‘ನವೆಂಬರ್ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದೆ. ಬಳ್ಳಾರಿಯವರೇ ಆಗಿರುವ ಬಿ.ನಾಗೇಂದ್ರ ಅವರು ಮತ್ತೆ ಸಂಪುಟ ಸೇರಲಿದ್ದು, ಇನ್ನು 15 ದಿನಗಳಲ್ಲಿ ಅವರಿಗೆ ಸಚಿವರಾಗುವ ಯೋಗ ಕೂಡಿ ಬರಲಿದೆ. ಅವರು ಬಳ್ಳಾರಿ ಉಸ್ತುವಾರಿ ಸಚಿವರಾಗಲಿದ್ದಾರೆ’ ಎಂದು ಸಚಿವ ಜಮೀರ್ ಅಹ್ಮದ್ ತಿಳಿಸಿದ್ದಾರೆ.
ಬಳ್ಳಾರಿ : ‘ನವೆಂಬರ್ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದೆ. ಬಳ್ಳಾರಿಯವರೇ ಆಗಿರುವ ಬಿ.ನಾಗೇಂದ್ರ ಅವರು ಮತ್ತೆ ಸಂಪುಟ ಸೇರಲಿದ್ದು, ಇನ್ನು 15 ದಿನಗಳಲ್ಲಿ ಅವರಿಗೆ ಸಚಿವರಾಗುವ ಯೋಗ ಕೂಡಿ ಬರಲಿದೆ. ಅವರು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಲಿದ್ದಾರೆ’ ಎಂದು ವಸತಿ, ವಕ್ಫ್ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಶಾಸಕ ನಾಗೇಂದ್ರ ಅವರು ಬಳ್ಳಾರಿಯವರಾಗಿದ್ದು, ಈ ಭಾಗದ ಸಮಸ್ಯೆಗಳ ಬಗ್ಗೆ ಅವರಿಗೆ ಸಾಕಷ್ಟು ಮಾಹಿತಿ ಇದೆ. ಅವರು ಬಳ್ಳಾರಿ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಕನಸು ಹೊತ್ತಿದ್ದಾರೆ. ನಾಗೇಂದ್ರ ಅವರ ಮೇಲಿನ ಆರೋಪಗಳಿಗೆ ಸಂಬಂಧಿಸಿದಂತೆ ಎಸ್‌ಐಟಿ ಕ್ಲೀನ್ ಚಿಟ್ ನೀಡಿದ್ದು, ಬಹುಶಃ ಇನ್ನು 15 ದಿನಗಳಲ್ಲಿ ಅವರಿಗೆ ಸಚಿವರಾಗುವ ಯೋಗ ಕೂಡಿ ಬರಲಿದೆ ಎಂದು ತಿಳಿಸಿದರು.
ಇದೇ ವೇಳೆ, ಸಿಎಂ ಬದಲಾವಣೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಸದ್ಯ ಸಿಎಂ ಸ್ಥಾನ ಖಾಲಿ ಇಲ್ಲ. ಬದಲಾವಣೆ ವಿಚಾರ ಹೈಕಮಾಂಡ್‌ಗೆ ಬಿಟ್ಟದ್ದು ಎಂದರು.
ನವೆಂಬರ್ನಲ್ಲಿ ಮಹತ್ವದ ಬದಲಾವಣೆ ಸುಳಿವು ಕೊಟ್ಟ ಮುಖ್ಯಸಚೇತಕ ಸಲೀಂ ಅಹಮದ್
ನವದೆಹಲಿ: ರಾಜ್ಯದ ರಾಜಕೀಯದಲ್ಲಿ ಹಲವು ಪ್ರಮುಖ ಬೆಳವಣಿಗೆಗಳು ದಾಖಲಾಗಿದ್ದು, ವಿಧಾನಪರಿಷತ್ ಮುಖ್ಯಸಚೇತಕ ಸಲೀಂ ಅಹಮದ್, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಒಂದು ರೌಂಡ್ ದೆಹಲಿಗೆ ಹೋಗಿ ಬಂದಿದ್ದಾರೆ. ಇದೀಗ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ಬಗ್ಗೆ ಮುಖ್ಯಸಚೇತಕ ಸಲೀಂ ಅಹಮದ್ ಅವರು ಮಾಹಿತಿ ಬಹಿರಂಗಪಡಿಸಿದ್ದಾರೆ.
ಶೀಘ್ರದಲ್ಲೇ ಸಂಪುಟ ಪುನರ್ ರಚನೆ
ವಿಧಾನಪರಿಷತ್ ಮುಖ್ಯಸಚೇತಕ ಸಲೀಂ ಅಹಮದ್ ಅವರು ನವದೆಹಲಿಯಲ್ಲಿ ಮಾತನಾಡಿ, ನವೆಂಬರ್ ತಿಂಗಳಲ್ಲಿ ಸಂಪುಟ ಪುನರ್ ರಚನೆ ನಡೆಯಲಿದೆ ಎಂದು ಸ್ಪಷ್ಟಪಡಿಸಿದರು. ಒಟ್ಟು ಶೇ.50ರಷ್ಟು ಸಚಿವರು ಬದಲಾವಣೆಯಾಗುವ ಸಾಧ್ಯತೆ ಇದೆ. ಸಚಿವ ಸ್ಥಾನದಿಂದ ಹೊರಬರುವವರಿಗೆ ಪಕ್ಷದ ಸಂಘಟನೆ ಕೆಲಸ ವಹಿಸಲಾಗುತ್ತದೆ ಎಂದು ಅವರು ಹೇಳಿದರು. ಮುಂದುವರೆದು ಮಾತನಾಡಿ ಎರಡು ದಶಕಗಳಿಂದ ಕಿತ್ತೂರು ಕರ್ನಾಟಕ ಭಾಗದಲ್ಲಿ ಅಲ್ಪಸಂಖ್ಯಾತರಿಗೆ ಸಚಿವ ಸ್ಥಾನ ಸಿಕ್ಕಿಲ್ಲ. ಈ ಬಾರಿ ನನಗೆ ಸಚಿವ ಸ್ಥಾನ ಸಿಗುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.
