ರಾಜ್ಯದಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯುತ್ತಿರುವ ಕಾಂಗ್ರೆಸ್ ಪಕ್ಷವು ಸಿದ್ದರಾಮಯ್ಯ ಪ್ರಮಾಣವಚನ ಕಾರ್ಯಕ್ರಮಕ್ಕೆ ಮಿತ್ರಪಕ್ಷಗಳ ಗಣ್ಯರಿಗೆ ಆಹ್ವಾನ ನೀಡಿದೆ. ಈ ಮೂಲಕ ಬಿಜೆಪಿ ಮುಂದೆ ಮೈತ್ರಿಕೂಟಗಳ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜುಗೊಳಿಸಿದೆ.
ಬೆಂಗಳೂರು (ಮೇ.20): ರಾಜ್ಯದಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯುತ್ತಿರುವ ಕಾಂಗ್ರೆಸ್ ಪಕ್ಷವು ಸಿದ್ದರಾಮಯ್ಯ ಪ್ರಮಾಣವಚನ ಕಾರ್ಯಕ್ರಮಕ್ಕೆ ಮಿತ್ರಪಕ್ಷಗಳ ಗಣ್ಯರಿಗೆ ಆಹ್ವಾನ ನೀಡಿದೆ. ಈ ಮೂಲಕ ಬಿಜೆಪಿ ಮುಂದೆ ಮೈತ್ರಿಕೂಟಗಳ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜುಗೊಳಿಸಿದೆ.
ರಾಜ್ಯ ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ಅವರು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್, ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್, ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಖ್ ಅಬ್ದುಲ್ಲಾ ಅವರಿಗೆ ಆಹ್ವಾನ ಕಳುಹಿಸಿದೆ. ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ತಮ್ಮ ಪ್ರತಿನಿಧಿಯನ್ನು ಕಳಿಸುವ ಸಾಧ್ಯತೆ ಇದೆ.
ಸಮಸ್ಯೆಗಳ ಆಗರವಾಗಿರುವ ಮಳವಳ್ಳಿ ಪಟ್ಟಣ: ನೂತನ ಶಾಸಕ ನರೇಂದ್ರಸ್ವಾಮಿಗೆ ಸವಾಲು
ಅಲ್ಲದೆ, ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ, ಸಿಪಿಎಂ ನಾಯಕ ಸೀತಾರಾಂ ಯೆಚೂರಿ, ಸಿಪಿಐ ನಾಯಕ ಡಿ. ರಾಜಾ, ಜೆಡಿಯು ಅಧ್ಯಕ್ಷ ಲಲನ್‌ಸಿಂಗ್, ಸಂಸದ ಹಾಗೂ ತಮಿಳುನಾಡಿನ ಎಂಡಿಎಂಕೆ ಅಧ್ಯಕ್ಷ ವೈಕೋ, ಆರ್‌ಸಿಪಿ ಪಕ್ಷದ ಎನ್.ಕೆ. ಪ್ರೇಮಚಂದ್ರನ್, ಸಿಪಿಎಂನ ದೀಪಂಕರ್ ಭಟ್ಟಾಚಾರ್ಯ, ವಿಸಿಕೆ ಪಕ್ಷದ ತಿರುಮಾವಲನ್, ಆರ್‌ಎಲ್‌ಡಿ ನಾಯಕ ಜಯಂತ್ ಚೌಧರಿ ಅವರು ಪದಗ್ರಹಣ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.
ಉಳಿದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ವರಿಷ್ಠರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಉಳಿದಂತೆ ಕಾಂಗ್ರೆಸ್ ಆಡಳಿತವಿರುವ ರಾಜಸ್ತಾನದ ಮುಖ್ಯಮಂತ್ರಿ ಅಶೋಕ್ ಗೆಹಲೋತ್, ಛತ್ತೀಸ್‌ಗಢದ ಭೂಪೇಶ್ ಬಾಘೇಲ್, ಹಿಮಾಚಲದ ಸುಖವಿಂದರ್ ಸಿಂಗ್ ಸುಖು ಅವರಿಗೂ ಆಹ್ವಾನ ನೀಡಲಾಗಿದೆ.
ಚುನಾವಣಾ ಫಲಿತಾಂಶ ದೇಶದ ರಾಜಕೀಯಕ್ಕೆ ದಿಕ್ಸೂಚಿ: ಬಿ.ಬಿ.ನಿಂಗಯ್ಯ
ಕೇರಳ ಸಿಎಂ ಆಹ್ವಾನ ನೀಡದ್ದಕ್ಕೆ ಟೀಕೆ: ಕರ್ನಾಟಕದ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯನವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಆಹ್ವಾನಿಸಿಲ್ಲ. ಈ ಬಗ್ಗೆ ಕೇರಳದ ಆಡಳಿತರೂಢ ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್) ಶುಕ್ರವಾರ ಟೀಕಿಸಿದೆ. ಈ ಕ್ರಮವು ಕಾಂಗ್ರೆಸ್‌ನ ಅಪಕ್ವ ರಾಜಕೀಯ ಮತ್ತು ದೌರ್ಬಲ್ಯಗಳನ್ನು ತೋರಿಸುತ್ತದೆ. ಜತೆಗೆ ಬಿಜೆಪಿಯ ಕೋಮುವಾದಿ ರಾಜಕೀಯದ ವಿರುದ್ಧ ದೇಶದ ಜ್ಯಾತ್ಯಾತೀತ ಪ್ರಜಾಸತ್ತಾತ್ಮಕ ಶಕ್ತಿಗಳನ್ನು ಒಗ್ಗೂಡಿಸಲು ವಿಫಲವಾಗಿದೆ ಎಂದು ಹೇಳಿದೆ.
