Asianet Suvarna News Asianet Suvarna News

Siddaramaiah: ಬಾದಾಮಿ ಬಿಟ್ಟು ಯಾಕೆ ಬರ್ತೀರಿ ಸಿದ್ದರಾಮಯ್ಯ? ಬಿಎಸ್ ವೈ ಪ್ರಶ್ನೆ

Siddaramaiah Constituency: ಸಿದ್ದರಾಮಯ್ಯ ಯಾವುದೋ ಭ್ರಮೆಯಲ್ಲಿದ್ದಾರೆ.ರಾಜ್ಯದ ಜನ ಅವರ ಜೇಬಿನಲ್ಲಿದ್ದಾರೆ ಎಂಬ ಭಾವನೆ ಮನಸ್ಸಲ್ಲಿದ್ದಂತಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲ್ಲುವುದು ಅಸಾಧ್ಯ ಎಂದು ಟಾಂಗ್ ನೀಡಿದರು.

Siddaramaiah why did you leave almonds BS Y Question rav
Author
First Published Nov 8, 2022, 3:07 PM IST

ಉಡುಪಿ (ನ.8) : ಮುಂಬರುವ ಚುನಾವಣೆ ಗೆದ್ದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಗಿಫ್ಟ್ ಕೊಡುತ್ತೇನೆ ಎಂದಿರುವ ಸಿದ್ದರಾಮಯ್ಯನವರ ಹೇಳಿಕೆಗೆ ಮಂಗಳವಾರ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಬಿ.ಎಸ್. ಯಡಿಯೂರಪ್ಪನವರು, ಸಿದ್ದರಾಮಯ್ಯ ಯಾವುದೋ ಭ್ರಮೆಯಲ್ಲಿದ್ದಾರೆ.ರಾಜ್ಯದ ಜನ ಅವರ ಜೇಬಿನಲ್ಲಿದ್ದಾರೆ ಎಂಬ ಭಾವನೆ ಮನಸ್ಸಲ್ಲಿದ್ದಂತಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲ್ಲುವುದು ಅಸಾಧ್ಯ ಎಂದು ಟಾಂಗ್ ನೀಡಿದರು.

Murugha Shree Case: ಇಷ್ಟು ಕೀಳುಮಟ್ಟಕ್ಕೆ ಇಳೀತಾರೆ ಎಂದು ನಿರೀಕ್ಷಿಸಿರಲಿಲ್ಲ: ಮೌನ ಮುರಿದ ಬಿಎಸ್‌ವೈ

ನಾನು ಮತ್ತು ಬೊಮ್ಮಾಯಿ ರಾಜ್ಯದಲ್ಲಿ ಪ್ರವಾಸ ಹೊರಟಾಗ ಅಭೂತಪೂರ್ವ ಜನಬೆಂಬಲ ಸಿಕ್ಕಿದೆ. ಮೋದಿ ಅವರ ಬೆಂಬಲದೊಂದಿಗೆ ಬಿಜೆಪಿಗೆ ಕರ್ನಾಟಕದಲ್ಲಿ ಸ್ಪಷ್ಟ ಬಹುಮತ ಸಿಗಲಿದ್ದು, ಕರ್ನಾಟಕದಲ್ಲಿ ಬಿಜೆಪಿಯ ಗೆಲುವನ್ನು ತಡೆಯಲು ಸಿದ್ದರಾಮಯ್ಯನಿಂದ ಸಾಧ್ಯವಿಲ್ಲ, ಕರ್ನಾಟಕದಲ್ಲಿ ಅಧಿಕಾರಕ್ಕೆ ಬರ್ತೀವಿ ಅಂತೀರಿ ಆದರೆ ನೀವು ಬಾದಾಮಿಯನ್ನು ಯಾಕೆ ಬಿಟ್ಟು ಬರುತ್ತಿದ್ದೀರಿ ಎಂದು ಪ್ರಶ್ನಿಸಿದರು

ಬಾದಾಮಿಯಲ್ಲಿ ಸಿದ್ದರಾಮಯ್ಯಗೆ ಸೋಲು ನಿಶ್ಚಿತವಾಗಿದ್ದು, ಎಂಎಲ್ಎ ಆಗಿ ಕೆಲವೇ ಮತಗಳಿಂದ ಅಂದು ಗೆದ್ದಿದ್ದೀರಿ. ಅನಂತರ ಕ್ಷೇತ್ರವನ್ನು ಮರೆತುಬಿಟ್ಟಿದ್ದೀರಿ ಅಭಿವೃದ್ಧಿ ಮಾಡಿಲ್ಲ, ಬಾದಾಮಿಯನ್ನು ತೊರೆಯುತ್ತೀರಿ ಎಂಬುದು ನಿಮಗೆ ಎಷ್ಟರ ಮಟ್ಟಿಗೆ ಶೋಭೆ ತರುತ್ತದೆ. ರಾಜ್ಯದ ಜನ ಈಗಾಗಲೇ ತೀರ್ಮಾನವನ್ನು ಮಾಡಿದ್ದಾರೆ ನಿಮಗೆ ಉತ್ತರವನ್ನೂ ಕೊಡಲಿದ್ದಾರೆ. ಬೇರೆ ಬೇರೆ ಪಕ್ಷದಿಂದ ಅನೇಕರು ಈಗಾಗಲೇ ಬಿಜೆಪಿ ಬಂದಿದ್ದಾರೆ ಇನ್ನೂ ಬರುವವರಿದ್ದಾರೆ ಎಂದು ತಿಳಿಸಿದರು.

ಕಾಂಗ್ರೆಸ್‌ಗೆ ಸಿಎಂ ಬೊಮ್ಮಾಯಿ, ಯಡಿಯೂರಪ್ಪ ಚಾಟಿ

ಮೊದಲ ಬಾರಿ ಮುರುಘಾ ಶರಣರ ವಿರುದ್ದ ಹೇಳಿಕೆ ನೀಡಿದ ಬಿ.ಎಸ್.ವೈ

ಮುರುಘಾ ಶರಣರಿಂದ ಲೈಂಗಿಕ ಕಿರುಕುಳ ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಬಿ ಎಸ್ ವೈಯವರು ಮುರುಘಾ ಶರಣರು ಕ್ಷಮಿಸಲಾರದ ಅಕ್ಷಮ್ಯ ಅಪರಾಧ ಮಾಡಿದ್ದಾರೆ. ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಅಂತ ಯಾರೂ ನಿರೀಕ್ಷೆ ಮಾಡಿರಲಿಲ್ಲ, ಎಲ್ಲರೂ ಖಂಡಿಸಬೇಕು. ಅವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಹೇಳಿದರು.

Follow Us:
Download App:
  • android
  • ios