ಬಿಬಿಎಂಪಿ ಮತ್ತು ಬಿಡಿಎಯಿಂದ ಕೈಗೊಳ್ಳಲಾದ ಕಾಮಗಾರಿಯ ಬಗ್ಗೆ ಸಮಗ್ರ ತನಿಖೆ ನಡೆಸುವುದಕ್ಕೆ ವಿಶೇಷ ತನಿಖಾ ತಂಡ ರಚನೆ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. 

ಬೆಂಗಳೂರು (ಜೂ.22): ಬಿಬಿಎಂಪಿ ಮತ್ತು ಬಿಡಿಎಯಿಂದ ಕೈಗೊಳ್ಳಲಾದ ಕಾಮಗಾರಿಯ ಬಗ್ಗೆ ಸಮಗ್ರ ತನಿಖೆ ನಡೆಸುವುದಕ್ಕೆ ವಿಶೇಷ ತನಿಖಾ ತಂಡ ರಚನೆ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ನಗರದ ಎಲ್ಲಾ ಕಾಮಗಾರಿ ತಡೆ ಹಿಡಿಯಲಾಗಿದೆ. ಹೀಗಾದರೆ, ಬೆಂಗಳೂರಿನ ಅಭಿವೃದ್ಧಿ ಹೇಗೆ ಸಾಧ್ಯ ಎಂದು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗೆ ಪ್ರಕ್ರಿಯೆ ನೀಡಿದ ಡಿ.ಕೆ.ಶಿವಕುಮಾರ್‌, ಬಿಜೆಪಿಯವರು ಟೀಕೆ ಮಾಡುತ್ತಿದ್ದರೆ, ಇನ್ನಷ್ಟುಗಟ್ಟಿಯಾಗಿ ಟೀಕಿಸಲಿ. ಆಗ ಅವರ ಬಂಡವಾಳ ಬಿಚ್ಚಿಡುತ್ತೇನೆ ಎಂದು ಹೇಳಿದರು.

ಬಸವರಾಜ ಬೊಮ್ಮಾಯಿ ಅವರಿಂದಲೂ ಸಲಹೆ ಸೂಚನೆ ಪಡೆಯುವುದಕ್ಕೆ ಸಮಯ ಕೇಳಲಾಗಿತ್ತು. ಆದರೆ, ಅವರು ಸಮಯ ನೀಡಿಲ್ಲ. ಅವರು ತಾಳ್ಮೆಯಿಂದ ಇದ್ದರೆ ಒಳ್ಳೆಯದು ಎಂದಿದ್ದಾರೆ. ಚುನಾವಣೆ ಪೂರ್ವದ ಆರು ತಿಂಗಳು ಮೊದಲೇ ಗುತ್ತಿಗೆದಾರರಿಗೆ ಕಾಮಗಾರಿ ತೆಗೆದುಕೊಳ್ಳದಂತೆ ಸೂಚನೆ ನೀಡಲಾಗಿತ್ತು. ಯೋಜನಾ ಮೊತ್ತ ದ್ವಿಗುಣವಾಗುತ್ತಿದೆ ಎಂದು ಎಚ್ಚರಿಸಲಾಗಿತ್ತು. ಇದೀಗ ಎಲ್ಲಾ ಕಾಮಗಾರಿ ಪರಿಶೀಲನೆ ಮಾಡಲು ತಡೆ ಹಿಡಿಯಲಾಗಿದೆ. ಎರಡು ಬಾರಿ ಪರಿಶೀಲನೆ ನಡೆಸಲಾಗುವುದು. ಎಲ್ಲವೂ ಸರಿಯಾಗಿದೆ ಎಂದು ದೃಢಪಟ್ಟರೆ ಮಾತ್ರ ಕಾಮಗಾರಿ ಆರಂಭಿಸುವುದಕ್ಕೆ ಅವಕಾಶ ನೀಡಲಾಗುವುದು ಎಂದು ಹೇಳಿದರು.

