ನಾಯಕತ್ವ ಬದಲಾವಣೆ ಸಂಬಂಧ ಕೆಲ ಹಿರಿಯ ನಾಯಕರು ಬರೆದ ಪತ್ರ ಇದೀಗ ಕಾಂಗ್ರೆಸ್‌ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಇದರ ಮಧ್ಯೆ ಸಿದ್ದರಾಮಯ್ಯ ಅವರು ಸೋನಿಯಾಗೆ ಪತ್ರ ಬರೆದಿದ್ದಾರೆ.

ಬೆಂಗಳೂರು, (ಆ.24): ನಾಯಕತ್ವದ ಬದಲಾವಣೆ ಕುರಿತು ಕಾಂಗ್ರೆಸ್‌ನಲ್ಲಿ ಆತಂರಿಕ ಭಿನ್ನಮತ ಸ್ಫೋಟವಾಗಿದೆ. ಕೆಲವರು ಗಾಂಧಿ ಕುಟುಂಬದ ಬೆನ್ನಿಗೆ ನಿಂತ್ರೆ ಇನ್ನೂ ಕೆಲವರು ಗಾಂಧಿಯೇತರ ನಾಯಕತ್ವ ವಹಿಸಬೇಕೆಂಬ ಮಾತುಗಳನ್ನಾಡುತ್ತಿದ್ದಾರೆ. 

"

ನಾಕತ್ವದ ಬದಲಾವಣೆ ಬಗ್ಗೆ ಪತ್ರ ಬರೆದಿದ್ದಕ್ಕೆ ರಾಹುಲ್ ಗಾಂಧಿ ಕೆಂಡಾಮಂಡಲರಾಗಿದ್ದು, ಬಿಜೆಪಿ ಕುಮ್ಮಕ್ಕಿನಿಂದ ಹೀಗೆ ಮಾಡಿದ್ದಾರೆ ಎಂದು ಪತ್ರ ಬರೆದ ನಾಯಕರ ವಿರುದ್ಧ ಆಕ್ರೋಶಗೊಂಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸೋನಿಯಾ ಗಾಂಧಿಗೆ ಅವರಿಗೆ ಪತ್ರ ಬರೆಯ ಮೂಲಕ ನಿಮ್ಮ ಸಪೋರ್ಟ್‌ಗೆ ನಾವಿದ್ದೇವೆ ಎಂದು ತಿಳಿಸಿದ್ದಾರೆ. 

ನಾಯಕತ್ವ ಬದಲಾವಣೆ ಕೂಗು: ಗಾಂಧಿ ಕುಟುಂಬದ ಬೆನ್ನಿಗೆ ನಿಂತ ಕರ್ನಾಟಕ ಕಾಂಗ್ರೆಸ್

ಇದರ ಬೆನ್ನಲ್ಲೇ ಇದೀಗ ಕರ್ನಾಟಕ ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದು, ಈ ಮೂಲಕ ಗಾಂಧಿ ಕುಟುಂಬದ ಬೆನ್ನಿಗೆ ನಿಂತಿದ್ದಾರೆ. 

ಅನಾರೋಗ್ಯ ಕಾರಣದಿಂದ ಒಂದು ವೇಳೆ ಕಾಂಗ್ರೆಸ್‌ ಪಕ್ಷವನ್ನು ಮುನ್ನಡೆಸಲು ಸಾಧ್ಯವಾಗದೇ ಹೋದರೆ, ಎಐಸಿಸಿ ಅಧ್ಯಕ್ಷ ಸ್ಥಾನವನ್ನು ರಾಹುಲ್ ಗಾಂಧಿಯವರೇ ವಹಿಸಿಕೊಳ್ಳಲಿ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸೋನಿಯಾ ಗಾಂಧಿಗೆ ಮನವಿ ಮಾಡಿಕೊಂಡಿದ್ದಾರೆ.

ಕಾಂಗ್ರೆಸ್‌ನಲ್ಲಿ ಆಂತರಿಕ ಬೆಳವಣಿಗೆ: ಸೋನಿಯಾಗೆ ಪತ್ರ ಬರೆದ ಡಿಕೆಶಿ

ಈ ಕುರಿತು ಪತ್ರ ಬರೆದಿರುವ ಸಿದ್ದರಾಮಯ್ಯ, ಪಕ್ಷ ಸಂಕಷ್ಟಕ್ಕೆ ಸಿಲುಕಿಕೊಂಡಿರುವುದು ಇದೇ ಮೊದಲೇನಲ್ಲಾ. ಪ್ರತಿ ಬಾರಿ ಪಕ್ಷ ಇಂತಹ ಸನ್ನಿವೇಶಗಳನ್ನು ಎದುರಿಸಿ ನಿಂತು ಮೀರಿ ಬೆಳೆದಿದೆ. ಗಾಂಧಿ ಕುಟುಂಬ ಇಂತಹ ಸಂಕಷ್ಟದ ಅವಧಿಯಲ್ಲಿ ಪಕ್ಷವನ್ನು ಮುನ್ನಡೆಸಿದೆ ಅಂತೆಲ್ಲ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Scroll to load tweet…