ಫೆ.16ರಂದು ಸಿದ್ದರಾಮಯ್ಯರಿಂದ ರಾಜ್ಯ ಬಜೆಟ್ ಮಂಡನೆ: ಸಚಿವ ಎಚ್.ಕೆ.ಪಾಟೀಲ್
ಆರ್ಥಿಕ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.16ರಂದು ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಫೆ.12ರಿಂದ ವಿಧಾನಮಂಡಲ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಫೆ.23ಕ್ಕೆ ಅಂತ್ಯವಾಗಲಿದೆ ಎಂದು ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಬೆಂಗಳೂರು (ಜ.19): ಆರ್ಥಿಕ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.16ರಂದು ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಫೆ.12ರಿಂದ ವಿಧಾನಮಂಡಲ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಫೆ.23ಕ್ಕೆ ಅಂತ್ಯವಾಗಲಿದೆ ಎಂದು ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಕಾರ್ಮಿಕರಿಗೆ ಮಂಡಳಿ: ರಾಜ್ಯದ ಚಾಲಕರು ಸೇರಿದಂತೆ ಸಾರಿಗೆ ವಲಯದಲ್ಲಿ ಕೆಲಸ ಮಾಡುತ್ತಿರುವವರಿಗಾಗಿ ಹೊಸದಾಗಿ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಈ ಸಂಬಂಧ ಅಧಿವೇಶನದಲ್ಲಿ ಮಸೂದೆ ಮಂಡಿಸಲು ತೀರ್ಮಾನಿಸಿದೆ. ಮಂಡಳಿಗೆ 300 ಕೋಟಿ ರು. ನಿಧಿಯನ್ನು ನೀಡಲಾಗುತ್ತದೆ.
ಸಂಸದ ಅನಂತ್ ಕುಮಾರ್ ಹೆಗಡೆ ನಾಲಿಗೆ ಅವರ ಕುಲ ಹೇಳುತ್ತದೆ: ಶಾಸಕ ಬಾಲಕೃಷ್ಣ
ಸಿಎಂ ಪೂರ್ಣಾವಧಿ ವಿಚಾರದಲ್ಲಿ ಪಕ್ಷದ ತೀರ್ಮಾನ ಅಂತಿಮ: ಮುಖ್ಯಮಂತ್ರಿ ಪೂರ್ಣಾವಧಿ ವಿಚಾರದಲ್ಲಿ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಉದ್ಘಾಟನೆ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಲೋಕಸಭೆಯಲ್ಲಿ ಅತೀ ಹೆಚ್ಚಿನ ಸ್ಥಾನಗಳನ್ನು ಗಳಿಸಿದರೆ ಸಿದ್ದರಾಮಯ್ಯನವರೇ 5 ವರ್ಷಗಳು ಮುಖ್ಯಮಂತ್ರಿಯಾಗಿ ಮುಂದುರೆಯುತ್ತಾರೆಂದು ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಈ ವಿಚಾರದಲ್ಲಿ ನಾನಾಗಲಿ, ನನ್ನ ಮಗನಾಗಲಿ ಏನೇ ಹೇಳಿದರೂ ಕೂಡ ಪಕ್ಷದ ವರಿಷ್ಠರೇ ತೀರ್ಮಾನ ಮಾಡುತ್ತಾರೆ ಎಂದರು.
ಕರ್ನಾಟಕದ ಗಡಿ ಭಾಗದ 865 ಗ್ರಾಮಗಳಲ್ಲಿ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ಜಾರಿ ಮಾಡಲು ಮುಂದಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು ಮಹಾರಾಷ್ಟ್ರ ಕರ್ನಾಟಕದೊಳಗೆ ಬರಬಾರದು ಎಂದು ಮುಖ್ಯ ಕಾರ್ಯದರ್ಶಿ ಈಗಾಗಲೇ ಮಹಾರಾಷ್ಟ್ರದವರಿಗೆ ಸೂಚಿಸಿದ್ದಾರೆ ಎಂದರು.
ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಸೀಟುಗಳನ್ನು 65% ರಷ್ಟು ಹಾಗೂ ಇತರೆ ರಾಜ್ಯಗಳಿಗೆ ಶೇ 35 ರಷ್ಟು ಸೀಟುಗಳು ಹಂಚಿಕೆಯಾಗಬೇಕೆಂದು ಕ್ರಮ ಕೈಗೊಳ್ಳಲಾಗಿದೆ. ಗುಣಮಟ್ಟದ ಶಿಕ್ಷಣದೊಂದಿಗೆ ದೇಶಪ್ರೇಮವನ್ನು ಮಕ್ಕಳಲ್ಲಿ ಬೆಳೆಸಲಾಗುವುದು. ಇಲ್ಲಿ ಕಲಿತವರು ಸೇನೆಗೆ ಸೇರ್ಪಡೆಯಾಗುವ ಅವಕಾಶವಿದೆ ಎಂದರು.
ಅರಣ್ಯ ರಕ್ಷಣೆಗೆ ಸಾಲುತ್ತಿಲ್ಲ ಸರ್ಕಾರದ ಅನುದಾನ: ಬಜೆಟ್‌ನಲ್ಲಿ ನೀಡುವ ಹಣದಲ್ಲಿ ಸಂಬಳಕ್ಕೇ 33% ಬೇಕು!
ಸುಮಾರು 110 ಎಕರೆ ಜಮೀನನ್ನು ಸರ್ಕಾರದ ವತಿಯಿಂದ ರಾಕ್ ಗಾರ್ಡನ್ ಮತ್ತು ವಸ್ತುಸಂಗ್ರಹಾಲಯ ನಿರ್ಮಾಣಕ್ಕಾಗಿ ಅನುದಾನವನ್ನೂ ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ನೀಡಲಾಗಿತ್ತು. ಮುಖ್ಯಮಂತ್ರಿಯಾಗಿ ಶಂಕುಸ್ಥಾಪನೆ ಮಾಡಿ, ಉದ್ಘಾಟನೆಯನ್ನೂ ಮಾಡುತ್ತಿದ್ದೇನೆ ಎಂದರು. ಎಲ್ಲವೂ ಉತ್ತಮವಾಗಿ ಮೂಡಿಬಂದಿದೆ. ಅವರ ಜ್ಞಾಪಕಾರ್ಥವಾಗಿ ಇಲ್ಲಿ ರಾಕ್ ಗಾರ್ಡನ್ ಮತ್ತು ವಸ್ತು ಸಂಗ್ರಹಾಲಯ ನಿರ್ಮಾಣವಾಗಿದೆ ಎಂದರು.