Asianet Suvarna News Asianet Suvarna News

'ಸಿದ್ದು ನಿಜಕನಸುಗಳು' ಕೃತಿ ಬಿಡುಗಡೆ ವಿಚಾರ: ಬಿಜೆಪಿ ನಾಯಕರಿಗೆ ಸವಾಲು ಹಾಕಿ ಸಿದ್ದರಾಮಯ್ಯ ಸರಣಿ ಟ್ವೀಟ್

  • ಸಿದ್ದು ನಿಜ ಕನಸುಗಳು ಎಂಬ ಕೃತಿ ಬಿಡುಗಡೆ ಮಾಡಲು ಹೊರಟಿದ್ದ ವಿಚಾರ
  • ಬಿಜೆಪಿ ನಡೆಗೆ ಸಿದ್ದರಾಮಯ್ಯ ಕಿಡಿ
  • ಸರಣಿ ಟ್ವೀಟ್ ಮಾಡುವ ಮೂಲಕ‌ ಕಿಡಿಕಾರಿದ ಸಿದ್ದರಾಮಯ್ಯ
  • #ನನಸಾದ_ಕನಸು ಎಂದು ಸರಣಿ ಟ್ವೀಟ್
Siddaramaiah tweets challenging to BJP leaders bengaluru politics rav
Author
First Published Jan 10, 2023, 8:34 PM IST

ಬೆಂಗಳೂರು (ಜ.10) ವಿರೋಧಪಕ್ಷನಾಯಕ ಸಿದ್ದರಾಮಯ್ಯ ಅವರ ಕುರಿತಾಗಿ ಬಿಜೆಪಿ ಕಾರ್ಯಕರ್ತರು "ಸಿದ್ದು ನಿಜ ಕನಸುಗಳು' ಎಂಬ ವಿವಾದಾತ್ಮಕ ಪುಸ್ತಕ ಭಾರೀ ವಿವಾದ ಸೃಷ್ಟಿಸಿದೆ. ಪುಸ್ತಕದ ವಿರುದ್ಧ ಕಾಂಗ್ರೆಸ್‌  ಕೋರ್ಟ್‌ ಮೆಟ್ಟಿಲೇರಿದ್ದು  ಬಿಡುಗಡೆಗೆ ತಡೆಯಾಜ್ಞೆ ತಂದಿದೆ.  ಇದೀಗ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ಷಡ್ಯಂತ್ರದ ವಿರುದ್ಧ ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.

#ನನಸಾದಕನಸು ಹ್ಯಾಶ್ ಬಳಸಿಕೊಂಡು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿರುವ ಸಿದ್ದರಾಮಯ್ಯರ ಟ್ವೀಟ್‌ನ ಸಾರಾಂಶ ಇಲ್ಲಿದೆ. 

ಸಿದ್ದು ನಿಜ ಕನಸುಗಳು ಪುಸ್ತಕ ಬಿಡುಗಡೆ ಕಾರ್ಯಕ್ರಮ ಮುಂದೂಡಿಕೆ

ರಾಜ್ಯ ಬಿಜೆಪಿ ನಾಯಕರೇ(BJP Leaders), ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಸಾರ್ವಜನಿಕ ಚರ್ಚೆಗೆ ನಾನು ಸದಾ ಸಿದ್ಧ. ಸ್ಥಳ ಮತ್ತು ಸಮಯವನ್ನು ಬಿಜೆಪಿ ನಾಯಕರೇ ನಿಗದಿಗೊಳಿಸಿ ನನ್ನನ್ನು ಕರೆಯಲಿ. ಸುಖಾ ಸುಮ್ಮನೆ ಸುಳ್ಳು-ಪೊಳ್ಳು ಬರ್ಕೊಂಡು, ಪೋಟೋಶಾಪ್ ಮಾಡಿಕೊಂಡು ನಿಮ್ಮ ಮಾನ ನೀವೇ ಮಾರಿಕೊಳ್ಳಬೇಡಿ. ರಾಜಕೀಯವಾಗಿ ನನ್ನನ್ನಾಗಲಿ, ಕಾಂಗ್ರೆಸ್(Congress) ಪಕ್ಷವನ್ನಾಗಲಿ ಎದುರಿಸುವ ಧೈರ್ಯ ರಾಜ್ಯದ ಬಿಜೆಪಿ ನಾಯಕರಿಗಿಲ್ಲ. ಅದಕ್ಕಾಗಿಯೇ ನನ್ನ ವಿರುದ್ಧದ ಹೋರಾಟವನ್ನೂ ದುಡ್ಡಿಗಾಗಿ ಮಾರಿಕೊಂಡ ಬಾಡಿಗೆ ಬರಹಗಾರರಿಗೆ ಔಟ್ ಸೋರ್ಸ್ ಮಾಡಿದ್ದಾರೆ. Shame on you ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚರ್ಚೆ-ಸಂವಾದಗಳ ರಾಜಕೀಯದಲ್ಲಿ ನನಗೆ ನಂಬಿಕೆ ಇದೆ. ಇದಕ್ಕಾಗಿಯೇ ಇರುವುದು ವಿಧಾನಮಂಡಲ. ಅಲ್ಲಿ ಚರ್ಚೆ ನಡೆಸುವ ಧೈರ್ಯ ಇಲ್ಲದೆ ಅಧಿವೇಶನವನ್ನೇ ಮೊಟಕುಗೊಳಿಸುತ್ತೀರಿ. ಹೊರಗೆ ಬೀದಿಯಲ್ಲಿ ಬಾಡಿಗೆ ಬರಹಗಾರರನ್ನು ಕಟ್ಟಿಕೊಂಡು ನನ್ನ ಬಗ್ಗೆ ಕಟ್ಟು ಕತೆ ಹೆಣೆಯುತ್ತೀರಿ. ರಾಜ್ಯ ಬಿಜೆಪಿ ನಾಯಕರೇ ಇದೇನಾ ನಿಮ್ಮ ಸಂಸ್ಕೃತಿ ಎಂದು ಪ್ರಶ್ನಿಸಿದ್ದಾರೆ.

