ಕೈಗಾರಿಕೆ ಸ್ಥಾಪನೆಗೆ ಏಕಗವಾಕ್ಷಿ ವ್ಯವಸ್ಥೆ: ಸಚಿವ ಎಂ.ಬಿ.ಪಾಟೀಲ್‌

ಕೈಗಾರಿಕೆಗಳ ಸ್ಥಾಪನೆಗೆ ಸಂಬಂಧಿಸಿದಂತೆ ತೆಲಂಗಾಣದ ಏಕಗವಾಕ್ಷಿ ಮಾದರಿ ಸೇರಿದಂತೆ ಇತರ ರಾಜ್ಯಗಳಲ್ಲಿ ಇರುವ ಸರಳೀಕೃತ ಮಾದರಿ ಕುರಿತು ಮಾಹಿತಿ ಪಡೆಯುವ ಕುರಿತು ಚರ್ಚಿಸಲಾಗಿದೆ. 

Single Window system for setting up industries Says Minister MB Patil gvd

ವಿಜಯಪುರ (ಜೂ.05): ಕೈಗಾರಿಕೆಗಳ ಸ್ಥಾಪನೆಗೆ ಸಂಬಂಧಿಸಿದಂತೆ ತೆಲಂಗಾಣದ ಏಕಗವಾಕ್ಷಿ ಮಾದರಿ ಸೇರಿದಂತೆ ಇತರ ರಾಜ್ಯಗಳಲ್ಲಿ ಇರುವ ಸರಳೀಕೃತ ಮಾದರಿ ಕುರಿತು ಮಾಹಿತಿ ಪಡೆಯುವ ಕುರಿತು ಚರ್ಚಿಸಲಾಗಿದೆ. ರಾಜ್ಯದ ಆಯಾ ಜಿಲ್ಲೆಗಳ ಅಗತ್ಯಕ್ಕೆ ತಕ್ಕಂತೆ ಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ನಿರುದ್ಯೋಗ ನಿವಾರಣೆಗೆ ನಮ್ಮ ಸರ್ಕಾರದಲ್ಲಿ ಆದ್ಯತೆ ನೀಡಲಾಗುತ್ತದೆ ಎಂದು ಬೃಹತ್‌ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಡಾ.ಎಂ.ಬಿ.ಪಾಟೀಲ್‌ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೈಗಾರಿಕೆಗಳಿಗೆ ಅನುಮತಿ ಒದಗಿಸುವ ಏಕಗವಾಕ್ಷಿ ಪ್ರಕ್ರಿಯೆ ನೈಜವಾಗಿಯೂ ಏಕಗವಾಕ್ಷಿ ಆಗಿರದೇ ಬಹುಗವಾಕ್ಷಿ ಮಾದರಿಯಲ್ಲಿಯೇ ಇದೆ. ಹೀಗಾಗಿ, ಈ ಬಹುಕಿಡಕಿಗಳನ್ನು ಮುಚ್ಚಿ ಅದರ ಹೆಸರಿಗೆ ತಕ್ಕಂತೆ ಏಕಗವಾಕ್ಷಿ ಪ್ರಕ್ರಿಯೆಯನ್ನು ಬಲಪಡಿಸಲಾಗುವುದು ಎಂದರು.

ಪಂಜಾಬ್‌, ತೆಲಂಗಾಣ ರಾಜ್ಯದಲ್ಲಿ ಕೈಗಾರಿಕೆಗಳ ಪ್ರಗತಿಗೆ ಕೈಗೊಂಡಿರುವ ಕಾರ್ಯಕ್ರಮಗಳನ್ನು ಸಮಗ್ರವಾಗಿ ಅಧ್ಯಯನ ಮಾಡಿ ಕರ್ನಾಟಕವನ್ನು ಕೈಗಾರಿಕಾ ವಲಯವನ್ನು ಮಾದರಿಯಾಗಿ ಪ್ರಗತಿಗೊಳಿಸುವ ನಿಟ್ಟಿನಲ್ಲಿ ಕಾರ್ಯಯೋಜನೆ ರೂಪಿಸಲಾಗುತ್ತಿದೆ. ಈ ಬಗ್ಗೆಯೂ ಅಧ್ಯಯನ ನಡೆಸಿ ಸಮಗ್ರ ಮಾದರಿಯನ್ನು ಕರ್ನಾಟಕದಲ್ಲಿ ರೂಪಿಸಲಾಗುವುದು. ಶೀಘ್ರದಲ್ಲಿಯೇ ಸಭೆ ನಡೆಸಿ ಯಾವ ರೀತಿ ಮುನ್ನಡೆಯಬೇಕು ಎಂಬುದರ ಕುರಿತು ಚರ್ಚೆ ನಡೆಸಿ ಹೆಜ್ಜೆ ಇರಿಸಲಾಗುವುದು ಎಂದರು. ಕೈಗಾರಿಕಾ ಉದ್ದೇಶಗಳಿಗೆ ಭೂಮಿ ಪಡೆದುಕೊಂಡು ರಿಯಲ್‌ ಎಸ್ಟೇಟ್‌ ವ್ಯವಹಾರಗಳಿಗೆ ಬಳಸಿಕೊಳ್ಳುತ್ತಿರುವುದು ನನ್ನ ಗಮನಕ್ಕೆ ಬಂದಿದೆ. 

