Asianet Suvarna News Asianet Suvarna News

ಈ ಬಾರಿ ಸಿದ್ದರಾಮಯ್ಯ ಸೋಲು ಖಚಿತ: ವರ್ತೂರು ಪ್ರಕಾಶ್‌ ಭವಿಷ್ಯ

ಕಳೆದ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಆದಂತೆಯೇ ವರುಣಾ ಹಾಗೂ ಕೋಲಾರದಲ್ಲೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಲನುಭವಿಸಲಿದ್ದು, ಮಾಡಿದ ಪಾಪದ ಕೆಲಸಗಳಿಂದಲೇ ಸಿದ್ದರಾಮಯ್ಯ ಸೋಲಲಿದ್ದು, ಯಾವುದೇ ಕಾರಣಕ್ಕೂ ವಿಧಾನಸಭೆಗೆ ಹೋಗಲ್ಲ ಎಂದು ಮಾಜಿ ಶಾಸಕ ವರ್ತೂರು ಪ್ರಕಾಶ್‌ ಭವಿಷ್ಯ ನುಡಿದಿದ್ದಾರೆ.

Siddaramaiahs Defeat is certain this time Says Varthur Prakash gvd
Author
First Published Apr 6, 2023, 2:05 PM IST

ದಾವಣಗೆರೆ (ಏ.06): ಕಳೆದ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಆದಂತೆಯೇ ವರುಣಾ ಹಾಗೂ ಕೋಲಾರದಲ್ಲೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಲನುಭವಿಸಲಿದ್ದು, ಮಾಡಿದ ಪಾಪದ ಕೆಲಸಗಳಿಂದಲೇ ಸಿದ್ದರಾಮಯ್ಯ ಸೋಲಲಿದ್ದು, ಯಾವುದೇ ಕಾರಣಕ್ಕೂ ವಿಧಾನಸಭೆಗೆ ಹೋಗಲ್ಲ ಎಂದು ಮಾಜಿ ಶಾಸಕ ವರ್ತೂರು ಪ್ರಕಾಶ್‌ ಭವಿಷ್ಯ ನುಡಿದಿದ್ದಾರೆ.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯಗೆ ಈಗಾಗಲೇ ವರುಣಾ ಟಿಕೆಟ್‌ ಘೋಷಣೆಯಾಗಿದೆ. ಕೋಲಾರ ಕ್ಷೇತ್ರಕ್ಕೂ ಟಿಕೆಟ್‌ ಪಡೆಯಬಹುದು. ವರುಣಾದಲ್ಲಿ ಪ್ರಬಲ ಅಭ್ಯರ್ಥಿಗೆ ಹುಡುಕುತ್ತಿದ್ದೇವೆ. ಇನ್ನು 2 ದಿನದಲ್ಲೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಘೋಷಣೆಯಾಗಲಿದೆ ಎಂದು ತಿಳಿಸಿದರು. ರಾಜ್ಯ ಪ್ರವಾಸ ಕೈ ಬಿಟ್ಟು ಸಿದ್ದರಾಮಯ್ಯ ವರುಣಾ ಕ್ಷೇತ್ರದಲ್ಲಿರುತ್ತಾರೆ. ಎಷ್ಟೇ ಪ್ರಯತ್ನ ಪಟ್ಟರೂ ಈ ಸಲ ಸಿದ್ದರಾಮಯ್ಯ ವಿಧಾನಸಭೆಗಂತೂ ಹೋಗಲ್ಲ. ಇಲ್ಲಿವರೆಗೆ ಮುಖ್ಯಮಂತ್ರಿಯಾಗಿದ್ದವರು ಕ್ಷೇತ್ರ ಬದಲಾವಣೆ ಮಾಡಿರಲಿಲ್ಲ. ಆದರೆ ಸಿದ್ದರಾಮಯ್ಯಗೆ ಸುರಕ್ಷಿತ ಕ್ಷೇತ್ರವೇ ಸಿಗುತ್ತಿಲ್ಲ. ಸ್ವ ಕ್ಷೇತ್ರದಲ್ಲೇ ನೆಲೆ ಇಲ್ಲ. ಇನ್ನೂ ಕ್ಷೇತ್ರಕ್ಕಾಗಿ ಹುಡುಕಾಟ ನಡೆಸಿದ್ದಾರೆ ಎಂದು ಟೀಕಿಸಿದರು.

