10 ವರ್ಷದಿಂದ ಚಿಕ್ಕಬಳ್ಳಾಪುರ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿರುವೆ: ಸಚಿವ ಸುಧಾಕರ್
ಕಳೆದ ಹತ್ತು ವರ್ಷಗಳಿಂದ ಕ್ಷೇತ್ರದ ಅಭಿವೃದ್ಧಿ ಮತ್ತು ಎಲ್ಲ ವರ್ಗದ ಜನರ ಶ್ರೇಯಸ್ಸಿಗಾಗಿ ನಿರಂತರ ಶ್ರಮಿಸುತ್ತಿದ್ದು, ಈಗಾಗಲೇ ಹಲವು ಶಾಶ್ವತ ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನ ಮಾಡಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಚಿಕ್ಕಬಳ್ಳಾಪುರ (ಏ.04): ಕಳೆದ ಹತ್ತು ವರ್ಷಗಳಿಂದ ಕ್ಷೇತ್ರದ ಅಭಿವೃದ್ಧಿ ಮತ್ತು ಎಲ್ಲ ವರ್ಗದ ಜನರ ಶ್ರೇಯಸ್ಸಿಗಾಗಿ ನಿರಂತರ ಶ್ರಮಿಸುತ್ತಿದ್ದು, ಈಗಾಗಲೇ ಹಲವು ಶಾಶ್ವತ ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನ ಮಾಡಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕೊಂಡೇನಹಳ್ಳಿ, ಸಿಡಗಾನಹಳ್ಳಿ, ನಾಗಸನಹಳ್ಳಿ, ಸೇರಿದಂತೆ ವಿವಿಧ ಗ್ರಾಪಂಗಳ ವ್ಯಾಪ್ತಿಯ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ತಮ್ಮ ಅಪಾರ ಬೆಂಬಲಿಗರೊಂದಿಗೆ ಬೆಂಗಳೂರಿನ ಸಚಿವರ ನಿವಾಸದಲ್ಲಿ ಸೋಮವಾರ ಬಿಜೆಪಿಗೆ ಬರಮಾಡಿಕೊಂಡು ಮಾತನಾಡಿದರು.
ಕ್ಷೇತ್ರ ಕೇಸರಿಯಾಗಲು ಸಹಕರಿಸಿ: ತಮ್ಮ ಮೇಲೆ ವಿಶ್ವಾಸ ಇಟ್ಟು, ವಿವಿಧ ಪಕ್ಷಗಳನ್ನು ತೊರೆದು ಸಾಗರೋಪಾದಿಯಲ್ಲಿ ಬಿಜೆಪಿ ಸೇರ್ಪಡೆಯಾಗುತ್ತಿರುವ ಕ್ಷೇತ್ರದ ಎಲ್ಲ ಮುಖಂಡರಿಗೆ ಹೃದಯಪೂರ್ವಕ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ ಸಚಿವ ಸುಧಾಕರ್, ಈ ಹಿಂದೆ ನೆಲೆಯೇ ಇಲ್ಲದ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರವನ್ನು ಸಂಪೂರ್ಣ ಕೇಸರಿಮಯ ಮಾಡಲು ಪ್ರತಿಯೊಬ್ಬರ ಸಹಕಾರ ಅಗತ್ಯವಿದೆ. ಇದಕ್ಕೆ ಕೈ ಜೋಡಿಸಿ ನಮ್ಮೊಂದಿಗೆ ಬರುವ ಎಲ್ಲರಿಗೂ ತುಂಬು ಹೃದಯದ ಸ್ವಾಗತ. ತಮ್ಮ ಮೇಲೆ ವಿಶ್ವಾಸ ಇಟ್ಟು, ಪಕ್ಷ ಸೇರ್ಪಡೆಯಾಗುತ್ತಿರುವ ಎಲ್ಲರಿಗೂ ಸಮಾನ ಸ್ಥಾನಮಾನ ನೀಡುವ ಜವಾಬ್ದಾರಿ ತಮ್ಮ ಮೇಲಿದ್ದು, ಇದಕ್ಕೆ ಅಹರ್ನಿಷಿ ಶ್ರಮಿಸುವುದಾಗಿ ಅವರು ಹೇಳಿದರು.
