ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆ: ಶೀಘ್ರ ಬಾಕಿ ಭೂಸ್ವಾಧೀನ ಪೂರ್ಣಗೊಳಿಸಿ, ಎಂ. ಬಿ. ಪಾಟೀಲ
ಈ ಯೋಜನೆ ವ್ಯಾಪ್ತಿಯಲ್ಲಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ 7 ಏಳು ಮತ್ತು ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ 22 ಗ್ರಾಮಗಳ ರೈತರ ಭೂಸ್ವಾಧೀನ ಪ್ರಕ್ರಿಯೆ ನಾನಾ ಹಂತಗಳಲ್ಲಿ ಬಾಕಿ ಉಳಿದಿದೆ. ಜಂಟಿ ಸಮೀಕ್ಷೆ ಸಮಿತಿ ಸಭೆ, ಐ-ತೀರ್ಪು, ಪರಿಹಾರ ವಿತರಣೆ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಮನವಿ ಮಾಡಿದರು. ಆಗ ಕೂಡಲೇ ಸ್ಪಂದಿಸಿದ ಸಚಿವರು ಸಂಬಂಧಿಸಿದ ಅಧಿಕಾರಿಗಳಿಗೆ ಕರೆ ಮಾಡಿ ಈ ಯೋಜನೆಯಡಿ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಿ ಫಲಾನುಭವಿಗಳಿಗೆ ಸೂಕ್ತ ಪರಿಹಾರ ಒದಗಿಸುವಂತೆ ಸೂಚನೆ ನೀಡಿದ ಎಂ. ಬಿ. ಪಾಟೀಲ
ವಿಜಯಪುರ(ಆ.16): ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆಯಡಿ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಆದಷ್ಟು ಬೇಗ ಬಗೆಹರಿಸಬೇಕು ಮತ್ತು ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಮತ್ತು ಉಪಮೇಯರ್ ಚುನಾವಣೆ ನಡೆಸಲು ಕ್ರಮ ಕೈಗೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದಲ್ಲಿ ಗೃಹ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಅವರು ನಾನಾ ಗ್ರಾಮಸ್ಥರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಸ್ಪಂದಿಸಿ, ತುಬಚಿ- ಬಬಲೇಶ್ವವ ಏತ ನೀರಾವರಿ ಯೋಜನೆ ವ್ಯಾಪ್ತಿಯಲ್ಲಿ ಬರುವ ತಿಕೋಟಾ ತಾಲೂಕಿನ ನಾನಾ ಗ್ರಾಮಗಳಿಂದ ಆಗಮಿಸಿದ್ದ ರೈತರು ಭೂಸ್ವಾಧೀನ ಪ್ರಕ್ರಿಯೆ ವಿಳಂಬದ ಕುರಿತು ಸಚಿವರ ಗಮನ ಸೆಳೆದರು.
MUDDEBIHAL: ವಿಷಪೂರಿತ ಆಹಾರ ಸೇವನೆ:30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ
ಈ ಯೋಜನೆ ವ್ಯಾಪ್ತಿಯಲ್ಲಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ 7 ಏಳು ಮತ್ತು ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ 22 ಗ್ರಾಮಗಳ ರೈತರ ಭೂಸ್ವಾಧೀನ ಪ್ರಕ್ರಿಯೆ ನಾನಾ ಹಂತಗಳಲ್ಲಿ ಬಾಕಿ ಉಳಿದಿದೆ. ಜಂಟಿ ಸಮೀಕ್ಷೆ ಸಮಿತಿ ಸಭೆ, ಐ-ತೀರ್ಪು, ಪರಿಹಾರ ವಿತರಣೆ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಮನವಿ ಮಾಡಿದರು. ಆಗ ಕೂಡಲೇ ಸ್ಪಂದಿಸಿದ ಸಚಿವರು ಸಂಬಂಧಿಸಿದ ಅಧಿಕಾರಿಗಳಿಗೆ ಕರೆ ಮಾಡಿ ಈ ಯೋಜನೆಯಡಿ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಿ ಫಲಾನುಭವಿಗಳಿಗೆ ಸೂಕ್ತ ಪರಿಹಾರ ಒದಗಿಸುವಂತೆ ಸೂಚನೆ ನೀಡಿದರು. ಅಲ್ಲದೇ, ರೈತರಿಗೆ ಸಮಸ್ಯೆಗಳಿಗೆ ಸ್ಪಂದಿಸಲು ಸರಕಾರ ಬದ್ಧವಾಗಿದ್ದು, ಈ ಯೋಜನೆಗೆ ಸಂಬಂಧಿಸಿದಂತೆ ಅಗತ್ಯವಾಗಿರುವ ಜಮೀನು ನೇರ ಖರೀದಿ ಮತ್ತು ಭೂಸ್ವಾಧಿನಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಆಗಸ್ಟ್ 17ರಂದು ಸಭೆ ಕರೆಯಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ರೈತರಿಗೆ ಭರವಸೆ ನೀಡಿದರು.
