ಘನ ತ್ಯಾಜ್ಯ ಕಂಪನಿ ಹಣ ದುರ್ಬಳಕೆ: ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ

ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ಸಂಸ್ಥೆಯು ಸ್ಥಾಪನೆಯಾದ ಬಳಿಕ ನಿರ್ವಹಣೆಯಲ್ಲಿ ಆಗಿರುವ ಲೋಪಗಳು, ಹಣ ದುರುಪಯೋಗದ ಕುರಿತು ಸಮಗ್ರ ತನಿಖೆ ನಡೆಸಿ ವರದಿ ನೀಡುವಂತೆ ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. 

Solid waste company money misappropriation CM Siddaramaiah orders Investigation gvd

ಬೆಂಗಳೂರು (ಜೂ.21): ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ಸಂಸ್ಥೆಯು ಸ್ಥಾಪನೆಯಾದ ಬಳಿಕ ನಿರ್ವಹಣೆಯಲ್ಲಿ ಆಗಿರುವ ಲೋಪಗಳು, ಹಣ ದುರುಪಯೋಗದ ಕುರಿತು ಸಮಗ್ರ ತನಿಖೆ ನಡೆಸಿ ವರದಿ ನೀಡುವಂತೆ ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಘನತ್ಯಾಜ್ಯ ನಿರ್ವಹಣೆಗಾಗಿ 2015ರಲ್ಲಿ ನಗರದ ಆರು ಕಡೆಗಳಲ್ಲಿ .468 ಕೋಟಿ ವೆಚ್ಚದಲ್ಲಿ ಘನತ್ಯಾಜ್ಯ ನಿರ್ವಹಣೆ ಘಟಕಗಳನ್ನು ಆರಂಭಿಸಲಾಗಿತ್ತು. ಆದರೆ, ಈ ಘಟಕಗಳನ್ನು ನಿರ್ವಹಣೆ ಮಾಡದೆ ತ್ಯಾಜ್ಯವನ್ನು ಭೂ ಭರ್ತಿ ಪ್ರದೇಶದಲ್ಲಿ ವಿಲೇವಾರಿ ಮಾಡಲಾಗುತ್ತಿದೆ. 

ಈ ಘಟಕಗಳನ್ನು ಕಾರ್ಯಾಚರಣೆ ಮಾಡದೆ ನಿಷ್ಕಿ್ರಯ ಮಾಡಿರುವುದೇಕೆ? ರಾಷ್ಟ್ರೀಯ ಹಸಿರು ಮಂಡಳಿ (ಎನ್‌ಜಿಟಿ) ನಿಯಮಗಳನ್ನು ಪಾಲನೆ ಮಾಡದೆ ಪಾಲಿಕೆ ಅನಗತ್ಯವಾಗಿ .1,100 ಕೋಟಿ ಅನುತ್ಪಾದಕ ಕ್ರಮಗಳಿಗೆ ಹಾಗೂ ಅವೈಜ್ಞಾನಿಕ ಯೋಜನೆಗಳಿಗೆ ವೆಚ್ಚ ಮಾಡಿ ಸಾರ್ವಜನಿಕ ಆರೋಗ್ಯ ಮತ್ತು ಪರಿಸರಕ್ಕೆ ಹಾನಿಯುಂಟು ಮಾಡುವ ಯೋಜನೆಗಳಾಗಿ ಮಾರ್ಪಟಿವೆ. ಬೆಂಗಳೂರು ನಗರದಲ್ಲಿ ತ್ಯಾಜ್ಯ ನಿರ್ವಹಣೆಗಾಗಿಯೇ ಸರ್ಕಾರಿ ಸ್ವಾಮ್ಯದ ಘನತ್ಯಾಜ್ಯ ನಿರ್ವಹಣೆ ನಿಯಮಿತವನ್ನು 2021ರಲ್ಲಿ ಸ್ಥಾಪಿಸಲಾಗಿದೆ. 

