ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಚಾಮರಾಜಪೇಟೆ ಕ್ಷೇತ್ರಕ್ಕೆ ಭೇಟಿ  ಮತ್ತೆ ಕಾರ್ಯಕರ್ತರು ಮುಂದಿನ ಮುಖ್ಯಮಂತ್ರಿ ಘೋಷಣೆ ಮೊಳಗಿಸಿದ್ದಾರೆ. ಮಾಜಿ ಸಚಿವ ಜಮೀರ್‌ ಅಹಮದ್‌ ಖಾನ್‌ ಕಾರ್ಯಕರ್ತರಿಗೆ ಕರೆ 

 ಬೆಂಗಳೂರು (ಜು.16):  ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಚಾಮರಾಜಪೇಟೆ ಕ್ಷೇತ್ರಕ್ಕೆ ಭೇಟಿ ನೀಡಿದ್ದು, ಮತ್ತೆ ಕಾರ್ಯಕರ್ತರು ಮುಂದಿನ ಮುಖ್ಯಮಂತ್ರಿ ಘೋಷಣೆ ಮೊಳಗಿಸಿದ್ದಾರೆ.

ಅಲ್ಲದೆ, ಕೆಪಿಸಿಸಿ ಅಧ್ಯಕ್ಷರು ಹಾಗೂ ಹೈಕಮಾಂಡ್‌ ಸೂಚನೆ ಹೊರತಾಗಿಯೂ ‘ನೀವು ಮತ ಹಾಕಿದರೆ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುತ್ತಾರೆ’ ಎಂದು ಮಾಜಿ ಸಚಿವ ಜಮೀರ್‌ ಅಹಮದ್‌ ಖಾನ್‌ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ಚರ್ಚೆ: ಅಚ್ಚರಿ ಹೇಳಿಕೆ ಕೊಟ್ಟ ಜಮೀರ್ ಅಹ್ಮದ್

ಫೈನಾನ್ಸ್‌ ಕಂಪನಿಯೊಂದರ ಉದ್ಘಾಟನೆಗೆ ಚಾಮರಾಜಪೇಟೆಗೆ ಆಗಮಿಸಿದ್ದ ವೇಳೆ ಸಿದ್ದರಾಮಯ್ಯ ಅವರನ್ನು ಅಭಿನಂದಿಸಲು ಆಗಮಿಸಿದ್ದ ಸ್ತ್ರೀಶಕ್ತಿ ಸಂಘದ ಸದಸ್ಯರು, ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಘೋಷಣೆ ಕೂಗಿದರು. ಈ ವೇಳೆ ಶಾಸಕ ಜಮೀರ್‌ ಅಹ್ಮದ್‌, ‘ಸಿದ್ದರಾಮಯ್ಯ ಅವರು ಸಿಎಂ ಆಗಬೇಕು ಎಂದರೆ ನೀವೆಲ್ಲಾ ಅವರಿಗೇ ಮತ ಹಾಕಬೇಕು’ ಎಂದರು.

ಸಿದ್ದರಾಮಯ್ಯರನ್ನು ಹೊಗಳಲು ಇದು ಸಮಯವಲ್ಲ ಎಂದ ಕಾಂಗ್ರೆಸ್‌ ನಾಯಕ

ಅಧಿವೇಶನದಲ್ಲಿ ಅಕ್ರಮ ಗಣಿಗಾರಿಕೆ ವಿಚಾರ ಪ್ರಸ್ತಾಪ: ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಜುಲೈ ತಿಂಗಳಲ್ಲಿ ನಡೆಸಬೇಕಾಗಿದ್ದ ವಿಧಾನಮಂಡಲ ಅಧಿವೇಶನ ನಡೆಸುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ಅಧಿವೇಶನದಲ್ಲಿ ಅಕ್ರಮ ಗಣಿಗಾರಿಕೆ, ಕೊರೋನಾ ವೈಫಲ್ಯ, ಭ್ರಷ್ಟಾಚಾರದ ಬಗ್ಗೆ ಪ್ರಸ್ತಾಪಿಸುತ್ತೇವೆ.

ಜುಲೈ ತಿಂಗಳಲ್ಲೇ ಈ ಅಧಿವೇಶನ ನಡೆಯಬೇಕಿತ್ತು. ವರ್ಷಕ್ಕೆ ಕನಿಷ್ಠ 60 ದಿನ ಅಧಿವೇಶನ ನಡೆಸಲೇಬೇಕು. ಆದರೆ ಈ ಸರ್ಕಾರ ನಡೆಸಿಲ್ಲ. ಕೂಡಲೇ ಬೆಳಗಾವಿಯಲ್ಲಿ ಅಧಿವೇಶನ ನಡೆಸಬೇಕು ಎಂದು ಒತ್ತಾಯಿಸಿದರು.