ಕುಂಬಳಕಾಯಿ ಕಳ್ಳರು: ಕಾಂಗ್ರೆಸ್ಸಿಗೆ ಸಿಎಂ ಬೊಮ್ಮಾಯಿ ಚಾಟಿ

ಹಿಂದೆ 120 ಸೀಟು ಬಂದು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದರು. ಆದರೆ, ಸಿದ್ದರಾಮಯ್ಯ ಆಡಳಿತದ ನಂತರ 2018ರ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಕೇವಲ 70-80 ಸೀಟು ಬಂದಿತು. ಅಕ್ಕಿ ಕೊಟ್ಟಿದ್ದೇವೆಂದು ಸಿದ್ದರಾಮಯ್ಯ ಪದೇ ಪದೇ ಹೇಳಿಕೊಳ್ಳುತ್ತಿದ್ದಾರೆ. ಆದರೆ, ಸಿದ್ದರಾಮಯ್ಯ ಅಕ್ಕಿ ಕೊಡಲಿಲ್ಲ, ಗೋಣಿ ಚೀಲಕ್ಕೆ ಮಾತ್ರ ಸರ್ಕಾರದ ದುಡ್ಡು ಕೊಟ್ಟಿದ್ದರು. ಕೇಂದ್ರ ಸರ್ಕಾರವೇ ಅನ್ನ ಭಾಗ್ಯದ ಅಕ್ಕಿಗೆ ಹಣ ನೀಡಿದ್ದು ಎಂದು ಹೇಳಿದರು.

ರಾಜ್ಯದಲ್ಲಿ ಸಿದ್ದರಾಮಯ್ಯನವರ ವರ್ಚಸ್ಸು ಮುಗಿದು ಹೋಗಿದೆ. ಕಾಂಗ್ರೆಸ್ಸಿನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಕಿತ್ತಾಟ ನಡೆದಿದೆ. ಆದರೆ, ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದರೆ ತಾನೇ ಮುಖ್ಯಮಂತ್ರಿ ಕುರ್ಚಿಗಾಗಿ ಕಿತ್ತಾಡೋ ಪ್ರಶ್ನೆ ಬರುತ್ತದೆ. ಆದರೆ, ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದಿಲ್ಲ, ಆ ಪಕ್ಷದವರಲ್ಲಿ ಒಗ್ಗಟ್ಟು ಬರುವುದಿಲ್ಲ. ಕಾಂಗ್ರೆಸ್‌ ಎರಡನೇ ಪಟ್ಟಿ ಬಿಡುಗಡೆ ನಂತರ ಪರಿಸ್ಥಿತಿ ಹೇಗಿದೆಯೆಂಬುದು, ಎಷ್ಟುಜನ ಕಾಂಗ್ರೆಸ್ಸನ್ನು ತೊರೆದು ಹೋಗುತ್ತಾರೆಂಬುದನ್ನು ಗೊತ್ತಾಗಲಿದೆ ಎಂದು ವರ್ತೂರು ವ್ಯಂಗ್ಯವಾಡಿದರು.

ಒಂದೇ ಕ್ಷೇತ್ರಕ್ಕೆ ಸಿದ್ದು ಕಟ್ಟಿಹಾಕಲು ಯತ್ನ: ಕೆಲವು ನಾಯಕರಿಂದ ಹೈಕಮಾಂಡ್‌ ಮೇಲೆ ಒತ್ತಡ

ಕೋಲಾರದ ಮಾಜಿ ಶಾಸಕ ವರ್ತೂರು ಪ್ರಕಾಶ್‌, ಕೆಜಿಎಫ್‌ನ ಮಾಜಿ ಶಾಸಕ ವೈ.ಸಂಪಗಿ ಹೊನ್ನಾಳಿಯಲ್ಲಿ ಶಾಸಕ ಎಂ.ಪಿ.ರೇಣುಕಾಚಾರ್ಯ ನಿವಾಸಕ್ಕೆ ಭೇಟಿ ನೀಡಿ, ಉಭಯ ಕುಶಲೋಪರಿ ವಿಚಾರಿಸಿ, ಮಾರ್ಗ ಮಧ್ಯೆ ದಾವಣಗೆರೆಗೆ ಭೇಟಿ ನೀಡಿದ್ದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

Follow Us:
Download App:
  • android
  • ios