ಬಿಜೆಪಿಗರು ಅಕ್ಕಿ ಕೊಡಲಾಗದಿದ್ದರೆ ಹಣ ಕೊಡಿ ಅಂತಾರೆ, ದುಡ್ಡು ತಿನ್ನೋಕೆ ಆಗುತ್ತಾ?: ಸಿದ್ದು

ಇದರ ಮೂಲಕ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡಲು ಸೂಚಿಸಲಾಗಿದ್ದರೂ ಮಾನದಂಡಗಳನ್ನು ಪಾಲನೆ ಮಾಡದೆ ಬ್ಯಾಂಕ್‌ ಗ್ಯಾರಂಟಿ ದಾಖಲೆ ಸಲ್ಲಿಸಿದ್ದ ಪರಿಶುದ್ಧ ವೆಂಚು​ರ್‍ಸ್ಗೆ ಸರ್ಕಾರದ ಸೂಚನೆ ಮೀರಿ 13.45 ಕೋಟಿ ಮುಂಗಡವಾಗಿ ಪಾವತಿ ಮಾಡಲಾಗಿದೆ ಎಂದು ವಿಧಾನ ಪರಿಷತ್ತು ಸದಸ್ಯ ಪಿ.ಆರ್‌.ರಮೇಶ್‌ ಸರ್ಕಾರದ ಗಮನಕ್ಕೆ ತಂದಿದ್ದಾರೆ. ಜತೆಗೆ, ಈ ಬಗ್ಗೆ ತನಿಖೆ ಮಾಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್‌ ಅವರಿಗೆ ಪತ್ರ ಬರೆದಿದ್ದರು.

ಹೀಗಾಗಿ, ನಗರ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ ನಿರ್ವಹಣೆಯಲ್ಲಿ ವಿಫಲವಾದ ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತ ಸಂಸ್ಥೆಯು ಪ್ರಸ್ತುತ ನೀಡಿರುವ ಕಾರ್ಯಾದೇಶಗಳನ್ನು, ಚಾಲ್ತಿಯಲ್ಲಿರುವ ಟೆಂಡರ್‌ ಪ್ರಕ್ರಿಯೆಗಳನ್ನು ರದ್ದುಗೊಳಿಸಿ ಈ ಸಂಸ್ಥೆ ಸ್ಥಾಪನೆಯಾದಾಗಿನಿಂದ ಅನುಷ್ಠಾನಗೊಳಿಸಿದ ಕಾಮಗಾರಿಗಳ ಅನುಷ್ಠಾನ, ಹಣ ದುರುಪಯೋಗ ಹಾಗೂ ಸಂಸ್ಥೆಯ ಸಂಪೂರ್ಣ ಕಾರ್ಯವೈಖರಿಯ ಬಗ್ಗೆ ಸಮಗ್ರ ತನಿಖೆ ನಡೆಸಿ ವಸ್ತು ಸ್ಥಿತಿಯೊಂದಿಗೆ ವಿವರವಾದ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.

5 ವರ್ಷ ಸಿಎಂ ಹುದ್ದೆ ಬಗ್ಗೆ ಸಚಿವ ಮಹದೇವಪ್ಪನ ಕೇಳಿ: ಸಿಎಂ ಸಿದ್ದರಾಮಯ್ಯ

ಅಧಿಕಾರಿಗಳೊಂದಿಗೆ ಡಿಸಿಎಂ ಡಿಕೆಶಿ ಸಭೆ: ಬೆಂಗಳೂರು ಘನ ತ್ಯಾಜ್ಯ ನಿರ್ವಹಣೆ ಸಂಸ್ಥೆಯ ಕಚೇರಿಯಲ್ಲಿ ಮಂಗಳವಾರ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರ ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್‌ ಸಂಸ್ಥೆಯ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು. ಈ ವೇಳೆ ಸಂಸ್ಥೆ ಅಧ್ಯಕ್ಷ ರಾಕೇಶ್‌ ಸಿಂಗ್‌, ವ್ಯವಸ್ಥಾಪಕ ನಿರ್ದೇಶಕ ತುಷಾರ್‌ ಗಿರಿನಾಥ್‌, ಸಿಇಒ ಹರೀಶ್‌ ಕುಮಾರ್‌, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ. ರಾಜೇಂದ್ರ ಪ್ರಸಾದ್‌, ಮುಖ್ಯ ಎಂಜಿನಿಯರ್‌ ಬಸವರಾಜ್‌ ಕಬಾಡೆ ಮತ್ತಿತರರಿದ್ದರು.

Latest Videos
Follow Us:
Download App:
  • android
  • ios