ಮುನೇನಕೊಪ್ಪ, ಚಿಕ್ಕನಗೌಡರ ಮಾತ್ರವಲ್ಲದೆ ಇನ್ನೂ ಹಲವು ಮಂದಿ ಕಾಂಗ್ರೆಸ್‌ ಸೇರಲು ಉತ್ಸುಕರಾಗಿದ್ದಾರೆ. ಯಾರಾರ‍ಯರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ, ಹಂತ ಹಂತವಾಗಿ ಅವರು ನಮ್ಮ ಪಕ್ಷಕ್ಕೆ ಬರಲಿದ್ದಾರೆ ಎಂದು ತಿಳಿಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ 

ಧಾರವಾಡ(ಆ.28): ಬಿಜೆಪಿಯ ಕೆಲವು ಶಾಸಕರು ಕಾಂಗ್ರೆಸ್ಸಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ಚರ್ಚೆಗಳ ನಡುವೆಯೇ, ಬಿಜೆಪಿಯ ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹಾಗೂ ಮಾಜಿ ಶಾಸಕ ಎಸ್‌.ಐ.ಚಿಕ್ಕನಗೌಡರ ಅವರು ಕಾಂಗ್ರೆಸ್‌ ಸೇರಲಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಮಾಹಿತಿ ನೀಡಿದ್ದಾರೆ.

ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಮುನೇನಕೊಪ್ಪ, ಚಿಕ್ಕನಗೌಡರ ಮಾತ್ರವಲ್ಲದೆ ಇನ್ನೂ ಹಲವು ಮಂದಿ ಕಾಂಗ್ರೆಸ್‌ ಸೇರಲು ಉತ್ಸುಕರಾಗಿದ್ದಾರೆ. ಯಾರಾರ‍ಯರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ, ಹಂತ ಹಂತವಾಗಿ ಅವರು ನಮ್ಮ ಪಕ್ಷಕ್ಕೆ ಬರಲಿದ್ದಾರೆ ಎಂದು ತಿಳಿಸಿದರು.

ಲೋಕಸಭೆ ಚುನಾವಣೆ: ಪ್ರಲ್ಹಾದ್‌ ಜೋಶಿಗೆ ಟಕ್ಕರ್ ಕೊಡಲು ಸಜ್ಜಾಗುತ್ತಿದ್ದಾರಾ ವಿನಯ ಕುಲಕರ್ಣಿ ಪತ್ನಿ

ಇದೇ ವೇಳೆ ಲೋಕಸಭಾ ಚುನಾವಣೆ ಟಿಕೆಟ್‌ ಹಂಚಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಈಗಾಗಲೇ ಯಾರಿಗೆ ಟಿಕೆಟ್‌ ನೀಡಬೇಕೆಂದು ಸಮೀಕ್ಷೆ ನಡೆಸಲಾಗುತ್ತಿದೆ. ಜಿಲ್ಲೆಯ ಎಲ್ಲ ಶಾಸಕರು, ನಾಯಕರ ಅಭಿಪ್ರಾಯ ಸಂಗ್ರಹ ಮಾಡಿ ಸೂಕ್ತ ಅಭ್ಯರ್ಥಿಗೆ ಟಿಕೆಟ್‌ ನೀಡಲಾಗುವುದು ಎಂದರು.