ಹೈದರಾಬಾದ್(ನ.10)‌: ನಟಿ ಖುಷ್ಬೂ ಬಳಿಕ ದಕ್ಷಿಣ ಭಾರತದ ಪ್ರಸಿದ್ಧ ನಟಿ ಎಂ. ವಿಜಯಶಾಂತಿ ಅವರು ಕೂಡ ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರ್ಪಡೆ ಆಗುವ ಸಾಧ್ಯತೆ ಇದೆ. ತೆಲಂಗಾಣ ಉಪಚುನಾವಣೆ ಫಲಿತಾಂಶದ ಬಳಿಕ ವಿಜಯಶಾಂತಿ ತಮ್ಮ ನಿರ್ಧಾರವನ್ನು ಪ್ರಕಟಿಸುವ ನಿರೀಕ್ಷೆ ಇದೆ ಎನ್ನಲಾಗಿದೆ.

ಭಾನುವಾರದಂದು ಟ್ವೀಟ್‌ ಮಾಡಿದ್ದ ವಿಜಯಶಾಂತಿ, ತೆಲಂಗಾಣದಲ್ಲಿ ಆಡಳಿತಾರೂಢ ಟಿಆರ್‌ಎಸ್‌ ಪಕ್ಷವು ಕಾಂಗ್ರೆಸ್‌ ಅನ್ನು ದುರ್ಬಲಗೊಳಿಸಿದ್ದು, ಬಿಜೆಪಿಯ ಬೆಳವಣಿಗೆಗೆ ಎಡೆ ಮಾಡಿಕೊಟ್ಟಿದೆ ಎಂದು ಹೇಳಿದ್ದರು. ಆದರೆ, ಪಕ್ಷದಲ್ಲಿ ವಿಜಯಶಾಂತಿ ಅವರನ್ನು ಕಡೆಗಣಿಸಲಾಗಿದ್ದು, ಇದರಿಂದ ಬೇಸರಗೊಂಡು ಪಕ್ಷ ತ್ಯಜಿಸಲು ಮುಂದಾಗಿದ್ದಾರೆ ಎಂದು ಕಾಂಗ್ರೆಸ್‌ನ ಮುಖಂಡರೊಬ್ಬರು ಹೇಳಿದ್ದಾರೆ.

ಆರಂಭದಲ್ಲಿ ಬಿಜೆಪಿಯಿಂದಲೇ ರಾಜಕೀಯ ಆರಂಭಿಸಿದ್ದ ವಿಜಯಶಾಂತಿ ಮೇದಕ್‌ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆ ಆಗಿದ್ದರು.