ಅಕ್ಕಿಭಾಗ್ಯ ಕಾಂಗ್ರೆಸ್‌ ಸ್ವಯಂಕೃತ ಅಪರಾಧ, ಕೇಂದ್ರದ ಮೇಲೆ ಗೂಬೆ ಕೂರಿಸಲೆತ್ನ: ಎಚ್‌ಡಿಕೆ

ಬಿಬಿಎಂಪಿಯಲ್ಲಿ ಏನಾಗಿದೆ ಎಂಬುದು ಎಲ್ಲರಿಗೂ ತಿಳಿದಿದೆ. ಆರ್‌.ಆರ್‌.ನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಮಗಾರಿ ನಡೆಸದೇ .123 ಕೋಟಿ ಬಿಲ್‌ ಪಾವತಿ ಆಗಿರುವ ಬಗ್ಗೆ ಲೋಕಾಯುಕ್ತ ತನಿಖೆಯಲ್ಲಿ ದೃಢಪಟ್ಟಿದ್ದು, ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಇನ್ನು ಬಿಡಿಎನಲ್ಲಿಯೂ ಎಸ್‌ಐಟಿ ರಚನೆ ಮಾಡಿ ತನಿಖೆ ಮಾಡುವ ಅವಶ್ಯಕತೆ ಇದೆ ಎಂದರು. ಈ ಬಗ್ಗೆ ಯಾರು ಎಷ್ಟೇ ಒತ್ತಡ ತಂದರೂ ಪರವಾಗಿಲ್ಲ. ನಮ್ಮ ಸರ್ಕಾರ ತನಿಖೆ ನಡೆಸುವ ನಿರ್ಧಾರ ತೆಗೆದುಕೊಂಡಿದೆ. ಅದರಂತೆ ತನಿಖೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದರು. ಎಲ್ಲಾ ಇಲಾಖೆಗಳಲ್ಲಿ ವರ್ಗಾವಣೆ ದಂಧೆಗೆ ರೇಟ್‌ ಫಿಕ್ಸ್‌ ಆಗಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, ಅವರು ತಡ ಮಾಡದೇ ಲೋಕಾಯುಕ್ತಕ್ಕೆ ದೂರು ನೀಡಲಿ ಎಂದು ಸವಾಲು ಹಾಕಿದರು.

ಅನ್ನಭಾಗ್ಯ ವಿಫಲಗೊಳಿಸಲು ಬಿಜೆಪಿ ಯತ್ನ: ಬಸವರಾಜ ಬೊಮ್ಮಾಯಿ ಅವರ ಧಮ್ಮು ತಾಕತ್ತಿಗೆ ರಾಜ್ಯದ ಜನ ಚುನಾವಣೆಯಲ್ಲೇ ಉತ್ತರ ಕೊಟ್ಟಿದ್ದಾರೆ. ನಾವು ಜನರಿಗೆ ಕೊಟ್ಟಿರುವ ಮಾತಿನಂತೆ ಹೇಗಾದರೂ ಅಕ್ಕಿ ಖರೀದಿಸಿ ತಂದು ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿಯನ್ನು ಕೊಟ್ಟೇ ಕೊಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚುವರಿ 5 ಕೆಜಿ ಖರೀದಿಗೆ ಆಹಾರ ನಿಗಮ ಆರಂಭದಲ್ಲಿ ಒಪ್ಪಿಗೆ ನೀಡಿತ್ತು. ಆದರೆ ಈಗ ಅಕ್ಕಿ ನೀಡದ ಮೂಲಕ ರಾಜಕೀಯ ಉದ್ದೇಶದಿಂದ ಅನ್ನಭಾಗ್ಯ ಯೋಜನೆ ವಿಫಲಗೊಳಿಸಲು ಬಿಜೆಪಿ ಹೊರಟಿದೆ. 

ಜನ​ಸ್ನೇಹಿ ಆಡ​ಳಿತ ನೀಡಿ, ಇಲ್ಲ ನಿಮ್ಮ ದಾರಿ ನೋಡಿ​ಕೊಳ್ಳಿ: ಸಂಸದ ಸುರೇಶ್‌ ಖಡಕ್‌ ವಾರ್ನಿಂಗ್‌

ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲದಿದ್ದರೆ ಕರ್ನಾಟಕಕ್ಕೆ ಕೇಂದ್ರದ ಬೆಂಬಲ ಇರುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಚುನಾವಣೆ ಸಮಯದಲ್ಲಿ ಹೇಳಿದ್ದರು. ಈಗ ಹಾಗೇ ಮಾಡುತ್ತಿದ್ದಾರೆ. ಆದರೆ, ಅವರು ಏನು ಮಾಡಿದರೂ ನಮ್ಮ ಯೋಜನೆ ವಿಫಲಗೊಳಿಸಲಾಗುವುದಿಲ್ಲ. ನಾವು ನುಡಿದಂತೆ ನಡೆಯುತ್ತೇವೆ. ನಮ್ಮ ಮುಖ್ಯಮಂತ್ರಿ ಅವರು ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿಸಲು ಪ್ರಯತ್ನಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹೇಗಾದರೂ ಮಾಡಿ ಅಕ್ಕಿ ಖರೀದಿಸಿ ತಂದು ಬಡ ಜನರಿಗೆ ತಲಾ 10 ಕೆ.ಜಿ ಅಕ್ಕಿ ಕೊಟ್ಟೇ ಕೊಡುತ್ತೇವೆ ಎಂದರು.