Asianet Suvarna News Asianet Suvarna News

ಸಿದ್ದರಾಮೋತ್ಸವದಿಂದ ವಾಪಸ್‌ ಆಗುತ್ತಿದ್ದಾಗ ಮೃತಪಟ್ಟಿದ್ದ ಅಭಿಮಾನಿ ನಿವಾಸಕ್ಕೆ ಸಿದ್ದು ಭೇಟಿ

ಸಿದ್ದರಾಮಯ್ಯನವರ ಅಮೃತಮಹೋತ್ಸವಕ್ಕೆ ಆಗಮಿಸುತ್ತಿದ್ದ ವೇಳೆ ಸಾವನ್ನಪ್ಪಿದ್ದ ಅಭಿಮಾನಿ ನಿವಾಸಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಭೇಟಿ ನೀಡಿದ್ದಾರೆ.

Siddaramaiah Visits His Mysuru Fan Home Who Killed In Road Accident rbj
Author
Bengaluru, First Published Aug 7, 2022, 9:13 PM IST

ಮೈಸೂರು, (ಆಗಸ್ಟ್.07): ಸಿದ್ದರಾಮೋತ್ಸವ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ ಆಗುತ್ತಿದ್ದ ವೇಳೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಅಭಿಮಾನಿ ನಿವಾಸಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ.

 ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನ್ಮದಿನದ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ತೆರಳಿದ್ದ ಸಿದ್ದರಾಮಯ್ಯ ಅವರ ಅಭಿಮಾನಿ ಪಿರಿಯಾಪಟ್ಟಣ ತಾಲ್ಲೂಕಿನ ಹಲಗನಹಳ್ಳಿಯ ಫಸಿ ಉದ್ದೀನ್‌ ಅವರು ಕಾರ್ಯಕ್ರಮ ಮುಗಿಸಿ ವಾಪಸ್‌ ಬರುವಾಗ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು.

ಸಿದ್ದರಾಮೋತ್ಸವಕ್ಕೆ ತೆರಳುತ್ತಿದ್ದ ವಾಹನ ಅಪಘಾತ, ಓರ್ವ ಸಾವು, ಸಿದ್ದರಾಮಯ್ಯ ಸಂತಾಪ

ಇದೀಗ ವಿರೋಧ ಪಕ್ಷದ  ನಾಯಕ ಸಿದ್ದರಾಮಯ್ಯ ಅವರು ಇಂದು(ಭಾನುವಾರ) ಫಸಿ ಉದ್ದೀನ್‌ ನಿವಾಸಕ್ಕೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಅಲ್ಲದೇ ಇದೇ ವೇಳೆ ಎರಡು ಲಕ್ಷ ರೂಪಾಯಿ ಸಹಾಯ ಮಾಡಿದರು.

ಈ ಎರಡು ಲಕ್ಷ ಮಾತ್ರವಲ್ಲದೇ ಕಾಂಗ್ರೆಸ್ ಶಾಸಕ  ಜಮೀರ್ ಅಹಮ್ಮದ್ ಖಾನ್ ಅವರು ಫಸಿ ಉದ್ದೀನ್‌ ಕುಟುಂಬಕ್ಕೆ ಐದು ಲಕ್ಷ ರೂ, ನೀಡುವುದಾಗಿ ಭರವಸೆ ನೀಡಿದ್ದಾರೆ.

ಬಾಗಲಕೋಟೆಯಿಂದ ದಾವಣಗೆರೆ ಬರುತ್ತಿದ್ದ ವೇಳೆ ಅಪಘಾತದ ವೇಳೆ ಸಾವನ್ನಪ್ಪಿದ್ದ ಪ್ರಕಾಶ್ ನಿವಾಸಕ್ಕೆ ಸಿದ್ದರಾಮಯ್ಯ ಸಹ ಭೇಟಿ ನೀಡಲಿದ್ದಾರೆ.

ಆಗಸ್ಟ್ 02ರಂದು ಬಾಗಲಕೋಟೆ ಜಿಲ್ಲೆಯ ಹಿರೇಆಲಗುಂಡಿ ಬಿ.ಕೆ. ಗ್ರಾಮದಿಂದ ದಾವಣಗೆರೆಗೆ ತೆರಳುತ್ತಿದ್ದ ಕ್ರೂಸರ್ ಹೂಲಗೇರಿ ಗ್ರಾಮದ ಬಳಿ ಅಪಘಾತವಾಗಿತ್ತು.  ಪರಿಣಾಮ ಚಿಕ್ಕಾಲಗುಂಡಿ ಗ್ರಾಮದ ಕ್ರೂಸರ್ ಚಾಲಕ ಪ್ರಕಾಶ್ ಸಾವನ್ನಪ್ಪಿದ್ದ. ಇನ್ನು ಘಟನೆಯಲ್ಲಿ 12 ಜನರು ಗಾಯಗೊಂಡಿದ್ದರು. 

Follow Us:
Download App:
  • android
  • ios