ರಾಜ್ಯದ ರಾಜಕೀಯವನ್ನು ಕಳೆದ ಕೆಲ ದಿನಗಳಿಂದ ಆವರಿಸಿಕೊಂಡಿರುವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. 

ಬೆಂಗಳೂರು, (ಮಾ.28): ತಂದೆ-ತಾಯಿ ಜೊತೆ, ವಕೀಲರ ಜೊತೆ ಮಾತನಾಡುತ್ತಿರುವ ಸಂತ್ರಸ್ತ ಯುವತಿ ಇನ್ನೂ ಪೊಲೀಸರಿಗೆ ಸಿಗುತ್ತಿಲ್ಲ ಎಂದರೆ ಏನರ್ಥ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಯುವತಿ ಅಜ್ಞಾತ ಸ್ಥಳದಿಂದ ನಿರಂತರವಾಗಿ ತನ್ನ ಹೇಳಿಕೆಗಳ ಸಿಡಿಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡುತ್ತಿದ್ದಾಳೆ, ತನ್ನ ವಕೀಲನ ಮೂಲಕ ಪೊಲೀಸರಿಗೆ ದೂರು ಕಳುಹಿಸಿಕೊಡುತ್ತಿದ್ದಾಳೆ, ತಂದೆ-ತಾಯಿ ಜೊತೆ ಮಾತನಾಡುತ್ತಿದ್ದಾಳೆ. ಹೀಗಿದ್ದರೂ ಪೊಲೀಸರ ಕೈಗೆ ಮಾತ್ರ ಸಿಗುತ್ತಿಲ್ಲ ಎಂದರೆ ಏನು ಅರ್ಥ? ಎಂದು ಪ್ರಶ್ನಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಈ ಪ್ರಹಸನ ಪೊಲೀಸರು ಮತ್ತು ರಾಜ್ಯ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ಟೀಕಿಸಿದ್ದಾರೆ.

ನೇರವಾಗಿ ಮ್ಯಾಜಿಸ್ಟ್ರೇಟ್ ಎದುರು ಹಾಜರಾಗಿ ಜಾರಕಿಹೊಳಿಗೆ ಶಾಕ್ ಕೊಡ್ತಾಳಾ ಸೀಡಿ ಲೇಡಿ.?

ಸಿಡಿ ಪ್ರಕರಣದಿಂದಾಗಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕದ ಮಾನ ಹರಾಜು ಆಗುತ್ತಿರುವುದಕ್ಕೆ ರಾಜ್ಯ ಸರ್ಕಾರ ಮತ್ತು ಪೊಲೀಸರ ವೈಫಲ್ಯವೇ ಕಾರಣ. ಸಿಡಿ ಮಾಧ್ಯಮದಲ್ಲಿ ಕಾಣಿಸಿಕೊಂಡು 26 ದಿನಗಳು ಕಳೆದರೂ ಸಂತ್ರಸ್ತೆ ಯುವತಿಯನ್ನು ಪೊಲೀಸರಿಗೆ ಪತ್ತೆಹಚ್ಚಲಿಕ್ಕಾಗದಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.

Scroll to load tweet…

ದಿನಕ್ಕೊಂದು ತಿರುವು ಪಡೆದು ರಾಜಕೀಯ ಕೆಸರೆರೆಚಾಟಕ್ಕೆ ಕಾರಣವಾಗಿರುವ ಸಿಡಿ ಹಗರಣದ ತನಿಖೆ ತಾರ್ಕಿಕ ಅಂತ್ಯ ಕಾಣಬೇಕಾದರೆ ಸಂತ್ರಸ್ತ ಯುವತಿ ಅಜ್ಞಾತ ಸ್ಥಳದಿಂದ ಹೊರಬಂದು ಪೊಲೀಸರ ಮುಂದೆ ಹಾಜರಾಗಿ ಹೇಳಿಕೆ ನೀಡಬೇಕು. ಕಾನೂನುಬದ್ಧವಾದ ಅವಳ ಹಕ್ಕನ್ನು ಚಲಾಯಿಸದಂತೆ ತಡೆಯುತ್ತಿರುವವರು ಯಾರು?

Scroll to load tweet…

ಸಿಡಿಯಲ್ಲಿರುವ ಯುವತಿ ಅಜ್ಞಾತ ಸ್ಥಳದಿಂದ ನಿರಂತರವಾಗಿ ತನ್ನ ಹೇಳಿಕೆಗಳ ಸಿಡಿಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡುತ್ತಿದ್ದಾಳೆ, ತನ್ನ ವಕೀಲನ ಮೂಲಕ ಪೊಲೀಸರಿಗೆ ದೂರು ಕಳುಹಿಸಿಕೊಡುತ್ತಿದ್ದಾಳೆ, ತಂದೆ-ತಾಯಿ ಜೊತೆ ಮಾತನಾಡುತ್ತಿದ್ದಾಳೆ. ಹೀಗಿದ್ದರೂ ಪೊಲೀಸರ ಕೈಗೆ ಮಾತ್ರ ಸಿಗುತ್ತಿಲ್ಲ ಎಂದರೆ ಏನು ಅರ್ಥ? 3/5

Scroll to load tweet…

ರಾಜ್ಯದ ಪೊಲೀಸ್ ಇಲಾಖೆಯೂ ಸೇರಿದಂತೆ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿರುವುದಕ್ಕೆ ಈ ಸಿಡಿ ಹಗರಣ ಸಾಕ್ಷಿ. ಸಾಮಾನ್ಯ ಕುಟುಂಬದಿಂದ ಬಂದಿರುವ ಯುವತಿಯನ್ನು ಇಷ್ಟು ದಿನಗಳ ನಂತರವೂ ಪತ್ತೆ ಹಚ್ಚಲಾಗಿಲ್ಲವೆಂದರೆ ಏನು ಅರ್ಥ? ಆಕೆಯೇನು ವಿಜಯಮಲ್ಯನೋ ಇಲ್ಲವೇ ನೀರವ್ ಮೋದಿಯೋ? ಎಂದು ಪ್ರಶ್ನಿಸಿದ್ದಾರೆ.

ಈ ಟ್ವೀಟ್​ಗಳ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ತೆಗೆದುಕೊಂಡಿರುವುದು ಸ್ಪಷ್ಟವಾಗಿದೆ. ಸಿಡಿ ಪ್ರಕರಣದಿಂದಾಗಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕದ ಮಾನ ಹರಾಜು ಆಗುತ್ತಿರುವುದಕ್ಕೆ ರಾಜ್ಯ ಸರ್ಕಾರ ಮತ್ತು ಪೊಲೀಸರ ವೈಫಲ್ಯವೇ ಕಾರಣ ಎಂದು ಗುಡುಗಿದ್ದಾರೆ.

Scroll to load tweet…