ಎ.ನಾರಾಯಣಸ್ವಾಮಿಗೆ ಟಿಕೆಟ್ ತಪ್ಪುತ್ತೆ ಎಂಬುದು ಊಹಾಪೋಹ: ಬಸವರಾಜ ಬೊಮ್ಮಾಯಿ
ಚಿತ್ರದುರ್ಗದ ಹಾಲಿ ಸಂಸದ ಹಾಗೂ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರಿಗೆ ಲೋಕಸಭೆಗೆ ಸ್ಪರ್ಧಿಸಲು ಟಿಕೆಟ್ ತಪ್ಪುತ್ತದೆ ಎಂಬುದು ಊಹಾಪೋಹವೆಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಚಿತ್ರದುರ್ಗ (ಮಾ.16): ಚಿತ್ರದುರ್ಗದ ಹಾಲಿ ಸಂಸದ ಹಾಗೂ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರಿಗೆ ಲೋಕಸಭೆಗೆ ಸ್ಪರ್ಧಿಸಲು ಟಿಕೆಟ್ ತಪ್ಪುತ್ತದೆ ಎಂಬುದು ಊಹಾಪೋಹವೆಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಲ್ಲಿನ ಮಾದಾರ ಗುರುಪೀಠಕ್ಕೆ ಭೇಟಿ ನೀಡಿ ಮಾದಾರ ಶ್ರೀಗಳ ಜೊತೆ ಚರ್ಚಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿತ್ರದುರ್ಗ ಲೋಕಸಭಾ ಟಿಕೆಟ್ ಘೋಷಣೆ ಕುರಿತು ಪಾರ್ಲಿಮೆಂಟ್ರಿ ಬೋರ್ಡ್ ಕಮಿಟಿಯಲ್ಲಿ ಚರ್ಚೆ ಆಗಿದೆ. ಮಾದಾರ ಶ್ರೀಗಳಿಗೆ ಟಿಕೆಟ್ ನೀಡುವಂತೆ ನಾನು ಎಲ್ಲಿಯೂ ಚರ್ಚೆ ಮಾಡಿಲ್ಲ.
ಬಿಜೆಪಿಯ ಎಲ್ಲ ನಿಷ್ಠಾವಂತರಿಗೆ ಟಿಕೆಟ್ ಕೊಡಲಾಗಿದೆ. ಉಳಿದ ಕ್ಷೇತ್ರಗಳ ಟಿಕೆಟ್ ನಾಳೆ ಅಥವಾ ನಾಡಿದ್ದು ಪ್ರಕಟವಾಗುವ ಸಾಧ್ಯತೆ ಇದೆ ಎಂದರು. ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಸಭೆ ಕರೆದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈಶ್ವರಪ್ಪ ಅವರೊಂದಿಗೆ ನಾನು, ನಮ್ಮ ವರಿಷ್ಠರು ಮಾತನಾಡಿದ್ದೇವೆ. ಎಲ್ಲಾ ಸರಿಹೋಗುತ್ತದೆ ಎಂಬ ಭರವಸೆ ಇದೆ. ಹಾವೇರಿ ಸಂಸದ ಶಿವಕುಮಾರ ಉದಾಸಿ ಕೂಡ ನಮ್ಮ ಜೊತೆಗೆ ಬರುತ್ತಾರೆ ಎಂದರು. ನಾನು ಕಳೆದ 34 ವರ್ಷಗಳಿಂದ ರಾಜಕಾರಣದಲ್ಲಿದ್ದೇನೆ. ನನಗೆ ದೊಡ್ಡ ಪ್ರಮಾಣದ ಬೆಂಬಲಿಗರಿದ್ದಾರೆ.
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಎಂಎಸ್‌ಪಿ ನಿಗದಿ ನೆನಪಾಗಲಿಲ್ಲವೇಕೆ?: ಮಾಜಿ ಸಿಎಂ ಬೊಮ್ಮಾಯಿ
ನಾನು ಎರಡು ಬಾರಿ ಸ್ಥಳೀಯ ಸಂಸ್ಥೆಗಳಿಂದ ಪರಿಷತ್ ಸದಸ್ಯ ನಾಗಿಯೂ ಆಯ್ಕೆಯಾಗಿ ಜನರ ಜೊತೆಗಿದ್ದು, ಕೆಲಸ ಮಾಡಿರುವುದರಿಂದ ಸಾಕಷ್ಟು ಜನ ಬೆಂಬಲಿಗರಿದ್ದಾರೆ ಎಂದರು. ಇದೇ ಸಂದರ್ಭದಲ್ಲಿ ಬೊಮ್ಮಾಯಿಗೆ ಶಾಲು ಹೊದಿಸಿ ಮಾದಾರ ಚನ್ನಯ್ಯಶ್ರೀ ಗೌರವಿಸಿದರು. ಈ ಬಾರಿ ಬೊಮ್ಮಾಯಿ ಅವರನ್ನು ಬೆಂಬಲಿಸುವಂತೆ ಹಾವೇರಿ ಭಾಗದ ದಲಿತ ಮುಖಂಡರಿಗೆ ಸ್ವಾಮೀಜಿ ಕರೆ ನೀಡಿದರು. ಮಾಜಿ ಸಚಿವ ಸಿಸಿ ಪಾಟೀಲ್ ಇದ್ದರು.
ಬಿಎಸ್‌ವೈ ರಾಜಕೀಯಕ್ಕೆ ಕಳಂಕ ತರಲು ಪ್ರಯತ್ನ: ಬಿಎಸ್‌ವೈ ಮೇಲೆ ದಾಖಲಾಗಿರುವ ಫೋಕ್ಸೋ ಪ್ರಕರಣ ರಾಜಕೀಯದಲ್ಲಿ ಕಳಂಕ ತರುವ ಯತ್ನವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಗೃಹ ಸಚಿವ ಪರಮೇಶ್ವರ ಹೇಳಿಕೆ ನೀಡಿದ್ದು, ದೂರು ದಾಖಲಾದ ತಕ್ಷಣ ಕ್ರಮ ಕೈಗೊಳ್ಳಲಾಗದು.
ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಕೆಲಸ ಮಾಡಲ್ಲ: ಬಿ.ಶ್ರೀರಾಮುಲು ಲೇವಡಿ
ಜವಾಬ್ದಾರಿಯಿಂದ ತನಿಖೆ ನಡೆಸಲಾಗುವುದೆಂದು ಹೇಳಿರುವುದು ಸರಿಯಾಗಿದೆ ಎಂದರು. ದೂರು ನೀಡಿದ ಮಹಿಳೆ ಮಾನಸಿಕ ಅಸ್ವಸ್ಥೆ ಎಂದು ಹೇಳಲಾಗುತ್ತಿದೆ. ಹಿಂದೆ ಅನೇಕರ ಮೇಲೆ ಇದೇ ರೀತಿ ದೂರು ಕೊಟ್ಟಿದ್ದರೆಂಬ ಮಾಹಿತಿ ಇದೆ. ಪ್ರಕರಣ ದಾಖಲಿಸಿರುವುದರ ಹಿಂದೆ ಯಾವುದೇ ಸದುದ್ದೇಶ ಇಲ್ಲ. ಚುನಾವಣೆ ವೇಳೆ ಈ ರೀತಿಯ ಪ್ರಯತ್ನ ನಡೆಯುತ್ತಿರುತ್ತವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.