ವಿದ್ಯಾರ್ಥಿಗಳ ಸುಗಮ ಸಂಚಾರಕ್ಕೆ ನರ್ಮ್ ಬಸ್ ಕಲ್ಪಿಸಿ: ಶಾಸಕ ಯಶಪಾಲ್ ಸುವರ್ಣ

ಈ ಎಲ್ಲವೂಗಳನ್ನು ತೊಡೆದು ಹಾಕುವ ನಿಟ್ಟಿನಲ್ಲಿ ಇಲಾಖೆ ಸಂಪೂರ್ಣ ಬದ್ಧವಾಗಿದೆ ಎಂದು ಹೇಳಿದರು. ಕರ್ನಾಟಕ ಐಟಿ-ಬಿಟಿ ವಲಯದಲ್ಲಿ ವಿಶ್ವದಲ್ಲಿಯೇ ನಂಬರ್‌ 1 ಆಗಿದೆ. ಆದರೆ ಉತ್ಪಾದನಾ ಕ್ಷೇತ್ರದಲ್ಲಿ ಇನ್ನೂ ಪ್ರಗತಿಯಾಗಬೇಕಿದೆ. ತಮಿಳುನಾಡು, ಗುಜರಾತ್‌ ರಾಜ್ಯಗಳು ಈ ವಲಯದಲ್ಲಿ ಪ್ರಗತಿಯಾಗಿವೆ. ಈ ನಿಟ್ಟಿನಲ್ಲಿ ಕರ್ನಾಟಕವೂ ಸಹ ಉತ್ಪಾದನಾ ವಲಯದಲ್ಲಿ ದಿಟ್ಟಹೆಜ್ಜೆ ಇರಿಸಲಿದೆ. ಕೈಗಾರಿಕೆಗಳ ಸ್ಥಾಪನೆಗೆ ಪೂರಕವಾದ ನೈಸರ್ಗಿಕ ಲಭ್ಯತೆ, ಸೌಹಾರ್ದದ ವಾತಾವರಣವಿದೆ. ಹೀಗಾಗಿ, ಕಿತ್ತೂರ ಕರ್ನಾಟಕ, ಕಲ್ಯಾಣ ಕರ್ನಾಟಕ, ಮೈಸೂರು ಕರ್ನಾಟಕ, ಮಧ್ಯ ಕರ್ನಾಟಕ ಎಲ್ಲೆಡೆ ಕೈಗಾರಿಕೆಗಳು ವಿಸ್ತಾರವಾಗಿ ಉದ್ಯೋಗ ದೊರಕಿಸುವ ನಿಟ್ಟಿನಲ್ಲಿ ಕಾರ್ಯಯೋಜನೆ ರೂಪಿಸಲಾಗುವುದು ಎಂದರು.

ಗಡಿ ಭಾಗದ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು: ಶಾಸಕ ಪುಟ್ಟರಂಗಶೆಟ್ಟಿ

ಕೈಗಾರಿಕೆಗಳಿಗೆ ನೀರು ಅತ್ಯಂತ ಅವಶ್ಯವಾಗಿ ಬೇಕು. ಬೆಂಗಳೂರು ಸುತ್ತ ನೀರಿನ ಲಭ್ಯತೆ ಕಡಿಮೆ ಇದೆ. ವಿಜಯಪುರ, ಬಾಗಲಕೋಟೆ ನೀರಿನ ಲಭ್ಯತೆಯೂ ಅಧಿಕ ಪ್ರಮಾಣದಲ್ಲಿದೆ. ಹೀಗಾಗಿ, ಈ ಎಲ್ಲ ಕೈಗಾರಿಕೆಗಳು ಈ ಭಾಗಕ್ಕೆ ಬರಲು ಆಸಕ್ತಿ ತೋರುವುದು ಹೆಚ್ಚು. ಈ ನಿಟ್ಟಿನಲ್ಲಿ ಕೈಗಾರಿಕೆಗಳಿಗೆ ಪೂರಕವಾದ ಭೂಮಿ, ನೀರು, ವಿದ್ಯುತ್‌ ಶಕ್ತಿ ಸೇರಿದಂತೆ ಅಗತ್ಯ ಸೌಕರ್ಯ ಒದಗಿಸಲು ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದರು. ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಕೈಗಾರಿಕೆಗಳು ಯಾವ ರೀತಿ ಯುವ ಸಂಪನ್ಮೂಲ ಅಗತ್ಯವಿದೆ ಎಂದು ಮಾಹಿತಿ ಸಂಗ್ರಹಿಸಿ ಅದಕ್ಕೆ ಪೂರಕವಾಗಿಯೇ ಕೌಶಲಗಳನ್ನು ವಿದ್ಯಾರ್ಥಿಗಳಿಗೆ ಬೋಧಿಸುವ ನಿಟ್ಟಿನಲ್ಲಿ ಪಠ್ಯಕ್ರಮ ಬದಲಾವಣೆ ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಮಿತಿ ರಚನೆಯಾಗಲಿದೆ ಎಂದರು.

Latest Videos
Follow Us:
Download App:
  • android
  • ios