ಟಿಸಿ ದುರಸ್ತಿಗೆ ಸೂಚನೆ:
ಮುಂಗಾರು ಕೈಗೊಟ್ಟಿದ್ದರಿಂದ ರೈತರು ಸಂಕಷÜ್ಟದಲ್ಲಿದ್ದರೆ, ನೀರಾವರಿ ಸೌಲಭ್ಯ ಇರುವ ರೈತರು ವಿದ್ಯುತ್ ಟ್ರಾನ್ಸ್‌ಫಾರ್ಮರ್ ಸಮಸ್ಯೆಯಿಂದಾಗಿ ನೀರಿದ್ದರೂ ಬೆಳೆ ರಕ್ಷಿಸಿಕೊಳ್ಳಲು ಪರದಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೂಡಲೇ ಟಿಸಿ ದುರಸ್ತಿ ಮಾಡಿಸಬೇಕು ಎಂದು ಕಾತ್ರಾಳ, ಕಾಖಂಡಕಿ ಮತ್ತು ಉಪ್ಪಲದಿನ್ನಿ ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಎಂ.ಬಿ.ಪಾಟೀಲ ಅವರು, ಹೆಸ್ಕಾಂ ಮತ್ತು ಸಂಬಂಧಿಸಿದ ಅಧಿಕಾರಿಗಳಿಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ದೂರವಾಣಿ ಮೂಲಕ ಕರೆ ಮಾಡಿ ಸೂಚನೆ ನೀಡಿದರು.
ಹೊಸ ಕೆರೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚನೆ:
ಸಚಿವರ ನಿವಾಸಕ್ಕೆ ಆಗಮಿಸಿದ್ದ ಶಿವಣಗಿ ಮತ್ತು ಮಲಕನದೇವರಹಟ್ಟಿಗ್ರಾಮದ ರೈತರು ತಮ್ಮೂರಿಗೆ ಹೊಸ ಕೆರೆ ನಿರ್ಮಿಸುವಂತೆ ಸಚಿವರಿಗೆ ಆಗ್ರಹಿಸಿದರು. ಆಗ, ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಕರೆ ಮಾಡಿದ ಸಚಿವರು, ಶಿವಣಗಿ ಮತ್ತು ಮಲಕನದೇವರಹಟ್ಟಿ ಗ್ರಾಮಗಳಲ್ಲಿ ಹೊಸದಾಗಿ ಕೆರೆ ನಿರ್ಮಿಸಲು ವಿಸ್ತೃತ ವರದಿ ಪ್ರಸ್ತಾವ ಸಲ್ಲಿಸುವಂತೆ ಸೂಚನೆ ನೀಡಿದರು.
ಸಬ್ ರಜಿಸ್ಟ್ರಾರ್‌ಗೆ ಸೂಚನೆ:
ಇದೇ ವೇಳೆ, ನಾನಾ ಗ್ರಾಮಗಳಿಂದ ಆಗಮಿಸಿದ್ದ ರೈತರು, ಸಬ್ ರಜಿಸ್ಟ್ರಾರ್ ಕಚೇರಿಯಲ್ಲಿ ಖರೀದಿ ಮತ್ತು ನೋಂದಣಿ ಮಾಡಿಸಿದರೂ ತಹಸೀಲ್ದಾರ ಕಚೇರಿಯಲ್ಲಿ ಉತಾರಿ ಸಿಗುತ್ತಿಲ್ಲ ಎಂದು ಅಳಲು ತೋಡಿಕೊಂಡರು.