ನಮ್ಮ ಸರ್ಕಾರದ ವೈಫಲ್ಯಗಳ ಬಗ್ಗೆ ನೂರು ಪುಸ್ತಕಗಳನ್ನು ಪ್ರಕಟಿಸಿ, I don’t care. ಅದನ್ನು ತಡೆಯಲೂ ಹೋಗುವುದಿಲ್ಲ. ಆದರೆ ನನ್ನ ಪೋಟೊವನ್ನು ವಿರೂಪಗೊಳಿಸಿ, ನಿಮ್ಮ ವಿಕೃತ ಕನಸುಗಳಿಗಾಗಿ ನನ್ನ ಸುಂದರ ಕನಸುಗಳನ್ನು ತಿರುಚಿ ಮಾರಾಟ ಮಾಡಲು ಬಿಡುವುದಿಲ್ಲ ಎಂದು ಕಿಡಿಕಾರಿರುವ ಸಿದ್ದರಾಮಯ್ಯನವರು ಮುಂದುವರಿದು,  ನಾನು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದಾಗಲೇ, ಹಸಿವು, ಅನಕ್ಷರತೆ, ಅನಾರೋಗ್ಯ, ನಿರುದ್ಯೋಗ ಮುಕ್ತ ಕರ್ನಾಟಕ ನಿರ್ಮಾಣದ ಕನಸು ಕಂಡಿದ್ದೆ. ಪಕ್ಷದ ಪ್ರಣಾಳಿಕೆಯಲ್ಲಿನ 158 ಭರವಸೆಗಳನ್ನು ಈಡೇರಿಸಿ ಆ ಕನಸುಗಳನ್ನು ನನಸಾಗಿಸಿದ್ದೆ.ಅನುಮಾನ ಇದ್ದವರು ಚರ್ಚೆಗೆ ಬನ್ನಿ ಎಂದು ಬಿಜೆಪಿ ನಾಯಕರಿಗೆ ಸವಾಲು ಹಾಕಿದ್ದಾರೆ. 

ಸಿದ್ದುಗೆ ಕಳಂಕ ಮೆತ್ತಲು ಬಿಜೆಪಿ ಯತ್ನ: ಡಿ.ಕೆ. ಶಿವಕುಮಾರ್‌
 
ಸುಳ್ಳು, ಅನ್ಯಾಯ ಮತ್ತು ಅಧರ್ಮದ ನೆಲೆಗಟ್ಟಿನ ಮೇಲೆ ನಿಂತಿರುವ ರಾಜ್ಯ ಬಿಜೆಪಿ ನಾಯಕರಿಗೆ ನಾಯಕರಿಗೆ ಸತ್ಯ, ನ್ಯಾಯ ಮತ್ತು ನಿಜವಾದ ಧರ್ಮದ ಹಾದಿಯಲ್ಲಿ ನಡೆಯುವವರನ್ನು ಕಂಡರೆ ಭಯ. ಈ ಭಯದಿಂದಲೇ ರಾತ್ರಿ-ಹಗಲು ನನ್ನ ವಿರುದ್ಧ ಸುಳ್ಳು ಆರೋಪಗಳ ಸುರಿಮಳೆ ಸುರಿಸುತ್ತಿದ್ದಾರೆ.

Follow Us:
Download App:
  • android
  • ios