Asianet Suvarna News Asianet Suvarna News

ಫಲಿತಾಂಶಕ್ಕೂ ಮುನ್ನ ಆಸ್ಪತ್ರೆಗೆ ದಾಖಲಾದ ಶಿರಾ ಕಾಂಗ್ರೆಸ್ ಅಭ್ಯರ್ಥಿ

ಶಿರಾ ಉಪಚುನಾವಣೆಯ ಫಲಿತಾಂಶಕ್ಕೆ ಕೌಂಟ್ ಡೌನ್ ಶುರುವಾಗಿದೆ. ಇದಕ್ಕೂ ಮುನ್ನವೇ ಕಾಂಗ್ರೆಸ್ ಅಭ್ಯರ್ಥಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Sira By Poll Congress Candidate jayachandra tests corona positive rbj
Author
Bengaluru, First Published Nov 9, 2020, 9:44 PM IST
  • Facebook
  • Twitter
  • Whatsapp

ತುಮಕೂರು, (ನ.09): ಶಿರಾ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಅವರು ನವೆಂಬರ್ 10ರಂದು ನಡೆಯುವ ಶಿರಾ ಉಪಚುನಾವಣೆಯ ಫಲಿತಾಂಶದ ಪ್ರಕ್ರಿಯೆಯಲ್ಲಿ ಭಾಗವಹಿಸುತ್ತಿಲ್ಲ.

ಈ ಬಗ್ಗೆ ಅವರೇ ಸಾಮಾಜಿಕ ಜಾಲತಾಣಗಳ ಮೂಲಕ ಸ್ಪಷ್ಟಪಡಿಸಿದ್ದಾರೆ. ಜಯಚಂದ್ರ ಅವರಿಗೆ ಮಾತ್ರವಲ್ಲದೇ ಪತ್ನಿಗೂ ಸಹ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ದಂಪತಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಳಗಾದರೇ ಶಿರಾ ಉಪಚುನಾವಣೆ ಪ್ರಕ್ರಿಯೆ ಶುರುವಾಗಲಿದೆ. ಆದ್ರೆ, ಕಾಂಗ್ರೆಸ್ ಅಭ್ಯರ್ಥಿ ಜಯಚಂದ್ರ ಅವರು ಆಸ್ಪತ್ರೆಗೆ ದಾಖಲಾಗಿರುವುದು ಅಭಿಮಾನಿಗಳಲ್ಲಿ ಆತಂಕ ಶುರುವಾಗಿದೆ.

ಕೋವಿಡ್ ಪಾಸಿಟಿವ್ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದೇನೆ. ನಾಳಿನ ಮತ ಎಣಿಕೆಗೆ ಭಾಗವಹಿಸಲು ಆಗುವುದಿಲ್ಲ, ನಿಮ್ಮೆಲ್ಲರ ಶ್ರಮ ಹಾಗೂ ಆಶೀರ್ವಾದ ಗೆಲುವಿನ ಫಲಿತಾಂಶ ನೀಡಲಿದೆ ಎಂಬ ವಿಶ್ವಾಸದಲ್ಲಿ ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

Follow Us:
Download App:
  • android
  • ios