ಏಷಿಯನ್ ಪೇಂಟ್ಸ್ ಕಾರ್ಖಾನೆ ವಿರುದ್ಧದ ಪ್ರತಿಭಟನೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಬಲ ಸೂಚಿಸಿದ್ದಾರೆ. ಅಲ್ಲದೇ ಖಡಕ್ ಎಚ್ಚರಿಕೆ ಸಹ ಕೊಟ್ಟಿದ್ದಾರೆ.

ಮೈಸೂರು, (ಜ.17):  ಜಿಲ್ಲೆಯ ನಂಜನಗೂಡಿನಲ್ಲಿರುವ ಏಷಿಯನ್ ಪೇಂಟ್ಸ್ ಕಾರ್ಖಾನೆ ವಿರುದ್ಧದ ಧರಣಿ 57ನೇ ದಿನಕ್ಕೆ ಕಾಲಿಟ್ಟಿದೆ. ಕೆಲಸ ಕೊಡಿ ಇಲ್ಲವೇ ಭೂಮಿ ವಾಪಸ್‌ ಕೊಡಿ ಎಂದು ಭೂಮಿ ಕಳೆದುಕೊಂಡ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

"

 ಈ ಹೋರಾಟಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಬಲ ನೀಡಿದ್ದು, ನೀವು ನಡೆಸುವ ಹೋರಾಟದಲ್ಲಿ ನಾನೂ ಭಾಗಿಯಾಗುವೆ ಎಂದು ಸ್ಪಷ್ಟಪಡಿಸಿದರು.

'ಗೋ ಮಾಂಸ ತಿನ್ನುವ ಸಿದ್ದರಾಮಯ್ಯ ಜತೆಗೆ ಆರ್‌ಎಸ್‌ಎಸ್‌ ನಾಯಕರು ಮಾತಾಡಲ್ಲ'

ಭೂಮಿ ಕಳೆದುಕೊಂಡವರಿಗೆ ಕಾರ್ಖಾನೆಯಲ್ಲಿ ಕೆಲಸದ ವಿಚಾರ ಸಂಬಂಧ ಕಾರ್ಮಿಕ ಇಲಾಖೆ ಸಚಿವರು, ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದೇನೆ. ಕಾರ್ಖಾನೆಯ ಆಡಳಿತ ಮಂಡಳಿ ಜತೆಗೂ ಚರ್ಚೆ ನಡೆಸಿದ್ದು, ಶೀಘ್ರದಲ್ಲೇ ಸಮಸ್ಯೆ ಇತ್ಯರ್ಥವಾಗಲಿದೆ ಎಂದರು.

ಭೂಮಿ ಕಳೆದುಕೊಂಡವರಿಗೆ ಉದ್ಯೋಗ ನೀಡುವ ವಿಶ್ವಾಸವಿದೆ. ಉದ್ಯೋಗ ಕೊಡದಿದ್ದರೆ ನಾನು ಮಧ್ಯಪ್ರವೇಶ ಮಾಡುತ್ತೇನೆ. ನಿಮ್ಮ ಹೋರಾಟದಲ್ಲಿ ನಾನೂ ಭಾಗಿಯಾಗುವೆ ಎಂದು ಭರವಸೆ ನೀಡಿದರು.