದು ವ್ಯತ್ಯಾಸ? ಎಂದರು,

Scroll to load tweet…

ಬಾಯಲ್ಲೇ ಲೆಕ್ಕ ಒಪ್ಪಿಸಿದ್ರೆ ಹೆಂಗೆ? ಜುಲೈ 23ಕ್ಕೆ ನಾನ್ ಲೆಕ್ಕ ಕೊಡ್ತೀನಿ ಎಂದ ಸಿದ್ದರಾಮಯ್ಯ

ಆರೋಗ್ಯ ಸಚಿವರು ಮತ್ತು ಉಪಮುಖ್ಯಮಂತ್ರಿಗಳಿಬ್ಬರೂ ಖರೀದಿ ಮಾಡಿರುವ ಸಲಕರಣೆಗಳ ದುಬಾರಿ ದರವನ್ನು ಸಮರ್ಥಿಸುತ್ತಾ, ದರ ವ್ಯತ್ಯಾಸಕ್ಕೆ ಗುಣಮಟ್ಟದಲ್ಲಿನ ವ್ಯತ್ಯಾಸ ಕಾರಣ ಎಂದು ಹೇಳಿದ್ದಾರೆ. ಆದರೆ ಇದನ್ನು ತಾಂತ್ರಿಕವಾಗಿ ಸಮರ್ಥಿಸುವ ಯಾವ ದಾಖಲೆಗಳನ್ನು ಯಾಕೆ ನೀಡಿಲ್ಲ? ಎಂದು ಪ್ರಶ್ನಿಸಿದರು.

Scroll to load tweet…