ರಾಜ್ಯದಲ್ಲಿ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಈಗಾಗಲೇ ಮಿಂಚಿನ ಸಂಚಾರ ನಡೆಸಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಶನಿವಾರ ಸಂಜೆ 5.30ಕ್ಕೆ ಹುಬ್ಬಳ್ಳಿ ನಗರದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಸೋನಿಯಾ ಗಾಂಧಿ ಭಾಗವಹಿಸಲಿದ್ದಾರೆ. ಈ ಚುನಾವಣೆಯಲ್ಲಿ ಇದು ಅವರ ಮೊದಲ ಪ್ರಚಾರ ಕಾರ್ಯಕ್ರಮವಾಗಿದೆ. 

ಬೆಂಗಳೂರು(ಮೇ.06): ರಾಜ್ಯ ವಿಧಾನಸಭೆ ಚುನಾವಣಾ ಪ್ರಚಾರದ ಅಖಾಡಕ್ಕೆ ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಅವರು ಪ್ರವೇಶಿಸುತ್ತಿದ್ದು, ಶನಿವಾರ ಹುಬ್ಬಳ್ಳಿಯಲ್ಲಿ ಸೋನಿಯಾ ಹಾಗೂ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಬೃಹತ್‌ ಸಾರ್ವಜನಿಕ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಭಾನುವಾರ ಬೆಂಗಳೂರಿನಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ರೋಡ್‌ ಶೋ ನಡೆಸಲಿದ್ದಾರೆ.

ರಾಜ್ಯದಲ್ಲಿ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಈಗಾಗಲೇ ಮಿಂಚಿನ ಸಂಚಾರ ನಡೆಸಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಶನಿವಾರ ಸಂಜೆ 5.30ಕ್ಕೆ ಹುಬ್ಬಳ್ಳಿ ನಗರದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಸೋನಿಯಾ ಗಾಂಧಿ ಭಾಗವಹಿಸಲಿದ್ದಾರೆ. ಈ ಚುನಾವಣೆಯಲ್ಲಿ ಇದು ಅವರ ಮೊದಲ ಪ್ರಚಾರ ಕಾರ್ಯಕ್ರಮವಾಗಿದೆ. ಇದೇ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ ಕೂಡ ಪಾಲ್ಗೊಳ್ಳಲಿದ್ದಾರೆ.

ನೆಹರು, ಗಾಂಧಿ ಕುಟುಂಬಕ್ಕೆ ಬೈದದ್ದು ಲೆಕ್ಕ ಹಾಕಿ: ಪ್ರಧಾನಿ ಮೋದಿಗೆ ಖರ್ಗೆ ತಿರುಗೇಟು

ಉಳಿದಂತೆ ಶನಿವಾರ ಮಧ್ಯಾಹ್ನ 2.15ಕ್ಕೆ ರಾಹುಲ್‌ ಗಾಂಧಿ ಬೆಳಗಾವಿ ಜಿಲ್ಲೆಯ ಯಮಕನಮರಡಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 3.45 ಗಂಟೆಗೆ ಬೆಳಗಾವಿಯ ಚಿಕ್ಕೋಡಿಯಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಬೆಂಗಳೂರಲ್ಲಿ ಪ್ರಿಯಾಂಕಾ ಪ್ರಚಾರ:

ಇನ್ನು ಮೇ 7 ರಂದು ಭಾನುವಾರ ಬೆಂಗಳೂರಿನ ವಿವಿಧೆಡೆ ಪ್ರಿಯಾಂಕಾ ಗಾಂಧಿ ಪ್ರಚಾರ ನಡೆಸಲಿದ್ದಾರೆ. ಮೊದಲಿಗೆ ಮೂಡುಬಿದಿರೆಯಲ್ಲಿ ಸಮಾವೇಶ ನಡೆಸಲಿರುವ ಅವರು ಸಂಜೆ 5.30 ಗಂಟೆಗೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಸಂಜೆ ಮಹದೇವಪುರ ಕ್ಷೇತ್ರ, ಬೆಂಗಳೂರು ದಕ್ಷಿಣ ಕ್ಷೇತ್ರ, ಶಿವಾಜಿನಗರ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ.

ಇದಕ್ಕೂ ಮೊದಲು ಶನಿವಾರ ಬೆಂಗಳೂರಿನ ಗಾಂಧಿನಗರ, ಗೋವಿಂದರಾಜನಗರ, ವಿಜಯನಗರ ಹಾಗೂ ಚಿಕ್ಕಪೇಟೆ ಕ್ಷೇತ್ರಗಳಲ್ಲಿ ಪ್ರಿಯಾಂಕಾ ಅವರು ಪ್ರಚಾರ ನಡೆಸಬೇಕಾಗಿತ್ತು. ಆದರೆ ಪ್ರಿಯಾಂಕಾ ಅವರ ಪ್ರಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.