ನಾವು ಯಾವುದೇ ಶಾಸಕರನ್ನು ಕರೆಯುತ್ತಿಲ್ಲ. ಅವರೇ ನಿತ್ಯ ಕಾಂಗ್ರೆಸ್ ಸಂಪರ್ಕದಲ್ಲಿ ಇದ್ದಾರೆ. ನಮ್ಮ ಕ್ಷೇತ್ರಗಳಲ್ಲಿ ನಾವು ಮತ್ತೆ ಚುನಾವಣೆಗೆ ನಿಲ್ಲುವುದಕ್ಕೆ ಆಗಲ್ಲ, ಒಂದು ವೇಳೆ ನಾವು ಜೆಡಿಎಸ್ ನಿಂದ ಚುನಾವಣೆಗೆ ನಿಂತರೆ ಠೇವಣಿ ಕಳೆದುಕೊಳ್ಳುತ್ತೇವೆ ಎನ್ನುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ಪಕ್ಷ ಸೇರಲು ನಿರ್ಧರಿಸಿದ್ದಾರೆ: ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್

ವರದಿ : ರವಿ.ಎಸ್ ಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್, ಕೊಡಗು

ಕೊಡಗು(ನ.21):  ರಾಜ್ಯದಲ್ಲಿ ಜೆಡಿಎಸ್‌ನ 12, ಬಿಜೆಪಿಯ 3 ಶಾಸಕರು ಕಾಂಗ್ರೆಸ್‌ಗೆ ಬರಲಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಹೊಸ ಬಾಂಬ್ ಸಿಡಿಸಿದ್ದಾರೆ. ಇಂದು(ಮಂಗಳವಾರ) ಮಡಿಕೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ನಮ್ಮಲ್ಲಿ ಇರುವ ಪಟ್ಟಿ ಪ್ರಕಾರ 3 ನೇ 2 ರಷ್ಟು ಜೆಡಿಎಸ್ ಶಾಸಕರು ಕಾಂಗ್ರೆಸ್‌ಗೆ ಬರುತ್ತಾರೆ. ಹಾಗೆಯೇ ಬಿಜೆಪಿಯ 3 ಶಾಸಕರು ಕಾಂಗ್ರೆಸ್‌ಗೆ ಬರುತ್ತಾರೆ. ನಾವು ಅವರ ಡೇಟಿಗೋಸ್ಕರ ಕಾಯುತ್ತಿದ್ದೇವೆ. 3 ನೇ 2 ರಷ್ಟು ಶಾಸಕರು ಕಾಂಗ್ರೆಸ್‌ಗೆ ಬಂದರೆ ಅವರು ಮತ್ತೆ ಚುನಾವಣೆಗೆ ಹೋಗಬೇಕಾಗಿಲ್ಲ. ಅಷ್ಟಕ್ಕೂ ಜೆಡಿಎಸ್ ಜನೆವರಿ ಹೊತ್ತಿಗೆ ಬಿಜೆಪಿಯೊಂದಿಗೆ ವಿಲೀನವಾಗಲಿದೆ ಎಂದಿದ್ದಾರೆ. 

ಇದನ್ನೆಲ್ಲ ನಿಮಗೆ ತಡೆದುಕೊಳ್ಳುವುದಕ್ಕೆ ಆಗುತ್ತಿಲ್ಲ. ಹೀಗಾಗಿ ಪ್ರತಿದಿನ ಬೆಳಿಗ್ಗೆ ಎದ್ದು ಪ್ರೆಸ್ ಮೀಟ್ ಮಾಡಿ ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ನಿಂದಿಸುವ ಕೆಲಸ ಮಾಡುತ್ತಿದ್ದೀರಾ?. ಅದಕ್ಕೂ ಕೂಡ ಬಿಜೆಪಿಯಿಂದ ಸುಫಾರಿ ಪಡೆದಿದ್ದೀರಾ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಅಭಿವೃದ್ಧಿ ಕೆಲಸದಲ್ಲೂ ರಾಜಕೀಯ ಮಾಡುವುದು ಸರಿಯೇ: ಶಾಸಕ ಮಂತರ್ ಗೌಡ ವಿರುದ್ಧ ಅಪ್ಪಚ್ಚು ರಂಜನ್ ಅಸಮಾಧಾನ

ನಾವು ಯಾವುದೇ ಶಾಸಕರನ್ನು ಕರೆಯುತ್ತಿಲ್ಲ. ಅವರೇ ನಿತ್ಯ ಕಾಂಗ್ರೆಸ್ ಸಂಪರ್ಕದಲ್ಲಿ ಇದ್ದಾರೆ. ನಮ್ಮ ಕ್ಷೇತ್ರಗಳಲ್ಲಿ ನಾವು ಮತ್ತೆ ಚುನಾವಣೆಗೆ ನಿಲ್ಲುವುದಕ್ಕೆ ಆಗಲ್ಲ, ಒಂದು ವೇಳೆ ನಾವು ಜೆಡಿಎಸ್ ನಿಂದ ಚುನಾವಣೆಗೆ ನಿಂತರೆ ಠೇವಣಿ ಕಳೆದುಕೊಳ್ಳುತ್ತೇವೆ ಎನ್ನುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ಪಕ್ಷ ಸೇರಲು ನಿರ್ಧರಿಸಿದ್ದಾರೆ. ನಿಮ್ಮ ಎಂಎಲ್ಎ ಗಳನ್ನು ನೀವು ಭದ್ರವಾಗಿ ಹಿಡಿದುಕೊಳ್ಳಿ ನೋಡೋಣ. ಅದಕ್ಕೂ ನಮಗೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ. 

