Asianet Suvarna News Asianet Suvarna News

ರಸಗೊಬ್ಬರದ ಬೆಲೆ ಏರಿಕೆ: ಧ್ವನಿ ಎತ್ತಿದ ಸಿದ್ದರಾಮಯ್ಯ

ಕೇಂದ್ರ ಸರ್ಕಾರವು ರಸಗೊಬ್ಬರ ಬೆಲೆ ಏರಿಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ.

siddaramaiah slams modi government over fertilizer price hiked rbj
Author
Bengaluru, First Published Apr 9, 2021, 5:00 PM IST

ಬೆಂಗಳೂರು, (ಏ.09): ಕೃಷಿ ವಿರೋಧಿ ಕಾಯ್ದೆಗಳ ಮೂಲಕ ರೈತರ ಬದುಕನ್ನು ಶಾಶ್ವತವಾಗಿ ಘಾಸಿ‌ಮಾಡಿರುವ ಕೇಂದ್ರದ ಬಿಜೆಪಿ ಸರ್ಕಾರ, ಇದೀಗ ರಸಗೊಬ್ಬರದ ಬೆಲೆ ಏರಿಸಿ ಅವರ ಗಾಯದ ಮೇಲೆ ಬರೆ ಎಳೆದಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ರಸಗೊಬ್ಬರ ಬೆಲೆ ಏರಿಕೆ ಖಂಡಿಸಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕೇಂದ್ರದ ರೈತ ಶತೃ ನರೇಂದ್ರ ಮೋದಿ ಸರ್ಕಾರ ರಸಗೊಬ್ಬರದ ಬೆಲೆಗಳನ್ನು ಶೇ. 60 ರಷ್ಟು ಹೆಚ್ಚಿಸಿದೆ. ಡಿ.ಎ.ಪಿ ಗೊಬ್ಬರ ಏಪ್ರಿಲ್ 1 ರಿಂದ ಒಂದು ಕ್ವಿಂಟಾಲಿಗೆ 1400 ಗಳಷ್ಟು ಬೆಲೆ ಜಾಸ್ತಿಯಾಗುತ್ತಿದೆ. ಇದುವರೆಗೆ 2,400 ರೂಪಾಯಿಗಳಿದ್ದ ಬೆಲೆ ಈಗ 3,800 ರೂ ಗಳಾಗುತ್ತಿದೆ. ಸಾರಜನಕ, ರಂಜಕ ಮತ್ತು ಪೊಟ್ಯಾಷ್‌ಗಳ ಮೇಲಿನ ಬೆಲೆ ಕ್ವಿಂಟಾಲ್ ಗೆ ರೂ.1250 ಹೆಚ್ಚಿಸಿದ್ದಾರೆ. ರೂ.2350 ಗೆ ಸಿಗುತ್ತಿದ್ದ ಗೊಬ್ಬರ ಈಗ ರೂ.3600 ರಷ್ಟಾಗಿದ್ದು, ರೈತರು ನಿಸ್ಸಂಶಯವಾಗಿ ದಿವಾಳಿಯಾಗಲಿದ್ದಾರೆ ಎಂದಿದ್ದಾರೆ.

 ರಸಗೊಬ್ಬರ ಭಾರಿ ದುಬಾರಿ : ರೈತರಿಗೆ ದೊಡ್ಡ ಶಾಕ್‌

ಕಳೆದ ವರ್ಷ ರೂ.1,33,947 ಕೋಟಿ ರಸಗೊಬ್ಬರಕ್ಕಾಗಿ ಸಬ್ಸಿಡಿ ನೀಡಲಾಗಿತ್ತು. ಈಗ ಅದು ರೂ.79,530 ಕೋಟಿಗೆ ಇಳಿಸಿದ್ದಾರೆ. ಆದ್ದರಿಂದಲೇ ಏಪ್ರಿಲ್ 1 ರಿಂದ ಬೆಲೆ ಹೆಚ್ಚಾಗಿದೆ. ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು ಪ್ರಶ್ನಿಸದ ರಾಜ್ಯ ಬಿಜೆಪಿ ಸರ್ಕಾರ ಮತ್ತು ರಾಜ್ಯವನ್ನು ಪ್ರತಿನಿಧಿಸುವ ಬಿಜೆಪಿ ಸಂಸದರ ಗುಲಾಮಿ ಮನಸ್ಥಿತಿ ಕರ್ನಾಟಕವನ್ನು ಸರ್ವನಾಶ‌ ಮಾಡಲಿದೆ ಎಂದು ಮಾಜಿ ಸಿಎಂ ವಾಗ್ದಾಳಿ ನಡೆಸಿದ್ದಾರೆ.

Follow Us:
Download App:
  • android
  • ios