ಇದಕ್ಕೂ ಮುಂಚೆ ಕೆಬಿಜೆಎನ್‌ಎಲ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಜಿಲ್ಲೆಯಲ್ಲಿ ರೈತರಿಗೆ ತೊಂದರೆಯಾಗದಂತೆ ಮತ್ತು ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಿಕೊಂಡು, ಹಳ್ಳ, ಕೆರೆ ಮತ್ತು ಕಾಲುವೆಗಳಿಗೆ ಸಮರ್ಪಕವಾಗಿ ನೀರು ಹರಿಸುವಂತೆ ಸೂಚನೆ ನೀಡಿದರು.
ಚುನಾವಣೆ ನಡೆಸಲು ಪ್ರಾದೇಶಿಕ ಆಯುಕ್ತರಿಗೆ ಸೂಚನೆ
ಇದೇ ವೇಳೆ ವಿಜಯಪುರ ಮಹಾನಗರ ಪಾಲಿಕೆ ಸದಸ್ಯರ ಸಚಿವರನ್ನು ಭೇಟಿ ಮಾಡಿ ಮೇಯರ್ ಮತ್ತು ಉಪಮೇಯರ್ ಚುನಾವಣೆ ನನೆಗುದಿಗೆ ಬಿದ್ದಿರುವ ವಿಚಾರವನ್ನು ಗಮನಕ್ಕೆ ತಂದರು. ಆಗ, ಬೆಳಗಾವಿ ಉತ್ತರ ವಲಯ ಪ್ರಾದೇಶಿಕ ಆಯುಕ್ತರು ಮತ್ತು ಮಹಾನಗರ ಪಾಲಿಕೆ ಆಯುಕ್ತರಿಗೆ ಕರೆ ಮಾಡಿದ ಸಚಿವ ಎಂ.ಬಿ.ಪಾಟೀಲ ಅವರು, ಈ ನಿಟ್ಟಿನಲ್ಲಿ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು. ಆದಷÜು್ಟಬೇಗನೆ ಮೇಯರ್ ಮತ್ತು ಉಪಮೇಯರ್ ಚುನಾವಣೆ ನಡೆಸುವಂತೆ ಹೇಳಿದರು.
ಲೋಕಸಭೆ ಚುನಾವಣೆ ನಂತ್ರ ಕಾಂಗ್ರೆಸ್ ಸರ್ಕಾರ ಪತನ: ಶಾಸಕ ಬಸನಗೌಡ ಯತ್ನಾಳ್ ಭವಿಷ್ಯ
ಹಳ್ಳಗಳಿಗೆ, ಕಾಲುವೆಗಳಿಗೆ ನೀರು ಹರಿಸಲು ಸೂಚನೆ
ಇದೇ ವೇಳೆ, ಅರಕೇರಿ ಹಳ್ಳ ಮತ್ತು ಅರ್ಜುಣಗಿ ಹಾಗೂ ಹೆಬ್ಬಾಳಟ್ಟಿಗ್ರಾಮಗಳ ಕಾಲುವೆಗಳಿಗೆ ನೀರು ಹರಿಸುವಂತೆ ಆ ಭಾಗದ ರೈತರು ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು. ರೈತರ ಅಹವಾಲಿಗೆ ಕೂಡಲೇ ಸ್ಪಂದಿಸಿದ ಸಚಿವರು, ಈ ಭಾಗದ ಹಳ್ಳ ಮತ್ತು ಕಾಲುವೆಗಳಿಗೆ ನೀರು ಇರುವ ತಾಂತ್ರಿಕ ತೊಂದರೆಗಳನ್ನು ಕೂಡಲೇ ಬಗೆಹರಿಸಿ ನೀರು ಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.