ಚುನಾವಣಾ ಪ್ರಚಾರಕ್ಕೆ ಮಕ್ಕಳು ಬರುವಂತಿಲ್ಲ: ಜಿಲ್ಲಾಧಿಕಾರಿ ಸೆಲ್ವಮಣಿ ಎಚ್ಚರಿಕೆ
ಸಿಡಗಾನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎಸ್.ಕೆ. ವೆಂಕಟರಾಯಪ್ಪ, ಕಳೆದ 75 ವರ್ಷದಲ್ಲಿ ಆಗದ ಅಭಿವೃದ್ಧಿ ಕೆಲಸ ಸಚಿವ ಸುಧಾಕರ್ ಅವರ ಅವಧಿಯಲ್ಲಿ ಆಗಿರುವುದು ಬಹಿರಂಗ ಸತ್ಯ. ಅಂತಹ ನಾಯಕರೊಂದಿಗೆ ಇರುವುದು ಜಿಲ್ಲೆಗೆ ಉತ್ತಮ ಎಂಬ ಉದ್ದೇಶದಿಂದ ಬಿಜೆಪಿ ಸೇರ್ಪಡೆಯಾಗಿರುವುದಾಗಿ ಹೇಳಿದರು. ಬಿಜೆಪಿ ಸೇರಿದ ಕೊಂಡೇನಹಳ್ಳಿ ಕಾಂಗ್ರೆಸ್ ಮುಖಂಡ ನಂದರೆಡ್ಡಿ ಮಾತನಾಡಿ, ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರತಿ ಹಳ್ಳಿಯಲ್ಲಿಯೂ ಪ್ರಸ್ತುತ ಬಿಜೆಪಿ ರಾರಾಜಿಸುತ್ತಿದೆ. ಇದಕ್ಕೆ ಕಾರಣ ಸಚಿವ ಸುಧಾಕರ್ ಅವರು ಮಾಡಿರುವ ಅಬಿವೃದ್ಧಿಯೇ ಆಗಿದೆ. ಅಲ್ಲದೆ, ಸಚಿವರು ಯಾವುದೇ ಜಾತಿ ಮತಗಳಿಗೆ ಮನ್ನಣೆ ನೀಡದೆ, ಎಲ್ಲರನ್ನೂ ಸಮಾನವಾಗಿ ಕೊಂಡೊಯ್ಯುವ ಮನಸ್ಥತ್ವ ಹೊಂದಿರುವ ಸಚಿವರ ಕೈ ಬಲಪಡಿಸಿದರೆ ಅವರು ಕ್ಷೇತ್ರವನ್ನು ಬಲಪಡಿಸಲಿದ್ದಾರೆ ಎಂದರು.
ಮುಸ್ಲಿಮರಿಗೆ ಸೌಲಭ್ಯ ನೀಡಿಲ್ಲವೆಂದರೆ ರಾಜಕೀಯ ನಿವೃತ್ತಿ: ಬಿ.ಎಸ್.ಯಡಿಯೂರಪ್ಪ
10 ವರ್ಷಗಳಿಂದ ಕ್ಷೇತ್ರದ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಶ್ರಮಿಸಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ದಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಮೂಲಕ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರವನ್ನು ರಾಜ್ಯದಲ್ಲಿಯೇ ಒಂದು ಮಾದರಿ ಕ್ಷೇತ್ರವಾಗಿ ಅಭಿವೃದ್ಧಿಪಡಿಸಲಾಗುವುದು.
- ಡಾ.ಕೆ.ಸುಧಾಕರ್, ಆರೋಗ್ಯ ಸಚಿವ.