ಶೀಘ್ರದಲ್ಲೆ ಸುಮಲತಾ ಬಿಜೆಪಿ ಸೇರ್ಪಡೆ: ಸಿ.ಪಿ.ಯೋಗೇಶ್ವರ್
ಮುಂದಿನ ವಿಧಾನಸಭಾ ಚುನಾವಣೆ ವೇಳೆಗೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಹೇಳಿದರು.
ಮದ್ದೂರು (ಅ.29): ಮುಂದಿನ ವಿಧಾನಸಭಾ ಚುನಾವಣೆ ವೇಳೆಗೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಹೇಳಿದರು. ಪಟ್ಟಣದ ಹೊಳೇ ಆಂಜನೇಯಸ್ವಾಮಿ ದೇಗುಲದಲ್ಲಿ ಕೇಂದ್ರ ಸಚಿವ ಕಿಶನ್ ಪಾಲ್ ಗುರ್ಜರ್ ಅವರೊಂದಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಸುಮಲತಾ ಬಿಜೆಪಿ ಸೇರ್ಪಡೆ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಒಂದು ಸುತ್ತಿನ ಮಾತುಕತೆ ನಡೆದಿದೆ. ಮುಂದಿನ ದಿನಗಳಲ್ಲಿ ಮತ್ತೊಂದು ಸುತ್ತಿನ ಮಾತುಕತೆ ನಡೆಸಿದ ಬಳಿಕ ಅವರ ಪಕ್ಷ ಸೇರ್ಪಡೆ ದಿನಾಂಕ ನಿಗದಿಗೊಳಿಸಲಾಗುವುದು ಎಂದರು.
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬಂದು ತಾನೇ ಮುಖ್ಯಮಂತ್ರಿಯಾಗುತ್ತೇನೆ ಭೀಗುತ್ತಿದ್ದಾರೆ. ಅವರು ಕಳೆದ ಎರಡು ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಅನುಭವಿಸಿದ್ದರು. ಆದರೆ, ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲಿಲ್ಲ. ಚುನಾವಣೆಯಲ್ಲಿ ಅವರನ್ನು ಜನತೆ ತಿರಸ್ಕರಿಸುವುದು ಖಚಿತ. ಚುನಾವಣೆ ನಂತರ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಎಚ್.ಡಿ.ಕುಮಾರಸ್ವಾಮಿಗೆ ಸೋಲಿನ ಭಯ ಕಾಡ್ತಿದೆ: ಸಿ.ಪಿ.ಯೋಗೇಶ್ವರ್
ಎಚ್.ಡಿ.ಕುಮಾರಸ್ವಾಮಿ ಚನ್ನಪಟ್ಟಣದಿಂದಲೇ ಸ್ಪರ್ಧೆ ಮಾಡ್ಲೇ ಬೇಕಲ್ವ. ಅಲ್ಲೇ ಮಾಡ್ತೀನಿ ಅಂತ ಹೇಳಿದ್ದಾರೆ. ನಾನು ಕೂಡ ಅಲ್ಲಿಂದಲೇ ಸ್ಪರ್ದಿಸುತ್ತೇನೆ ಎಂದು ಸ್ಪಷ್ಟಪಡಿಸಿದರು. ನಮ್ಮ ಸರ್ಕಾರದ ಬದ್ಧತೆ ತೋರಿಸುತ್ತೆ. ಕನ್ನಡ ನಾಡಿನಲ್ಲಿ ಕನ್ನಡಕ್ಕೆ ಮೊದಲ ಸ್ಥಾನ. ಬಿಜೆಪಿ ಕನ್ನಡವ ಉಳಿಸೋಕೆ ಕ್ರಮಗಳನ್ನು ಕೈಗೊಂಡಿದೆ. ಅದೇ ರೀತಿ ಇಂದು ಕೋಟಿ ನಮನ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಸ್ವತಃ ಕೇಂದ್ರ ಸಚಿವರು ಗಾಯನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದರು.
