ಖರ್ಗೆ ಅಧ್ಯಕ್ಷತೆಯಲ್ಲಿ ಗತವೈಭವ ಮರುಕಳಿಸಲಿ: ಸಿದ್ದರಾಮಯ್ಯ
ಎಐಸಿಸಿ ಅಧ್ಯಕ್ಷರಾಗಲು ಮಲ್ಲಿಕಾರ್ಜುನ ಖರ್ಗೆಯವರು ಪ್ರಯತ್ನಿಸಲಿಲ್ಲ. ಅಧ್ಯಕ್ಷಗಿರಿ ಅದಾಗಿಯೇ ಅವರನ್ನು ಹುಡುಕಿಕೊಂಡು ಬಂದಿದೆ. ಇದು ನಿಷ್ಠಾವಂತ ಕಾರ್ಯಕರ್ತನಿಗೆ ಸಂದ ಗೆಲುವು: ಸಿದ್ದರಾಮಯ್ಯ
ಕಲಬುರಗಿ(ಡಿ.11): ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ನವ ಚೈತನ್ಯದೊಂದಿಗೆ ಪ್ರಜ್ವಲಿಸಲಿದೆ. ಖರ್ಗೆಯವರ ಅಧ್ಯಕ್ಷತೆ, ಸೋನಿಯಾ ಹಾಗೂ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಕಾಂಗ್ರೆಸ್ ಗತವೈಭವಕ್ಕೆ ಮರಳಲಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಲಬುರಗಿಯ ಎನ್‌ವಿ ಶಾಲೆ ಮೈದಾನದಲ್ಲಿ ಶನಿವಾರ ನಡೆದ ಕಾಂಗ್ರೆಸ್ ಕಲ್ಯಾಣ ಕ್ರಾಂತಿ ಸಮಾವೇಶದಲ್ಲಿ ಮಾತನಾಡಿ, ಎಐಸಿಸಿ ಅಧ್ಯಕ್ಷರಾಗಲು ಮಲ್ಲಿಕಾರ್ಜುನ ಖರ್ಗೆಯವರು ಪ್ರಯತ್ನಿಸಲಿಲ್ಲ. ಅಧ್ಯಕ್ಷಗಿರಿ ಅದಾಗಿಯೇ ಅವರನ್ನು ಹುಡುಕಿಕೊಂಡು ಬಂದಿದೆ. ಇದು ನಿಷ್ಠಾವಂತ ಕಾರ್ಯಕರ್ತನಿಗೆ ಸಂದ ಗೆಲುವು. ಖರ್ಗೆಯವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ನವ ಚೈತನ್ಯದೊಂದಿಗೆ ಪ್ರಜ್ವಲಿಸಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ. ಬಿಜೆಪಿ ಸರ್ಕಾರವನ್ನು ಕಿತ್ತೊಗೆದು ಜನಪರ ಸರ್ಕಾರ ಸ್ಥಾಪನೆ ಮಾಡುವ ಮೂಲಕ ನಾವೆಲ್ಲರೂ ಖರ್ಗೆ ಅವರಿಗೆ ನಿಜವಾದ ಕೊಡುಗೆ ನೀಡೋಣ ಎಂದರು.
ಹುನಗುಂದ: ಸಿದ್ದರಾಮಯ್ಯಗೆ ಕಾಂಗ್ರೆಸ್ ತತ್ವ ಒಪ್ಪುವುದಿಲ್ಲ, ಗೋವಿಂದ ಕಾರಜೋಳ
ರಾಜ್ಯದ ಬೊಮ್ಮಾಯಿ ಸರ್ಕಾರ ಲಂಚದ ಕೂಪವಾಗಿದೆ. ಹೀಗಾಗಿ, ಬಿಜೆಪಿ ಸರ್ಕಾರ ಮತ್ತೆ ಬರದಂತೆ ನೀವು ತಡೆಯಬೇಕು ಎಂದು ಜನರಿಗೆ ಮನವಿ ಮಾಡಿದರು.