ಕಾಂಗ್ರೆಸ್ ಸರ್ಕಾರದಿಂದ ಕೃಷಿ ಕ್ಷೇತ್ರದ ಅಭಿವೃದ್ಧಿಗಾಗಿ ವಿಶೇಷ ಮನ್ನಣೆ: ಸಚಿವ ಚಲುವರಾಯಸ್ವಾಮಿ
ರಾಜ್ಯದ ಕೃಷಿಕರನ್ನು ಸಧೃಡಗೊಳಿಸುವ ಜೊತೆಗೆ ಕೃಷಿ ಕ್ಷೇತ್ರಕ್ಕೆ ವಿಶೇಷ ಮನ್ನಣೆ ಒದಗಿಸುವುದು ಸರ್ಕಾರದ ಆಶಯ. ಅದಕ್ಕಾಗಿ ಈ ಬಾರಿ ಸಮಗ್ರ ಬೇಸಾಯ ಸೇರಿದಂತೆ ಹತ್ತಾರು ಹೊಸ ಯೋಜನೆ ರೂಪಿಸಿ ಜಾರಿಗೆ ತರಲಾಗುತ್ತದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ತಿಳಿಸಿದರು.
ಹಾಸನ (ಮಾ.03): ರಾಜ್ಯದ ಕೃಷಿಕರನ್ನು ಸಧೃಡಗೊಳಿಸುವ ಜೊತೆಗೆ ಕೃಷಿ ಕ್ಷೇತ್ರಕ್ಕೆ ವಿಶೇಷ ಮನ್ನಣೆ ಒದಗಿಸುವುದು ಸರ್ಕಾರದ ಆಶಯ. ಅದಕ್ಕಾಗಿ ಈ ಬಾರಿ ಸಮಗ್ರ ಬೇಸಾಯ ಸೇರಿದಂತೆ ಹತ್ತಾರು ಹೊಸ ಯೋಜನೆ ರೂಪಿಸಿ ಜಾರಿಗೆ ತರಲಾಗುತ್ತದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ತಿಳಿಸಿದರು. ಹಾಸನ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಹಲವು ಸಚಿವ ಸಹದ್ಯೋಗಿಗಳೊಂದಿಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಕೃಷಿ ಸಚಿವರು, ಸಂಶೋಧನೆಗಳ ಜೊತೆಗೆ, ತಂತ್ರಜ್ಞಾನ ಯಾಂತ್ರೀಕರಣದ ಲಾಭವನ್ನು ರೈತರಿಗೆ ತಲುಪಿಸಬೇಕು. ಆ ಮೂಲಕ ಕೃಷಿಕರನ್ನು ಸಭಲರನ್ನಾಗಿಸಬೇಕು ಎಂಬುದು ನಮ್ಮ ಚಿಂತನೆ ಎಂದು ಚಲುವರಾಯಸ್ವಾಮಿ ಹೇಳಿದರು.
ಬರ ನಿರ್ವಹಣೆ ಕೇಂದ್ರದ ತಾರತಮ್ಯ ನೀತಿ: ರಾಜ್ಯದಲ್ಲಿ ತೀವ್ರ ಬರ ಇದೆ ರಾಜ್ಯದಿಂದ ೨೬ ಬಿ.ಜೆ.ಪಿ ಸಂಸದರಿದ್ದಾರೆ ಆದರೂ ಕೇಂದ್ರ ಸರ್ಕಾರ ಯಾವುದೇ ಪರಿಹಾರ ಒದಗಿಸದೆ ನಿರ್ಲಕ್ಷ್ಯ ವಹಿಸಿದೆ. ಕಳೆದ ೭೭ ವರ್ಷಗಳಲ್ಲಿ ಕೇಂದ್ರದಲ್ಲಿ ಅಧಿಕಾರದಲ್ಲಿ ಇರುವ ಯಾವುದೇ ಸರ್ಕಾರ ಹೀಗೆ ತಾರತಮ್ಯ ನೀತಿ ಅನುಸಿರಲಿಲ್ಲ ಎಂಬುದನ್ಮು ಜನರು ಮನಗಾಣಬೇಕು ಎಂದರು. ರಾಜ್ಯದ ಸರ್ಕಾರ ೫ ಗ್ಯಾರಂಟಿ ಯೋಜನೆಗಳ ಮೂಲಕ ಎಲ್ಲಾ ಜನ ಸಾಮಾನ್ಯರ ಮನೆಗಳಿಗೆ ಮಾಸಿಕ ಕನಿಷ್ಠ ೫೦೦೦ ರೂ ಆರ್ಥಿಕ ಅನುಕೂಲ ತಲುಪಿಸುವ ಕೆಲಸ ಮಾಡುತ್ತಿದೆ .ಇದಕ್ಕಾಗಿ ೫೬೦೦೦ ಕೋಟಿ ರೂ ತೆಗೆದಿಡಲಾಗಿದೆ. ನಮ್ಮದು ನುಡಿದಂತೆ ನಡೆಯುವ ಸರ್ಕಾರ ಕೇವಲ ೮ ತಿಂಗಳಲ್ಲಿ ಎಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮಾಡಲಾಗಿದೆ.
ಜಾತಿ ಜಾತಿಗಳ ನಡುವೆ ಎತ್ತಿ ಕಟ್ಟಲು ಜಾತಿಗಣತಿ ವರದಿ ಸಿದ್ಧಪಡಿಸಲಾಗಿದೆ: ಸಿ.ಟಿ.ರವಿ ಆರೋಪ
ಮಂದೆಯೂ ನಮ್ಮ ಸರ್ಕಾರ ಜನಸಾಮಾನ್ಯರ ಶ್ರೇಯೋಭಿವೃದ್ದಿಗೆ ಶ್ರಮಿಸಲಿದೆ ಎಂದು ಚಲುವರಾಯಸ್ವಾಮಿ ಹೇಳಿದರು. ರಾಜ್ಯ ಸರ್ಕಾರ ಕೃಷಿಗೆ ಹೆಚ್ಚಿನ ಆದ್ಯತೆ ನೀಡಿದೆ .ಈ ವರ್ಷ ಕರ್ನಾಟಕ ರೈತ ಸಮೃದ್ಧಿ ಯೋಜನೆ ಜಾರಿ ತರಲಾಗುವುದು. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಕೃಷಿ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಲು ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದೆ ಎಂದು ಅವರು ತಿಳಿಸಿದರು. ಕೃಷಿ ಭಾಗ್ಯ ಯೋಜನೆಗೆ 200 ಕೋಟಿ ರೂಪಾಯಿ ಮೀಸಲು ಇಡಲಾಗಿದೆ. ಪ್ರತ್ಯೇಕ ಆಹಾರ ಸಂಸ್ಕರಣೆ ಆಯುಕ್ತಾಲಯ ರಚನೆ ಘೋಷಿಸಲಾಗಿದೆ ಆಹಾರ ಪಾರ್ಕ್ ಗಳ ಸ್ಥಾಪನೆ ಮಾಡಲಾಗುವುದು ಎಂದು ಕೃಷಿ ಸಚಿವರು ತಿಳಿಸಿದರು.
ಗ್ಯಾರಂಟಿ ಫಲಾನುಭವಿಗಳ ಗಮನ ಬೇರೆಡೆ ಸೆಳೆಯಲು ಬಿಜೆಪಿ ಡ್ರಾಮಾ: ಸಿದ್ದರಾಮಯ್ಯ
ಸಮುದಾಯ ಬೀಜ ಬ್ಯಾಂಕ್ ಸ್ಥಾಪನೆ ಮಾಡಲಾಗುವುದು. ನಮ್ಮ ಮಿಲೆಟ್ -ಸಿರಿಧಾನ್ಯ ಪ್ರೋತ್ಸಾಹ ಯೋಜನೆ ಜಾರಿಗೆ ತರಲಾಗುವುದು. ೫ ಸಾವಿರ ಸಣ್ಣ ಸರೋವರಗಳ ನಿರ್ಮಾಣ ಮಾಡಲಾಗುತ್ತದೆ. ಆಹಾರ ಸಂಸ್ಕರಣೆ ಮತ್ತು ರಫ್ತು ಉತ್ತೇಜನಕ್ಕೆ ಪ್ರತ್ಯೇಕ ಆಯುಕ್ತಾಲಯ ಸ್ಥಾಪನೆ ಮಾಡಲಾಗುತ್ತದೆ ಎಂದು ಚಲುವರಾಯಸ್ವಾಮಿ ಮಾಹಿತಿ ನೀಡಿದರು. ಕೆಪೆಕ್ ೮೦ ಕೋಟಿ ಅನುದಾನ ಮೀಸಲಿರಿಸಲಾಗಿದೆ. ಕೃಷಿ ಯಾಂತ್ರೀಕರಣಕ್ಕೆ ಒತ್ತು ನೀಡಲಾಗುತ್ತಿದೆ ಕೃಷಿ ವಿವಿ ಸಂಶೋಧನೆಗಳು ರೈತರಿಗೆ ನೇರವಾಗಿ ತಲುಪಿಸಲು ಆದ್ಯತೆ ನೀಡಲಾಗುತ್ತಿದೆ. ದತ್ತಾಂಶ ಅಭಿವೃದ್ಧಿ, ಸ್ಟಾರ್ಟ್ ಅಫ್ ಗಳಿಗೆ ಉತ್ತೇಜನ ನೀಡಲಾಗುವುದು ಎಂದು ಕೃಷಿ ಸಚಿವರ ಎನ್. ಚಲುವರಾಯಸ್ವಾಮಿ ತಿಳಿಸಿದರು.