ಕಾವೇರಿ ವಿಚಾರದಲ್ಲಿ ಒಗ್ಗಟ್ಟಿಂದ ಮಾತನಾಡಿ: ಸಚಿವ ದಿನೇಶ್ ಗುಂಡೂರಾವ್‌

ಕಾವೇರಿ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಮಾತನಾಡಿ ಹೋರಾಟ ಮಾಡಬೇಕಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. 

Speak unitedly on Cauvery Water issue Says Minister Dinesh Gundu rao gvd

ಮಂಗಳೂರು (ಸೆ.21): ಕಾವೇರಿ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಮಾತನಾಡಿ ಹೋರಾಟ ಮಾಡಬೇಕಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಮಂಗಳೂರಿನಲ್ಲಿ ಬುಧವಾರ ಸುದ್ದಿಗಾರರಲ್ಲಿ ಮಾತನಾಡಿದ ಅವರು, ವಸ್ತುಸ್ಥಿತಿ ಅಧ್ಯಯನ ಮಾಡಿ ರಿಯಾಲಿಟಿ ಮೇಲೆ ಹೋಗಬೇಕಿದೆ. ಮಳೆ ಕೂಡ ಕಡಿಮೆಯಾಗಿ ನಮ್ಮಲ್ಲೇ ನೀರು ಇಲ್ಲ. ಈ ಬಗ್ಗೆ ರಾಜಕೀಯವಾಗಿಯೂ ಎಲ್ಲರೂ ಒಗ್ಗಟ್ಟಾಗಿ ಚರ್ಚಿಸೋಣ. ಇಲ್ಲಿನ ಸಂಸದರು ದೆಹಲಿಯಲ್ಲಿ ಮಾತನಾಡಬೇಕು. ಮುಖ್ಯಮಂತ್ರಿಗಳು ಪ್ರಧಾನಿ ಮೋದಿಯವರ ಸಮಯ ಕೇಳಿದ್ದಾರೆ. ಕಾವೇರಿ ವಿಚಾರದಲ್ಲಿ ಕೋರ್ಟ್‌ಗಳು ಆದೇಶ ಕೊಡುತ್ತವೆ. ಆದರೆ ಕೆಲವು ವಿಚಾರಗಳಲ್ಲಿ ಸರ್ಕಾರ ಜನರ ಪರವಾಗಿ ನಿಲ್ಲಬೇಕಿದೆ ಎಂದರು.

ರಾಜ್ಯದಲ್ಲಿ ಮೂವರು ಉಪ ಮುಖ್ಯಮಂತ್ರಿಗಳನ್ನು ಮಾಡಿದರೆ ತಪ್ಪೇನಿಲ್ಲ. ಆದರೆ ಇದನ್ನು ಕಾಂಗ್ರೆಸ್‌ ಹೈಕಮಾಂಡ್‌ ತೀರ್ಮಾನ ಮಾಡುತ್ತದೆ. ಇದನ್ನು ಬಹಿರಂಗವಾಗಿ ಚರ್ಚಿಸುವ ಅಗತ್ಯ ಇಲ್ಲ. ಬಿಜೆಪಿಯ ಮಾಜಿ ಶಾಸಕ ಸಿ.ಟಿ.ರವಿ ಅವರು ಸೋತು ಸುಣ್ಣವಾಗಿದ್ದಾರೆ. ಅವರು ಸುಮ್ಮನಿದ್ದರೆ ಒಳ್ಳೆಯದು. ಅವರನ್ನು ವಿಧಾನಸಭೆಯಿಂದಲೂ ಜನ ಮನೆಗೆ ಕಳಿಸಿದ್ದಾರೆ, ದೆಹಲಿಯಿಂದಲೂ ವಾಪಾಸ್ ಕಳುಹಿಸಲಾಗಿದೆ. ಅವರು ಅನಾವಶ್ಯಕವಾಗಿ ಬಾಯಿ ತೆಗೆಯೋದು ಸರಿಯಲ್ಲ ಎಂದರು.

ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನನ್ನೇ ಆಯ್ಕೆ ಮಾಡಲು ಆಗಿಲ್ಲ. ಅವರಿಗೆ ಸುದ್ದಿಯಲ್ಲಿ ಇರಬೇಕು ಎನ್ನುವುದು ಹವ್ಯಾಸ ಆಗಿದೆ. ಚುನಾವಣಾ ಪೂರ್ವದಲ್ಲೂ ನಮ್ಮಲ್ಲಿ ಒಗ್ಗಟ್ಟಿಲ್ಲ ಎಂದು ಹೇಳಿದ್ದರು. ಆದರೆ ನಾವು ಒಗ್ಗಟ್ಟಾಗಿ ಕೆಲಸ ಮಾಡಿ ಕೊನೆಗೆ ಏನಾಯ್ತು ಎಂದು ಗೊತ್ತೇ ಇದೆ. ಈಗಲೂ ಒಗ್ಗಟ್ಟಲ್ಲಿ ಇದ್ದೇವೆ, ರಾಜಕೀಯ ತೀರ್ಮಾನ ಏನೇ ವರಿಷ್ಠರು ಮಾಡ್ತಾರೆ ಎಂದರು.

ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ: ಸಚಿವ ದಿನೇಶ್‌ ಗುಂಡೂರಾವ್‌ ಘೋಷಣೆ

ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ, ಸರಿಯಾಗಿ ಇದ್ದೇವೆ. ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧ ಬಗ್ಗೆ ಚಿಂತನೆ ವಿಚಾರ ಸರಿಯಾಗಿಯೇ ಇದೆ. ಹುಕ್ಕಾ ಬಾರ್‌ಗಳಿಂದ ತೊಂದರೆ ಆಗುತ್ತಿದೆ. ಸಾರ್ವಜನಿಕರಿಗೆ ಅನಾರೋಗ್ಯ ಅಗುತ್ತಿದೆ. ನಮ್ಮ ಕಾಯಿದೆಗೆ ತಿದ್ದುಪಡಿ ಮಾಡಿ ಬದಲಾವಣೆ ತರಲು ಬಯಸಿದ್ದೇವೆ. ಹುಕ್ಕಾ ಬಾರ್‌ಗಳು ಬೇರೆ ಬೇರೆ ದುಷ್ಪರಿಣಾಮಗಳಿಗೆ ಕಾರಣವಾಗಿದೆ. ಅದರಲ್ಲಿ ಬೇರೆ ಮಿಶ್ರಣ ಮಾಡಿ ಹಾಕುವಂಥದ್ದು ಇದೆ. ಇಂಥದ್ದನ್ನು ನಿಯಂತ್ರಣ ಮಾಡುವುದು ಬಹಳ ಕಷ್ಟ. ಹಾಗಾಗಿ ಸಾರ್ವಜನಿಕ ಸ್ಥಳಗಳಲ್ಲಿ ಅದು ಇರಬಾರದು. ಬಾರ್, ರೆಸ್ಟೋರೆಂಟ್‌ಗಳಲ್ಲಿ ಅದು ಇರಬಾರದು ಎನ್ನುವುದು ವಿಚಾರ ಎಂದರು.

Latest Videos
Follow Us:
Download App:
  • android
  • ios