ಮೈಸೂರು (ನ.05): ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಲಿದೆ. ಉಪ ಚುನಾವಣೆ ಫಲಿತಾಂಶದ ಬಳಿಕ ಬಿ.ಎಸ್‌.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಮುಂದುವರೆಯುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.

"

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಉಪ ಚುನಾವಣೆ ಫಲಿತಾಂಶದ ಬಳಿಕ ರಾಜ್ಯದಲ್ಲಿ ಸಾಕಷ್ಟು ಬದಲಾವಣೆಗಳು ಆಗಲಿವೆ. ನನಗೆ ದೆಹಲಿಯಿಂದ ಬಂದಿರುವ ಮಾಹಿತಿ ಆಧಾರದ ಮೇಲೆ ಹೇಳುವುದಾದರೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಲಿದೆ. 

'40 ಸಾವಿರ ಮತ ಅಂತರದಲ್ಲಿ ಬಿಜೆಪಿ ಗೆಲ್ಲುತ್ತೆ : ಅತ್ತೆ-ಸೊಸೆ ಬೇಗ ಒಂದಾಗಬೇಕು' .

ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯುವುದಿಲ್ಲ. ಇದಕ್ಕೆ ನಾನು ಅವರ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದೂ ಕಾರಣ ಇರಬಹುದು. ಆದರೆ ಹಲವು ದಿನಗಳಿಂದ ಮುಖ್ಯಮಂತ್ರಿ ಬದಲಾಯಿಸುವ ಚಿಂತನೆಯಲ್ಲಿ ಬಿಜೆಪಿ ಇದೆ, ಈ ವಿಚಾರದಲ್ಲಿ ನಾನು ತುಂಬಾ ವಿಶ್ವಾಸದಿಂದಿದ್ದೇನೆ ಎಂದು ತಿಳಿಸಿದರು. ಇದೇ ವಿಚಾರವನ್ನು ಸಿದ್ದ​ರಾ​ಮಯ್ಯ ಟ್ವೀಟ್‌ ಸಹ ಮಾಡಿ​ದ್ದಾರೆ.