ಬೆಂಗಳೂರು, (ಅ.14): ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಜಿದ್ದಾಜಿದ್ದಿನ ಸೆಣೆಸಾಟಕ್ಕೆ ವೇದಿಕೆಯಾಗಿರುವ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಇಂದು (ಬುಧವಾರ) ಪ್ರಮುಖ ಮೂರೂ ಪಕ್ಷಗಳಿಂದ ನಾಮಪತ್ರ ಸಲ್ಲಿಕೆ ಮಾಡುವುದರೊಂದಿಗೆ ಉಪಸಮರದ ಕಣ ರಂಗೇರಿದೆ.

ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಶುಕ್ರವಾರ ಕೊನೆಯ ದಿನವಾದ ಹಿನ್ನೆಲೆಯಲ್ಲಿ ರಾಜ ರಾಜೇಶ್ವರಿ ನಗರ ಹಾಗೂ ಶಿರಾ ಕ್ಷೇತ್ರದ ಉಪ ಚುನಾವಣೆಗಾಗಿ ಬುಧವಾರ ಮೂರು ಪಕ್ಷಗಳ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದರು.

ಶಿರಾ ಬೈ ಎಲೆಕ್ಷನ್‌ಗೆ ಅಭ್ಯರ್ಥಿ ​ಹೆಸ್ರು ಘೋಷಿಸಿದ ಕೆಲವೇ ಗಂಟೆಗಳಲ್ಲಿ JDSಗೆ ಬಿಗ್ ಶಾಕ್

ಅದರಲ್ಲೂ ಶಿರಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ನಾಮಪತ್ರ ಸಲ್ಲಿಕೆ ಮಾಡಿದರು. ಆದ್ರೆ, ಅವರಿಗೆ ಕೊರೋನಾ ಸೋಂಕು ತಗುಲಿರುವುದಿರಂದ ಅಮ್ಮಾಜಮ್ಮ ಪರವಾಗಿ ಜೆಡಿಎಸ್ ನಾಯಕರು ಉಮೇದುವಾರಿಕೆಯನ್ನು ಸಲ್ಲಿಸಿದರು.

ಮಾಜಿ ಸಚಿವ ಎಚ್.ಡಿ.ರೇವಣ್ಣ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಕೆ. ಕುಮಾರಸ್ವಾಮಿ ಮತ್ತು ಅಮ್ಮಾಜಮ್ಮಾ ಪುತ್ರ ಸತ್ಯಪ್ರಕಾಶ ಸೇರಿ ನಾಮಪತ್ರ ಸಲ್ಲಿಕೆ ಮಾಡಿದರು. 

ತುಮಕೂರು ಜಿಲ್ಲೆಯ ಶಿರಾ ಮತ್ತು ಬೆಂಗಳೂರಿನ ಆರ್.ಆರ್.ನಗರ ಕ್ಷೇತ್ರಗಳಿಗೆ ನ.03ರಂದು ಮತದಾನ ನಡೆಯಲಿದ್ದು, ನ.10ಕ್ಕೆ 10ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಸಲು ಅ.16 ಕೊನೆಯ ದಿನವಾಗಿದೆ....