ಕನ್ನಡ ಶಾಲೆಗೆ ಸರಿಯಾದ ಅನುದಾನ ಸಿಗುತ್ತಿಲ್ಲ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಯೋಗೇಶ್ವರ್, ಕಳೆದ ಮೂರು ವರ್ಷಗಳ ಹಿಂದೆ ಆ ರೀತಿಯ ಪರಿಸ್ಥಿತಿ ಇತ್ತು. ಆದರೆ, ಈಗ ಎಲ್ಲ ಸರಿ ಹೋಗಿದೆ. ಕಾಲ ಕಾಲಕ್ಕೆ ತಕ್ಕಂತೆ ಅನುದಾನವನ್ನು ಸರ್ಕಾರ ನೀಡುತ್ತಿದೆ. ಎಸ್ಸಿ, ಎಸ್ಟಿ ಮೀಸಲಾತಿ ವಿಚಾರದ ಕ್ರೆಡಿಟ್ ತೆಗೆದು ಕೊಳ್ಳೊದು ದೊಡ್ಡದಲ್ಲ. ಕಂಪ್ಲೀಟ್ ಮಾಡೋದು ಮುಖ್ಯ. ಅದೇ ರೀತಿ ಒಕ್ಕಲಿಗರಿಗೆ ಮೀಸಲಾತಿ ಹೆಚ್ಚಳದ ಹೋರಾಟ ಆರಂಭವಾಗಿದೆ. ಅದಕ್ಕೆ ನನ್ನ ಬೆಂಬಲವಿದೆ ಎಂದರು.
ಅರ್ಕೇಶ್ವರಸ್ವಾಮಿ ದೇಗುಲ ನಿರ್ಮಾಣಕ್ಕೆ ಭೂಮಿಪೂಜೆ: ನಗರ ಪ್ರದೇಶದಲ್ಲಿ ದಕ್ಷಿಣಾಭಿಮುಖವಾಗಿ ಹರಿಯುವ ಅರ್ಕಾವತಿ ನದಿ ದಂಡೆಯಲ್ಲಿ ಪಶ್ಚಿಮಾಭಿಮುಖವಾಗಿ ನೆಲೆಸಿರುವ ಪುರಾತನ ಪ್ರಸಿದ್ದ ಶ್ರೀ ಅರ್ಕೇಶ್ವರಸ್ವಾಮಿ ನೂತನ ದೇವಾಲಯ ನಿರ್ಮಾಣದ ಭೂಮಿ ಪೂಜೆ ಶುಕ್ರವಾರ ನೆರವೇರಿತು.
ಗ್ರಾಮೀಣ ಭಾಗದ ಜನರ ಕಷ್ಟ ಎಚ್‌ಡಿಕೆಗೇನು ಗೊತ್ತು?: ಸಿ.ಪಿ.ಯೋಗೇಶ್ವರ್
ಜಿಲ್ಲಾಡಳಿತ, ಧಾರ್ಮಿಕ ದತ್ತಿ ಇಲಾಖೆ ಹಾಗೂ ಶ್ರೀ ಅರ್ಕೇಶ್ವರಸ್ವಾಮಿ ಸೇವಾ ಸಂಘದ ವತಿಯಿಂದ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್, ಶಾಸಕಿ ಅನಿತಾಕುಮಾರಸ್ವಾಮಿ, ಕೆಎಸ್‌ಐಸಿ ಅಧ್ಯಕ್ಷ ಗೌತಮ್‌ಗೌಡ, ಅರ್ಕೇಶ್ವರ ದೇವಾಲಯ ಟ್ರಸ್ವ್ ಅಧ್ಯಕ್ಷ ಸಿಎನ್‌ಆರ್ ವೆಂಕಟೇಶ್, ಪದಾಧಿಕಾರಿಗಳಾದ ಎಸ್.ಟಿ.ನಂದೀಶ್, ನಾಗೇಶ್, ಚಂದ್ರಶೇಖರ್, ತಹಸೀಲ್ದಾರ್ ವಿಜಯಕುಮಾರ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಜಯಣ್ಣ, ಮಾಜಿ ಅಧ್ಯಕ್ಷ ನಾಗರಾಜು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸುರೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರುದ್ರದೇವರು, ನಗರ ಬಿಜೆಪಿ ಘಟಕದ ಅಧ್ಯಕ್ಷ ಶಿವಾನಂದ, ನಗರಸಭೆ ಮಾಜಿ ಸದಸ್ಯ ನಾಗೇಶ್, ಪ್ರೊ.ನಾಗರಾಜು, ಶೇಷಗಿರಿರಾವ್ ಮತ್ತಿತರರು ಹಾಜರಿದ್ದರು.