Asianet Suvarna News Asianet Suvarna News

ಕನ್ನಡ ಭಾಷೆ ಕಡ್ಡಾಯ ಅನುಷ್ಠಾನ ಕಾಯ್ದೆಗೆ ವೇಗ: ಸಚಿವ ಶಿವರಾಜ್‌ ತಂಗಡಗಿ

ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಅನುಮೋದನೆಗೊಂಡಿರುವ ವಿಧೇಯಕಕ್ಕೆ ಸಂಬಂಧಿಸಿದಂತೆ ಕಾಯ್ದೆ ಹಾಗೂ ನಿಯಮಗಳನ್ನು ರೂಪಿಸುವ ಕೆಲಸಕ್ಕೆ ವೇಗ ನೀಡಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಖಾತೆ ಸಚಿವ ಶಿವರಾಜ್‌ ಎಸ್‌.ತಂಗಡಗಿ ಅವರು ಅಧಿಕಾರಿಗಳಿಗೆ ಸೂಚಿಸಿದರು. 

Speed Up Kannada Language Compulsory Implementation Act Says Minister Shivaraj Tangadagi gvd
Author
First Published Jun 2, 2023, 4:00 AM IST

ಬೆಂಗಳೂರು (ಜೂ.02): ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಅನುಮೋದನೆಗೊಂಡಿರುವ ವಿಧೇಯಕಕ್ಕೆ ಸಂಬಂಧಿಸಿದಂತೆ ಕಾಯ್ದೆ ಹಾಗೂ ನಿಯಮಗಳನ್ನು ರೂಪಿಸುವ ಕೆಲಸಕ್ಕೆ ವೇಗ ನೀಡಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಖಾತೆ ಸಚಿವ ಶಿವರಾಜ್‌ ಎಸ್‌.ತಂಗಡಗಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಗುರುವಾರ ಜೆ.ಸಿ. ರಸ್ತೆಯಲ್ಲಿರುವ ಕನ್ನಡ ಭವನದ ಅಂತರಂಗ ಸಭಾ ಭವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ವ್ಯಾಪ್ತಿಗೆ ಬರುವ ಇಲಾಖೆಗಳ ಮುಖ್ಯಸ್ಥರು ಹಾಗೂ ಅಧಿಕಾರಿಗಳ ಸಭೆ ನಡೆಸಿ ಇಲಾಖೆ, ವಿವಿಧ ಅಕಾಡೆಮಿ ಮತ್ತು ಪ್ರಾಧಿಕಾರಗಳು ಅನುಷ್ಠಾನಗೊಳಿಸುತ್ತಿರುವ ಯೋಜನೆಗಳ ಬಗ್ಗೆ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕನ್ನಡ ಕಡ್ಡಾಯಕ್ಕೆ ಸಂಬಂಧಿಸಿದ ವಿಧೇಯಕಕ್ಕೆ ಸಂಬಂಧಿಸಿದಂತೆ ಕಾಲಮಿತಿಯಲ್ಲಿ ಕಾಯ್ದೆಗಳು ರೂಪುಗೊಳ್ಳಬೇಕು. ಕನ್ನಡ ಭಾಷೆಯ ಅಸ್ಮಿತೆಯನ್ನು ಕಾಪಾಡಲು ಹಾಗೂ ಕನ್ನಡ ನಾಡು-ನುಡಿ-ಪರಂಪರೆಯ ಉಳಿವಿಗೆ ಅಗತ್ಯವಾದ ಎಲ್ಲಾ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಅಧಿಕಾರಿಗಳು ಪ್ರಾಮಾಣಿಕವಾದ ಪ್ರಯತ್ನ ಮಾಡಬೇಕೆಂದು ಸೂಚಿಸಿದರು. ಖಾಸಗಿ ಸಂಸ್ಥೆಗಳಲ್ಲಿ ಹಾಗೂ ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡವನ್ನು ಬಳಸುವುದರ ಬಗ್ಗೆ ಸಂಬಂಧಪಟ್ಟಪ್ರಾಧಿಕಾರ ಮತ್ತು ಇಲಾಖೆಗಳು ಪರಿಶೀಲನೆ ನಡೆಸಬೇಕು. ಕನ್ನಡಿಗರಿಗೆ ಉದ್ಯೋಗವಕಾಶವನ್ನು ದೊರಕಿಸಬೇಕಾದ ನಿಟ್ಟಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹೆಚ್ಚು ಶ್ರಮ ವಹಿಸಬೇಕು. ಅದಕ್ಕೆ ಸರ್ಕಾರದಿಂದ ಬೇಕಾದ ಕಾನೂನಾತ್ಮಕ ನೆರವನ್ನು ಒದಗಿಸಲು ಶೀಘ್ರದಲ್ಲಿ ಸಂಬಂಧಪಟ್ಟವರ ಸಭೆ ಕರೆಯಲಾಗುವುದೆಂದು ಹೇಳಿದರು.