ಇನ್ನು ವಿದ್ಯುತ್ ಕಳ್ಳತನ ಮಾಡಿರುವುದಕ್ಕೆ ಜನರು ವಿದ್ಯುತ್ ಕಳ್ಳ ಎಂದು ಹೇಳುತ್ತಿದ್ದಾರೆ ವಿನಃ ನಾವು ಹೇಳುತ್ತಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕುಟುಕಿದ್ದಾರೆ. ಎಚ್.ಡಿ. ಕುಮಾರಸ್ವಾಮಿ ಅವರು ವಿದ್ಯುತ್ ಕಳ್ಳತನ ಮಾಡಿರುವುದಕ್ಕೆ ಸಾಕ್ಷಿ ಇದೆ. ಬೆಸ್ಕಾಂ ಅಧಿಕಾರಿಗಳು 68 ಸಾವಿರ ದಂಡ ಹಾಕಿರುವುದಕ್ಕೆ ಬಿಲ್ಲು ಇದೆ. ಆದರೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅದೇನೋ ಸಿನಿಮಾಗಳನ್ನು ತೋರಿಸಿ ದುಡ್ಡು ಮಾಡುತ್ತಿದ್ದರೂ ಎನ್ನುವುದಕ್ಕೆ ಸಾಕ್ಷಿ ಇದೆಯಾ ಕುಮಾರಸ್ವಾಮಿ ಅವರೇ ಎಂದು ಲಕ್ಷ್ಮಣ್ ಪ್ರಶ್ನಿಸಿದ್ದಾರೆ. 

ಕೊಡಗು: ಆಸ್ತಿಗಾಗಿ ತಹಶೀಲ್ದಾರ್ ಸಹಿ, ಸೀಲ್‌ಗಳನ್ನೇ ನಕಲು ಮಾಡಿದ ಭೂಪ..!

ಡಿ.ಕೆ. ಶಿವಕುಮಾರ್ ಅವರು 20 ವರ್ಷಗಳ ಹಿಂದೆ ಟೆಂಟ್ ನಡೆಸುತ್ತಿದ್ದರು. ಈಗಲೂ ಅವರ ಬಳಿ ಮೂರು ಟೆಂಟ್ ಇವೆ. ಆದರೆ ಬ್ಲೂಫಿಲಂ ತೋರಿಸುತ್ತಿದ್ದರು ಎನ್ನುವುದಕ್ಕೆ ಆಧಾರ ಇದೆಯಾ. ನೀವು ಎರಡು ಬಾರಿ ಸಿಎಂ ಆಗಿದ್ದವರು. ನಿಮ್ಮ ತಂದೆ ಪ್ರಧಾನ ಮಂತ್ರಿಯಾಗಿದ್ದವರು. ಆ ಮಟ್ಟಕ್ಕೆ ಕುಮಾರಸ್ವಾಮಿ ಏಕೆ ಹೋಗುತ್ತಿದ್ದಾರೆ. ಕಾಂಗ್ರೆಸ್‌ನಿಂದ ಕುಮಾರಸ್ವಾಮಿ ಅವರು ಸಿಎಂ ಆಗಿದ್ದವರು, ಅವರ ತಂದೆ ಕಾಂಗ್ರೆಸ್ ಸಹಾಯದಿಂದ ಪ್ರಧಾನ ಮಂತ್ರಿಯಾಗಿದ್ದವರು. ಅದನ್ನೆಲ್ಲಾ ಮರೆತು ಬಿಟ್ಟಿದ್ದೀರಾ ಕುಮಾರಸ್ವಾಮಿ ಅವರೇ ಎಂದು ಪ್ರಶ್ನಿಸಿದ್ದಾರೆ. 

ಡಿಕೆಶಿ ಅವರು ತಪ್ಪು ಮಾಡಿದ್ದರೆ ಅದನ್ನು ಆಧಾರ ಸಹಿತ ಹೇಳಲಿ. ಅದು ಬಿಟ್ಟು ಕೇವಲ ಹಿಟ್ ಅಂಡ್ ರನ್ ಮಾಡುವ ಕೆಲಸದಲ್ಲಿ ಕುಮಾರಸ್ವಾಮಿ ಅವರು ಪ್ರಪಂಚದಲ್ಲಿ ಎಲ್ಲರಿಗಿಂತಲೂ ಮೊದಲಿದ್ದಾರೆ. ಇವರ ಎಂಎಲ್ಎಗಳನ್ನು ಹಿಡಿದಿಟ್ಟುಕೊಳ್ಳಲು ಅವರಿಗೆ ಆಗುತ್ತಿಲ್ಲ. ಹೀಗಾಗಿ ಜನರನ್ನು ದಿಕ್ಕು ತಪ್ಪಿಸಲು ಏನೆಲ್ಲಾ ಮಾತನಾಡುತ್ತಿದ್ದಾರೆ. ಬಿಜೆಪಿಯವರಿಂದ ಸುಫಾರಿ ತೆಗೆದುಕೊಂಡು ದಿನಬೆಳಗಾದರೆ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಮಾತನಾಡುತ್ತಾರೆ. ರಾಜ್ಯದಲ್ಲಿ ಸುಳ್ಳು ಗ್ಯಾರಂಟಿಗಳನ್ನು ಕೊಡಲಾಗಿದೆ ಎಂದು ಕುಮಾರಸ್ವಾಮಿ ಅವರು ಐದು ರಾಜ್ಯಗಳಿಗೆ ಪ್ರೆಸ್ ನೋಟ್ ಬಿಡುಗಡೆ ಮಾಡುತ್ತಾರೆ. ಕುಮಾರಸ್ವಾಮಿ ಅವರಿಗೆ ಇದಕ್ಕಿಂತ ನಾಚಿಕೆ ಕೆಲಸ ಬೇಕಾ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.