Asianet Suvarna News Asianet Suvarna News

ಜೆಡಿಎಸ್, ಬಿಜೆಪಿಯ ಕೆಲವರು ಕಾಂಗ್ರೆಸ್ ಮನೆ ಬಾಗಿಲು ತಟ್ಟುತ್ತಿದ್ದಾರೆ: ಕೆಪಿಸಿಸಿ ಕಾರ್ಯಧ್ಯಕ್ಷ ಹೊಸ ಬಾಂಬ್

* ರಾಜ್ಯ  ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದ ಕೆಪಿಸಿಸಿ ಕಾರ್ಯಧ್ಯಕ್ಷ
* ಜೆಡಿಎಸ್, ಬಿಜೆಪಿಯ ಕೆಲವರು ಕಾಂಗ್ರೆಸ್ ಮನೆ ಬಾಗಿಲು ತಟ್ಟುತ್ತಿದ್ದಾರೆ ಎಂದ ಕಾಂಗ್ರೆಸ್ ನಾಯಕ
* ಮೈಸೂರಿನಲ್ಲಿ ಮಾಧ್ಯ,ಗಳ ಮುಂದೆ ಹೊಸ ಬಾಂಬ್

some jds and bjp leaders ready to join congress says dhruvanarayan rbj
Author
Bengaluru, First Published Jul 3, 2021, 10:19 PM IST

ಮೈಸೂರು, (ಜುಲೈ.03): ವಿಧಾನಸಭೆ ಚುನಾವಣೆಗೆ ಇನ್ನೂ ಎರಡು ಅವಧಿ ಬಾಕಿ ಇದೆ. ಆಗಲೇ ರಾಜ್ಯ ಕಾಂಗ್ರೆಸ್‌ನಲ್ಲಿ ರಾಜಕೀಯ ಚಟುವಟಿಕೆಗಳಿಗಳು ಗರಿಗೆದರಿವೆ.

ಬಿಜೆಪಿಗೆ ಹೋಗಿರುವ 14 ಶಾಸಕರು ವಾಪಸ್‌ ಕಾಂಗ್ರೆಸ್‌ಗೆ ಬರಲು ಅರ್ಜಿ ಹಾಕಬಹುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮುಕ್ತ ಕಂಠದಿಂದ ಹೇಳಿದ್ದಾರೆ. ಇದರ ಮಧ್ಯೆ  ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಹೊಸ ಬಾಂಬ್ ಸಿಡಿಸಿದ್ದಾರೆ.

ಬಿಜೆಪಿ ಸೇರಿದ 17 ಶಾಸಕರಿಗೆ ಕಾಂಗ್ರೆಸ್ ಮತ್ತೆ ಮಣೆ..? ರಾಜ್ಯ ರಾಜಕಾರಣದಲ್ಲಿ ಸಂಚಲನ

ಮೈಸೂರಿನಲ್ಲಿ ಇಂದು (ಶನಿವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಹಾಗೂ ಬಿಜೆಪಿಯ ಕೆಲ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಬರುವ ಪ್ರಯತ್ನದಲ್ಲಿ ಇದ್ದಾರೆ. ಕೆಲ ಶಾಸಕರು ನಮ್ಮ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದರು.

ಆದರೆ ಅವರು ಯಾರು ಎಂಬುದನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ಬೇರೆ ಪಕ್ಷದ ಶಾಸಕರುಗಳ ಸೇರ್ಪಡೆ ಬಗ್ಗೆ ಒಂದು ಸಮಿತಿ ಇದೆ. ಅದನ್ನು ಸಮಿತಿ ತೀರ್ಮಾನ ಮಾಡುತ್ತದೆ ಎಂದು ಸ್ಪಷ್ಟಪಡಿಸಿದರು.

ಇನ್ನು ಇದೇ ವೇಳೆ ಜಿ.ಪಂ‌ ತಾ.ಪಂ. ಚುನಾವಣೆಗೆ ಮೀಸಲಾತಿ ಪ್ರಕಟಗೊಂಡಿರುವ ಬಗ್ಗೆ ಪ್ರತಿಕ್ರಿಯಿಸಿದ್ದು, ದೆ. ನಾವು ಚುನಾವಣೆಗೆ ಸಿದ್ಧರಿದ್ದೇವೆ. ಕೋವಿಡ್ ಸಂದರ್ಭದಲ್ಲಿ ಪಕ್ಷ ನಿರಂತರವಾಗಿ ಸಂಘಟನೆಯಲ್ಲಿ ತೊಡಗಿಕೊಂಡಿದೆ. ಕಳೆದ ಗ್ರಾ.ಪಂ. ಚುನಾವಣೆ ಕಾಂಗ್ರೆಸ್‌ಗೆ ಉತ್ತಮ ಫಲಿತಾಂಶ ಬಂದಿದೆ. ಮೈಸೂರು, ಚಾಮರಾಜನಗರದಲ್ಲಿ ಪಕ್ಷ ಶಕ್ತಿಯುತವಾಗಿದೆ ಎಂದರು.

Follow Us:
Download App:
  • android
  • ios