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು: ಶಾಸಕ ಹರೀಶ್‌ ಪೂಂಜ

ಹಾರ- ತುರಾಯಿ ಬದಲು ಪುಸ್ತಕ ನೀಡಿ: ನನ್ನನ್ನು ಭೇಟಿ ಮಾಡಲು ಬರುವ ಯಾರೇ ಆದರೂ ಹಾರ-ತುರಾಯಿ, ಶಾಲು, ಪೇಟ ಇತ್ಯಾದಿಗಳಿಂದ ಸನ್ಮಾನ ಮಾಡುವುದನ್ನು ನಾನು ಬಯಸುವುದಿಲ್ಲ . ಅದರ ಬದಲಾಗಿ ಒಂದು ಒಳ್ಳೆಯ ಸಾಹಿತ್ಯ ಕೃತಿಯನ್ನು ಕೊಟ್ಟರೆ ಉತ್ತಮ. ಈ ರೀತಿ ನನಗೆ ನೀಡಲಾಗುವ ಎಲ್ಲಾ ಪುಸ್ತಕಗಳನ್ನು ಸಂಗ್ರಹಿಸಿ ಓದುವ ಆಸಕ್ತಿ ಉಳ್ಳ ಮಕ್ಕಳಿಗೆ ಅದನ್ನು ನೀಡಲು ಬಯಸುತ್ತೇನೆ. ಇಲ್ಲವೇ ಆಸಕ್ತ ಶಾಲಾ, ಕಾಲೇಜಿನ ಗ್ರಂಥಾಲಯಕ್ಕೆ ಕೊಡುಗೆಯಾಗಿ ನೀಡುತ್ತೇನೆ ಎಂದು ಸಚಿವರು ಹೇಳಿದರು. ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಡಾ. ಎನ್‌. ಮಂಜುಳಾ, ಇಲಾಖೆಯ ನಿರ್ದೇಶಕರಾದ ವಿಶ್ವನಾಥ ಪಿ.ಹಿರೇಮಠ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಜನತೆಗೆ ನೀಡಿದ ಭರವಸೆ ಶೀಘ್ರ ಈಡೇರಿಕೆ: ರಾಜ್ಯದ ಬೊಕ್ಕಸಕ್ಕೆ ಎಷ್ಟುಆರ್ಥಿಕ ಹೊರೆಯಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯ,ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಜನತೆಗೆ ನೀಡಿರುವ 5 ಗ್ಯಾರಂಟಿಗಳನ್ನು ಈಡೇರಿಸಲು ಕ್ರಮ ಕೈಗೊಳ್ಳಲಿದ್ದಾರೆ ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಹಿಂದುಳಿದ ವರ್ಗ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದರು. ಪಟ್ಟಣದ ಮಾರ್ಗವಾಗಿ ಇಲಕಲ್‌ ಕಡೆಗೆ ಹೊರಟಿದ್ದ ಸಂದರ್ಭದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದರು, ಹೊಸ ಸರ್ಕಾರವೆಂಬ ಕೂಸು ಈಗಷ್ಟೇ ಹುಟ್ಟಿದೆ.ಚುನಾವಣಾ ಪೂರ್ವದಲ್ಲಿ ನಾವು ನೀಡಿದ್ದ ಗ್ಯಾರಂಟಿ ಭರವಸೆ ಈಡೇರಿಸಲು ಮುಂದೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ ನಿರ್ಣಯ ಕೈಗೊಳ್ಳಲಿದ್ದಾರೆ ಎಂದರು.

ಫುಲ್ ಡ್ರಿಂಕ್ಸ್ ಮಾಡಿ ಆಸ್ಪತ್ರೆಗೆ ಬಂದ ವೈದ್ಯ ಬೆಡ್ ಮೇಲೆ ಸ್ಲೀಪಿಂಗ್: ಅನಸ್ತೇಷಿಯಾ ಪಡೆದ ಮಹಿಳೆಯರ ಗತಿ ಏನಾಯ್ತು?

ಬಿಜೆಪಿಗೆ ಚುನಾವಣೆಯಲ್ಲಿ ಮತದಾರರು ಬುದ್ಧಿ ಕಲಿಸಿದ್ದಾರೆ. ಮುಂದೆಯೂ ಕಲಿಸುತ್ತಾರೆ. ಈಗ ರಾಜ್ಯದ ಜನ,ಲೋಕಸಭಾ ಚುನಾವಣೆಯಲ್ಲಿ ದೇಶದ ಜನ ತಕ್ಕ ಪಾಠ ಕಲಿಸಿ ಬಿಜೆಪಿಯನ್ನು ಮನೆಗೆ ಕಳುಹಿಸುತ್ತಾರೆ. ಜಿಲ್ಲೆಯಲ್ಲಿ 5 ಸ್ಥಾನಗಳಲ್ಲೂ ಕಾಂಗ್ರೆಸ್‌ ಗೆಲ್ಲಬೇಕಿತ್ತು. ಆದರೆ 3ರಲ್ಲಿ ಮಾತ್ರ ಗೆಲುವು ಸಾಧಿಸಿದ್ದು, 2 ಕಡೆ ಸೋತಿದ್ದೇವೆ. ಸೋತ ಅಭ್ಯರ್ಥಿಗಳ ಬಳಿ ಸಹ ಚರ್ಚಿಸಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ರಾಘವೇಂದ್ರ ಭಜಂತ್ರಿ,ಚನ್ನಪ್ಪ ನಾಲಗಾರ, ಅಡವೇಶ ನಾಯಕ, ಅಡಿವೇಶ ನಾಯಕ,ತೊಂಡಪ್ಪ ಚೂರಿ, ಅಂಬರೀಶ್‌ ತೋಟದ, ರಾಜು ದೊಡ್ಡಮನಿ, ಡಾ.ಜೀವನಸಾಬ ಬಿನ್ನಾಳ ಸೇರಿದಂತೆ ಇನ್ನಿತರ ಇದ್ದರು.

Follow Us:
Download App:
  • android
  • ios